ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಕಡಿವಾಣ: ಕರ್ನಾಟಕದಲ್ಲಿ ತಾಲಿಬಾನ್ ಆಡಳಿತ ಎಂದು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಬೆಂಗಳೂರು, ಜೂನ್ 12: ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬರಿಗೂ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸುವ ಸ್ವಾತಂತ್ರ್ಯವಿದೆ. ಇದರಲ್ಲಿ ಕಾಂಗ್ರೆಸ್ ಸರ್ಕಾರ ಮೂಗು ತೂರಿಸುವುದನ್ನು ನೋಡಿದರೆ ಕರ್ನಾಟಕ ರಾಜ್ಯದಲ್ಲಿ ತಾಲಿಬಾನ್ ಆಡಳಿತ ನಡೆಯುತ್ತಿದೆ ಎಂದು ಕರ್ನಾಟಕ ಬಿಜೆಪಿ ಆಕ್ರೋಶ ಹೊರ ಹಾಕಿದೆ.

ಇತ್ತೀಚೆಗೆ ರಾಜ್ಯದ ಕಲಬುರಗಿಯಲ್ಲಿ ಜಿಲ್ಲೆಯಲ್ಲಿ ಕಾರ್ಯಕ್ರಮವೊಂದರಲ್ಲಿ ಜಿಲ್ಲೆಯ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಮಾತನಾಡಿ, ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್‌ಗೆ ಸರ್ಕಾರ ಬ್ರೇಕ್ ಹಾಕಲಿದೆ ಎಂದು ಹೇಳಿದ್ದರು.

Congress Is Cracking Down On Freedom Of Expression

ರಾಷ್ಟ್ರ ನಾಯಕರ ಕುರಿತು, ಸಮಾಜಕ್ಕೆ ಧಕ್ಕೆ ತರುವಂತಹ, ಅಶಾಂತಿಗೆ ಕಾರಣವಾಗುವಂತಹ ಅವಹೇಳನಕಾರಿ ಪೋಸ್ಟ್‌ ಹಾಕುವುದರ ವಿರುದ್ಧ ನಾವು ಕಡಿವಾಣ ಹಾಕಲಿದ್ದೇವೆ ಎಂದು ಅವರು ಹೇಳಿದ್ದರು.


ಚೀನಾ-ಪಾಕ್‌ನಲ್ಲಿ ಅಭಿವ್ಯಕ್ತಿ ಸ್ವಾತಂತ್ರಕ್ಕೆ ಜಾಗ ಇಲ್ಲ

ಇದೀಗ ಸಚಿವ ಪ್ರಿಯಾಂಕ್ ಹೇಳಿಕೆಯನ್ನು ಪೋಸ್ಟ್ ಮಾಡಿರುವ ಕರ್ನಾಟಕ ಬಿಜೆಪಿಯು ಕಾಂಗ್ರೆಸ್ ಆಡಳಿತವನ್ನು ತಾಲಿಬಾನ್ ಆಡಳಿತಕ್ಕೆ ಹೋಲಿಕೆ ಮಾಡಿ ಟೀಕಿಸಿದೆ. ಅಭಿವ್ಯಕ್ತಿ ಸ್ವಾತಂತ್ರ್ಯದ ಧಮನಕಾರಿ ನೀತಿಗೆ ಕಾಂಗ್ರೆಸ್ ಪಕ್ಷದ ಸಂಸ್ಕೃತಿ ಎಂದು ತರಾಟೆಗೆ ತೆಗೆದುಕೊಂಡಿದೆ.

ರಾಜ್ಯದ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಕಾಂಗ್ರೆಸ್‌ನಿಂದ ಛಾಟಿ ಏಟು ಬೀಳುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಯಾವುದು ಆಕ್ಷೇಪಾರ್ಹ, ಯಾವುದು ಅವಹೇಳನಕಾರಿ ಎಂದು ಸರ್ಟಿಫಿಕೇಟ್ ಕೊಡುವುದು ಕರ್ನಾಟಕ ಕಾಂಗ್ರೆಸ್ ಸರ್ಕಾರದ ಕೆಲವಲ್ಲ ಎಂದು ಬಿಜೆಪಿ ದೂರಿದೆ.

ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬರಿಗೂ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸುವ ಸ್ವಾತಂತ್ರ್ಯವಿದೆ. ಇದರಲ್ಲಿ ಮೂಗು ತೂರಿಸುತ್ತಿರುವ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಪೂರ್ವಾಗ್ರಹ ಪೀಡಿತವಾಗಿದೆ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ.

ಚೀನಾ, ಪಾಕಿಸ್ತಾನ ದೇಶಗಳಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಜಾಗ ಇಲ್ಲದಾಗಿದೆ. ಅದೇ ರೀತಿ ಇಲ್ಲಿಯೂ ಆಗಿದೆ ಎಂದು ಬಿಜೆಪಿ ಹೋಲಿಸಿದೆ. ಆ ದೇಶಗಳಲ್ಲಿ ಒಂದು ವಿಚಾರ, ವ್ಯಕ್ತಿಯ ಕುರಿತು ಟೀಕಿಸಿದರೆ, ಗಟ್ಟಿ ಧ್ವನಿಯಿಂದ ಅಭಿಪ್ರಾಯ ವ್ಯಕ್ತಪಡಿಸಿದರೆ, ಇಲ್ಲವೇ ಪೋಸ್ಟ್ ಹಾಕಿದರೆ ಅಂತವರಿಗೆ ಶಿಕ್ಷೆ ನೀಡಲಾಗುತ್ತದೆ. ಅವರ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕಲಾಗುತ್ತದೆ.

ಈಗಾಗಲೇ ನಡೆದ ಕೆಲವು ಘಟನೆಗಳು

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಕೆಲವು ಕಡೆಗಳ ಸಾಮಾಜಿಕ ಜಾಲತಾಣಗಳಲ್ಲಿನ ಪೋಸ್ಟ್ ವಿಚಾರವಾಗೇ ಗಲಾಟೆಗಳಾಗಿವೆ. ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದಾನೆ ಎಂಬ ಕಾರಣಕ್ಕೆ ಒಬ್ಬ ವ್ಯಕ್ತಿಯನ್ನು ಸಿದ್ದರಾಮಯ್ಯನವರ ಪೋಟೋ ಮುಟ್ಟಿಸಿ ಕ್ಷಮೆ ಕೇಳಿಸಿದ್ದರು. ಇಂತದ್ದೇ ವಿಚಾರಕ್ಕೆ ಕೆಲವೆಡೆ ಹಲ್ಲೆಗಳು ನಡೆದವು.

ಕಾಂಗ್ರೆಸ್ ಚುನಾವಣೆಯಲ್ಲಿ ಗೆಲ್ಲುತ್ತಿದ್ದಂತೆ ಬೆಳ್ತಂಗಡಿ, ಬೆಳಗಾವಿ ಸೇರಿ ರಾಜ್ಯದ ಮೂರು ಕಡೆಗಳಲ್ಲಿ ಪುಂಡರು ವಿರೋಧಿ ಪಾಕಿಸ್ತಾನ ಪರ ಜಿಂದಾಬಾದ್ ಎಂದು ಘೋಷಣೆ ಕೂಗಿದರು. ಇತ್ತೀಚೆಗೆ ಭಾರತದ ಪರ ಘೋಷಣೆ ಕೂಗಿದ್ದಕ್ಕೆ ವ್ಯಕ್ತಿಯೊಬ್ಬರಿಗೆ ಚಾಕುವಿನಿಂದ ಇರಿಯಲಾಗಿತ್ತು. ಆಗಲೂ ಸಹ ಬಿಜೆಪಿ ನಾಯಕರು ಸೇರಿದಂತೆ ಬಲಪಂಥಿಯರು ಕಾಂಗ್ರೆಸ್ ವಿರುದ್ಧ ಕಿಡಿ ಕಾರಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+