ಕರ್ನಾಟಕದಲ್ಲಿ ಕಾಂಗ್ರೆಸ್ ಸುಳ್ಳಿನ ಸರ್ಕಾರ ನಡೆಸುತ್ತಿದೆ: ಸಂಸದ ತೇಜಸ್ವಿ ಸೂರ್ಯ

ಬೆಂಗಳೂರು, ಜೂನ್‌ 16: ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ಉಚಿತ ಆಹಾರ ಧಾನ್ಯ ನೀಡುವ ಯೋಜನೆಯಾದ ಅನ್ನ ಭಾಗ್ಯ ಜಾರಿಗೆ ಕೇಂದ್ರವು ಅಡ್ಡಿಪಡಿಸುತ್ತಿದೆ ಎಂಬ ಕರ್ನಾಟಕ ಸರ್ಕಾರದ ಆರೋಪವನ್ನು ತಳ್ಳಿಹಾಕಿದ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ, ಕಾಂಗ್ರೆಸ್ ನೇತೃತ್ವದ ನಡೆಸುತ್ತಿರುವ ಸರ್ಕಾರ ಅರ್ಧ ಸತ್ಯಗಳ ಮೇಲೆ ನಡೆಯುತ್ತಿದೆ ಎಂದು ಹೇಳಿದ್ದಾರೆ.

ಜುಲೈ 1 ರಿಂದ ಉಚಿತವಾಗಿ ಆಹಾರ ಧಾನ್ಯಗಳನ್ನು ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳು ಮತ್ತು ಅಂತ್ಯೋದಯ ಕಾರ್ಡ್ ಹೊಂದಿರುವವರಿಗೆ 10 ಕೆ.ಜಿ.ಯನ್ನು ನೀಡುವ ಅನ್ನ ಭಾಗ್ಯ ಯೋಜನೆಯನ್ನು ಜಾರಿಗೆ ತರಲು ಕೇಂದ್ರ ಸರ್ಕಾರವು ರಾಜ್ಯಕ್ಕೆ ಅಕ್ಕಿ ಮಾರಾಟ ಮಾಡಲು ಭಾರತೀಯ ಆಹಾರ ನಿಗಮಕ್ಕೆ (ಎಫ್‌ಸಿಐ) ಅವಕಾಶ ನೀಡುತ್ತಿಲ್ಲ ಎಂದು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.

Congress is running a fake government in Karnataka: MP Tejasvi Surya

ಇದಕ್ಕೆ ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಉಚಿತ ಅನ್ನಭಾಗ್ಯ ನಿರಾಕರಿಸುತ್ತಿದೆ ಎಂಬ ಕಾಂಗ್ರೆಸ್ ಆರೋಪ ಸುಳ್ಳು. ಈ ಎಫ್‌ಸಿಐ (ಭಾರತೀಯ ಆಹಾರ ನಿಗಮ) ವಿಷಯಕ್ಕೆ ಸಂಬಂಧಿಸಿದಂತೆ ಕರ್ನಾಟಕದಲ್ಲಿ ಕಾಂಗ್ರೆಸ್ ಅರ್ಧ ಸುಳ್ಳಿನ ಸರ್ಕಾರವನ್ನು ನಡೆಸುತ್ತಿದೆ ಎಂದು ಅವರು ಸುದ್ದಿ ಸಂಸ್ಥೆ ಎಎನ್‌ಐ ಜೊತೆ ಮಾತನಾಡುತ್ತಾ ಹೇಳಿದರು ಸಂಸದ ತೇಜಸ್ವಿ ಸೂರ್ಯ ಹೇಳಿದರು.

ರಾಷ್ಟ್ರೀಯ ಆಹಾರ ಭದ್ರತಾ ಕಾಯಿದೆಯಡಿ, ದೇಶದ ಇತರ ಭಾಗಗಳಂತೆ ಕರ್ನಾಟಕದ ಪ್ರತಿಯೊಬ್ಬ ವ್ಯಕ್ತಿಯೂ 5 ಕೆಜಿ ಆಹಾರ ಧಾನ್ಯಗಳಿಗೆ ಅರ್ಹರಾಗಿದ್ದಾರೆ. ಆದ್ದರಿಂದ ಕೇಂದ್ರವು ಕರ್ನಾಟಕಕ್ಕೆ ಉಚಿತ ಆಹಾರ ಧಾನ್ಯಗಳನ್ನು ನಿರಾಕರಿಸುತ್ತಿದೆ ಎಂಬ ಅವರ (ಕಾಂಗ್ರೆಸ್) ಆರೋಪ ಸುಳ್ಳು ಎಂದು ತೇಜಸ್ವಿ ಸೂರ್ಯ ಹೇಳಿದರು.

ಕರ್ನಾಟಕ ವಿಧಾನಸಭಾ ಚುನಾವಣೆಗೆ ಮುನ್ನ ಕಾಂಗ್ರೆಸ್ ನೀಡಿದ ಐದು ಚುನಾವಣಾ ಗ್ಯಾರಂಟಿಗಳಲ್ಲಿ ಅನ್ನ ಭಾಗ್ಯ ಯೋಜನೆಯೂ ಒಂದು. ರಾಜ್ಯದಲ್ಲಿ ಬಿಪಿಎಲ್ ಕುಟುಂಬಗಳ ಸದಸ್ಯರಿಗೆ ಈಗಾಗಲೇ ಐದು ಕೆಜಿ ಅಕ್ಕಿ ನೀಡಲಾಗುತ್ತಿದೆ. ಈಗ ಈ ಯೋಜನೆಯ ಮೂಲಕ ಕಾಂಗ್ರೆಸ್ ಉಚಿತ ಧಾನ್ಯವನ್ನು 10 ಕೆಜಿಗೆ ಹೆಚ್ಚಿಸಲು ಬಯಸಿದೆ.

Congress is running a fake government in Karnataka: MP Tejasvi Surya

ಅಕ್ಕಿ ನೀಡುವ ವಿಚಾರದಲ್ಲಿ ಕೇಂದ್ರ ಸರ್ಕಾರ ರಾಜಕೀಯ ನಿರ್ಧಾರ ಕೈಗೊಂಡು ಕನ್ನಡಿಗರ ಪಾಲನ್ನು, ಬಡವರ ಪಾಲನ್ನು ಕಸಿದುಕೊಂಡಿದೆ. ಕೇಂದ್ರ ಸರ್ಕಾರ ಕನ್ನಡಿಗರ, ಬಡವರ ವಿರೋಧಿ ಎನ್ನುವುದರಲ್ಲಿ ಯಾವುದೇ ಸಂಶಯ ಉಳಿದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದರು.

ಈ ವಿಚಾರವಾಗಿ ಟ್ವೀಟ್‌ ಮಾಡಿರುವ ಅವರು, ರಾಜ್ಯ ಸರ್ಕಾರ ಈಗಾಗಲೇ ಒಂದು ಗ್ಯಾರಂಟಿಯನ್ನು ಜಾರಿಮಾಡಿದ್ದು, ಜುಲೈ 1 ರಂದು ಅಂತ್ಯೋದಯ ಹಾಗೂ ಬಿಪಿಎಲ್‌ ಕಾರ್ಡುದಾರರಿಗೆ ಪ್ರತಿ ತಿಂಗಳು ತಲಾ 10 ಕೆಜಿ ಅಕ್ಕಿ ನೀಡಲು ತೀರ್ಮಾನಿಸಲಾಗಿದ್ದ ಹಿನ್ನೆಲೆಯಲ್ಲಿ ಭಾರತೀಯ ಆಹಾರ ಮಂಡಳಿ ಉಪ ಪ್ರಧಾನ ವ್ಯವಸ್ಥಾಪಕರಿಗೆ 2.28 ಲಕ್ಷ ಮೆ.ಟನ್ ಅಗತ್ಯವಿದೆ ಎಂದು ಕೋರಿ ಜೂನ್‌ 9 ರಂದು ಪತ್ರ ಬರೆಯಲಾಗಿತ್ತು ಎಂದು ಹೇಳಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+