ಕುತೂಹಲ ಕೆರಳಿಸಿದ ಆ.31ರ ಸಮನ್ವಯ ಸಮಿತಿ ಸಭೆ

Recommended Video

      ಸಿದ್ದರಾಮಯ್ಯನವರ ಸಮನ್ವಯ ಸಮಿತಿ ಸಭೆ ಆಗಸ್ಟ್ 31ರಂದು | ಕೆರಳಿದ ಕುತೂಹಲ | Oneindia Kannada

      ಬೆಂಗಳೂರು, ಆಗಸ್ಟ್ 28 : ಕಾಂಗ್ರೆಸ್-ಜೆಡಿಎಸ್ ಸರ್ಕಾರದಲ್ಲಿ ಎಲ್ಲವೂ ಸರಿ ಇಲ್ಲ ಎಂಬ ಸುದ್ದಿಯ ನಡುವೆಯೇ ಸಮನ್ವಯ ಸಮಿತಿ ಸಭೆಗೆ ದಿನಾಂಕ ನಿಗದಿಯಾಗಿದೆ. ಸಂಪುಟ ವಿಸ್ತರಣೆ ಸೇರಿದಂತೆ ವಿವಿಧ ವಿಚಾರಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಯುವ ನಿರೀಕ್ಷೆ ಇದೆ.

      ಸಮನ್ವಯ ಸಮಿತಿ ಅಧ್ಯಕ್ಷ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆಯಂತೆ ಸಭೆಗೆ ದಿನಾಂಕ ನಿಗದಿ ಮಾಡಲಾಗಿದೆ. ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡ್ಯಾನಿಶ್ ಅಲಿ ಅವರು ಆಗಸ್ಟ್ 31ರಂದು ಸಭೆ ನಡೆಸಲು ದಿನಾಂಕ ನಿಗದಿ ಮಾಡಿದ್ದಾರೆ.

      ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ, ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಡ್ಯಾನಿಶ್ ಅಲಿ ಅವರು ಸಮನ್ವಯ ಸಮಿತಿಯ ಸದಸ್ಯರಾಗಿದ್ದಾರೆ. ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಅವರನ್ನು ಸಮಿತಿಗೆ ಸೇರಿಸಲು ಇನ್ನೂ ಒಪ್ಪಿಗೆ ಸಿಕ್ಕಿಲ್ಲ.

      'ನಾನು ಮುಖ್ಯಮಂತ್ರಿಯಾಗಲು ಸಿದ್ಧ' ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಹೇಳಿಕೆ ನೀಡಿದ ಬಳಿಕ ನಡೆಯುತ್ತಿರುವ ಮೊದಲ ಸಮನ್ವಯ ಸಮಿತಿ ಸಭೆ ಇದಾಗಿದೆ. ಸಿದ್ದರಾಮಯ್ಯ ಹೇಳಿಕೆ ಬಗ್ಗೆ ಭಾರಿ ಚರ್ಚೆ ನಡೆಯುತ್ತಿದ್ದು, ಸಭೆಯಲ್ಲಿಯೂ ಚರ್ಚೆ ನಡೆಯುವ ನಿರೀಕ್ಷೆ ಇದೆ.

      ಕಳೆದ ವಾರವೇ ಸೂಚಿಸಿದ್ದರು

      ಕಳೆದ ವಾರವೇ ಸೂಚಿಸಿದ್ದರು

      ಕಳೆದ ವಾರವೇ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರು ಸಭೆಯ ದಿನಾಂಕ ನಿಗದಿ ಮಾಡಲು ಸೂಚಿಸಿದ್ದರು. ಆದರೆ, ಎಚ್.ಡಿ.ಕುಮಾರಸ್ವಾಮಿ ಮತ್ತು ಪರಮೇಶ್ವರ ಅವರು ಕೊಡಗು ಜಿಲ್ಲಾ ಪ್ರವಾಸದಲ್ಲಿದ್ದರು. ಆದ್ದರಿಂದ, ದಿನಾಂಕ ನಿಗದಿಯಾಗಿರಲಿಲ್ಲ.

      ಸೆಪ್ಟೆಂಬರ್ ಮೊದಲ ವಾರದಲ್ಲಿ ಸಿದ್ದರಾಮಯ್ಯ ಅವರು ವಿದೇಶ ಪ್ರವಾಸ ಕೈಗೊಳ್ಳಲಿದ್ದಾರೆ. ಪ್ರವಾಸಕ್ಕೂ ಮುನ್ನ ಸಭೆ ನಡೆಸಲಿದ್ದಾರೆ. ಆ.31 ರಂದು ಸಭೆ ನಡೆಯಲಿದೆ. ಕೆ.ಸಿ.ವೇಣುಗೋಪಾಲ್ ಅವರು ಕೇರಳದಿಂದ ಆಗಮಿಸಲಿದ್ದು. ಆ.31, ಸೆ.1ರಂದು ಕೆಪಿಸಿಸಿ ಪದಾಧಿಕಾರಿಗಳ ಜೊತೆ ಚರ್ಚೆ ನಡೆಸಲಿದ್ದಾರೆ.

      ಸಂಪುಟ ವಿಸ್ತರಣೆ ಪ್ರಮುಖ ವಿಚಾರ

      ಸಂಪುಟ ವಿಸ್ತರಣೆ ಪ್ರಮುಖ ವಿಚಾರ

      ಸಮನ್ವಯ ಸಮಿತಿ ಸಭೆಯಲ್ಲಿ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆ ಇದೆ. ಕಾಂಗ್ರೆಸ್‌ನ ಹಲವು ಶಾಸಕರು ಸಂಪುಟ ವಿಸ್ತರಣೆಗೆ ಒತ್ತಾಯ ಮಾಡುತ್ತಿದ್ದಾರೆ. ನಿಗಮ-ಮಂಡಳಿ ನೇಮಕದ ಬಗ್ಗೆಯೂ ಚರ್ಚೆ ನಡೆಯುವ ನಿರೀಕ್ಷೆ ಇದೆ.

      ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸೆ.15ರ ನಂತರ ದೆಹಲಿಗೆ ಬರುವಂತೆ ಕರ್ನಾಟಕದ ನಾಯಕರಿಗೆ ಸೂಚನೆ ನೀಡಿದ್ದಾರೆ. ಸಭೆಯಲ್ಲಿ ಸಂಪುಟ ವಿಸ್ತರಣೆ ಸೇರಿದಂತೆ ಅನೇಕ ವಿಚಾರಗಳ ಕುರಿತು ಚರ್ಚೆ ನಡೆಸಿ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಲು ಕಾಂಗ್ರೆಸ್‌ ನಾಯಕರು ನಿರ್ಧರಿಸಿದ್ದಾರೆ.

      ಬಿಬಿಎಂಪಿ ಮೇಯರ್ ಆಯ್ಕೆ

      ಬಿಬಿಎಂಪಿ ಮೇಯರ್ ಆಯ್ಕೆ

      ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮೇಯರ್ ಮತ್ತು ಉಪ ಮೇಯರ್ ಆಯ್ಕೆಗೆ ಸೆಪ್ಟೆಂಬರ್‌ನಲ್ಲಿ ಚುನಾವಣೆ ನಡೆಯಲಿದೆ. ಬಿಬಿಎಂಪಿಯಲ್ಲಿ ಮೈತ್ರಿ ಮುಂದವರೆಸುವ ಕುರಿತು ಸಮನ್ವಯ ಸಮಿತಿ ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದೆ.

      ಜೆಡಿಎಸ್ ಶಾಸಕ ಕೆ.ಗೋಪಾಲಯ್ಯ ಅವರು ಜೆಡಿಎಸ್ ಪಕ್ಷಕ್ಕೆ ಮೇಯರ್ ಸ್ಥಾನ ಬಿಟ್ಟುಕೊಡಬೇಕು ಎಂದು ಆಗ್ರಹಿಸಿದ್ದಾರೆ. ಮೇಯರ್ ಮತ್ತು ಉಪ ಮೇಯರ್ ಪಟ್ಟವನ್ನು ಹಂಚಿಕೆ ಮಾಡಿಕೊಳ್ಳುವ ಕುರಿತು ಸಭೆಯಲ್ಲಿ ಚರ್ಚೆ ನಡೆಯಲಿದೆ.

      ಸ್ಥಳೀಯ ಸಂಸ್ಥೆಗಳ ಚುನಾವಣೆ ಮೈತ್ರಿ

      ಸ್ಥಳೀಯ ಸಂಸ್ಥೆಗಳ ಚುನಾವಣೆ ಮೈತ್ರಿ

      ಆ.31ರಂದು 105 ಸ್ಥಳೀಯ ಸಂಸ್ಥೆ, ಮೈಸೂರು, ತುಮಕೂರು ಮತ್ತು ಶಿವಮೊಗ್ಗ ಮಹಾನಗರ ಪಾಲಿಕೆಗಳ ಚುನಾವಣೆ ನಡೆಯಲಿದೆ. ಚುನಾವಣೋತ್ತರ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದೆ.

      ಸಮನ್ವಯ ಸಮಿತಿಗೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮತ್ತು ಜೆಡಿಎಸ್ ಅಧ್ಯಕ್ಷ ಎಚ್.ವಿಶ್ವನಾಥ್ ಸೇರುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಸಭೆಯಲ್ಲಿ ಈ ಕುರಿತು ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+