ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೈತ್ರಿ ಸರ್ಕಾರದ ಒಂದು ವರ್ಷದ ಸಾಧನೆಯ ಪುಸ್ತಕ ಬಿಡುಗಡೆ

|
Google Oneindia Kannada News

ಬೆಂಗಳೂರು, ಜೂನ್ 20 : ಕರ್ನಾಟಕದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಒಂದು ವರ್ಷ ಪೂರೈಸಿದೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಸರ್ಕಾರದ ಸಾಧನೆಯ ಪುಸ್ತಕವನ್ನು ಬಿಡುಗಡೆ ಮಾಡಿದರು.

ಗುರುವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಎಚ್.ಡಿ.ಕುಮಾರಸ್ವಾಮಿ, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಅವರು 'ಮೈತ್ರಿ ಪರ್ವ' ಸರ್ಕಾರದ ಒಂದು ವರ್ಷದ ಸಾಧನೆಯ ಪುಸ್ತಕವನ್ನು ಬಿಡುಗಡೆ ಮಾಡಿದರು.

ಸಮ್ಮಿಶ್ರ ಸರ್ಕಾರಕ್ಕೆ ತಿಂಗಳು ಆರು: ಸಾಧನೆ-ಗುರಿಗಳು ಹತ್ತಾರು!ಸಮ್ಮಿಶ್ರ ಸರ್ಕಾರಕ್ಕೆ ತಿಂಗಳು ಆರು: ಸಾಧನೆ-ಗುರಿಗಳು ಹತ್ತಾರು!

Congress-JD(S) alliance govt one year achievement document release

ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ ಖರ್ಗೆ, ಆರೋಗ್ಯ ಸಚಿವ ಶಿವಾನಂದ ಎಸ್. ಪಾಟೀಲ್, ತೋಟಗಾರಿಕಾ ಸಚಿವ ಮನಗೂಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಡಾ.ಜಯಮಾಲಾ ಸೇರಿದಂತೆ ಹಲವು ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಪ್ರತಿದಿನವೂ ನೋವಿನಲ್ಲೇ ಕಳೆಯುತ್ತಿದ್ದೇನೆ: ಕುಮಾರಸ್ವಾಮಿ ಮತ್ತೆ ಭಾವುಕಪ್ರತಿದಿನವೂ ನೋವಿನಲ್ಲೇ ಕಳೆಯುತ್ತಿದ್ದೇನೆ: ಕುಮಾರಸ್ವಾಮಿ ಮತ್ತೆ ಭಾವುಕ

ಸಮಾರಂಭದಲ್ಲಿ ಮಾತನಾಡಿದ ಎಚ್.ಡಿ.ಕುಮಾರಸ್ವಾಮಿ ಅವರು, 'ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ಆತ್ಮಸಾಕ್ಷಿಗೆ ತಕ್ಕಂತೆ ಕೆಲಸ ಮಾಡಿದ್ದೇನೆ. ವಿಪಕ್ಷಗಳು ಸರ್ಕಾರ ಬಿದ್ದು ಹೋಗಲಿದೆ ಎಂದು ಬಿಂಬಿಸುತ್ತಿದ್ದರೂ ಅಧಿಕಾರಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡಿದ್ದೇನೆ' ಎಂದರು.

ಸಂಪುಟ ವಿಸ್ತರಣೆ : ಇಬ್ಬರು ಹೊಸ ಸಚಿವರಿಗೆ ಇನ್ನೂ ಖಾತೆ ಸಿಕ್ಕಿಲ್ಲಸಂಪುಟ ವಿಸ್ತರಣೆ : ಇಬ್ಬರು ಹೊಸ ಸಚಿವರಿಗೆ ಇನ್ನೂ ಖಾತೆ ಸಿಕ್ಕಿಲ್ಲ

'ವಿಪಕ್ಷದವರು ಹೇಳಿದರು ಎಂದು ನಾನ ಹಳ್ಳಿಗೆ ಹೋಗುತ್ತಿಲ್ಲ. ಪಂಚತಾರಾ ಹೋಟೆಲ್‌ನಲ್ಲಿ ಮಲಗಿದರೂ ನಿದ್ದೆ ಬರುತ್ತದೆ. ಕೆಲವರಿಗೆ ನಿದ್ದೆ ಬಾರದಿದ್ದರೆ ನಾನೇನು ಮಾಡಲಿ. ಮೊನ್ನೆ ಕೆಲವರು ನಿದ್ದೆ ಬಂದಿಲ್ಲ ಎಂದು ಮೌರ್ಯ ಸರ್ಕಲ್ ಬಳಿ ರಸ್ತೆಯಲ್ಲಿ ಮಲಗಿದ್ದರು' ಎಂದು ಬಿಜೆಪಿ ಅಹೋರಾತ್ರಿ ಪ್ರತಿಭಟನೆಗೆ ಕುಮಾರಸ್ವಾಮಿ ಟಾಂಗ್ ನೀಡಿದರು.

ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಅವರು ಮಾತನಾಡಿ, 'ಒಂದು ವರ್ಷದ ಅವಧಿಯಲ್ಲಿ ಸರ್ಕಾರ ಅನೇಕ ಏಳು ಬೀಳುಗಳನ್ನು ಕಂಡಿದೆ. ಬರ, ನೆರೆಯಂತಹ ಕಠಿಣ ಪರಿಸ್ಥಿತಿಯಲ್ಲಿ ಸರ್ಕಾರ ಎದುರಿಸಿದೆ. ಸಾಲಮನ್ನಾ ಯೋಜನೆಯ ಅಡಿ ಇದುವರೆಗೂ 46 ಸಾವಿರ ಕೋಟಿ ರೈತರ ಸಾಲ ಮನ್ನಾ ಮಾಡಲಾಗಿದೆ. 11 ಸಾವಿರ ರೈತರಿಗೆ ಋಣ ಮುಕ್ತ ಪತ್ರ ನೀಡಲಾಗಿದೆ' ಎಂದರು.

English summary
Chief Minister of Karnataka H.D.Kumaraswamy and Deputy Chief Minister G.Parameshwara released the Congress-JD(S) alliance government one year achievement document on June 20, 2019.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X