ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಉಪ ಚುನಾವಣೆ; ಕಾಂಗ್ರೆಸ್-ಜೆಡಿಎಸ್ ಮೈತ್ರಿ ಬಗ್ಗೆ ಎಚ್‌ಡಿಕೆ ಟ್ವೀಟ್

|
Google Oneindia Kannada News

ಬೆಂಗಳೂರು, ಅಕ್ಟೋಬರ್ 01: ಆರ್. ಆರ್. ನಗರ ಮತ್ತು ಶಿರಾ ಉಪ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಳ್ಳಲಿವೆಯೇ? ಎಂಬ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಆದರೆ, ಎಚ್. ಡಿ. ಕುಮಾರಸ್ವಾಮಿ ಮಾಡಿರುವ ಟ್ವೀಟ್ ಮೈತ್ರಿ ಇಲ್ಲ ಎಂಬ ಸಂದೇಶ ಹೇಳುತ್ತಿವೆ.

2018ರ ವಿಧಾನಸಭೆ ಚುನಾವಣೆಯ ಬಳಿಕ ಕಾಂಗ್ರೆಸ್-ಜೆಡಿಎಸ್ ನಡುವೆ ಮೈತ್ರಿ ನಡೆದಿತ್ತು. ಎಚ್. ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದರು. 2019ರ ಲೋಕಸಭೆ ಚುನಾವಣೆಯಲ್ಲಿಯೂ ಮೈತ್ರಿ ಮಾಡಿಕೊಳ್ಳಲಾಗಿತ್ತು.

ಆರ್. ಆರ್. ನಗರ ಉಪ ಚುನಾವಣೆ; ಮೌನ ಮುರಿದ ಹನುಮಂತರಾಯಪ್ಪ ಆರ್. ಆರ್. ನಗರ ಉಪ ಚುನಾವಣೆ; ಮೌನ ಮುರಿದ ಹನುಮಂತರಾಯಪ್ಪ

ಆದರೆ, ಸಮ್ಮಿಶ್ರ ಸರ್ಕಾರ ಪತನಗೊಂಡ ಬಳಿಕ ರಾಜಕೀಯ ಚಿತ್ರಣ ಬದಲಾಗಿದೆ. ಕಾಂಗ್ರೆಸ್-ಜೆಡಿಎಸ್ ನಾಯಕರು ಬಹಿರಂಗವಾಗಿ ವಾಗ್ದಾಳಿಗಳನ್ನು ನಡೆಸಿದ್ದು, ಮುಂದೆ ಮೈತ್ರಿ ಆಗುವುದಿಲ್ಲ ಎಂಬುದು ಖಚಿತವಾಗಿದೆ.

ಆರ್. ಆರ್. ನಗರ ಉಪ ಚುನಾವಣೆ; ಜೆಡಿಎಸ್ ಮಹತ್ವದ ಘೋಷಣೆಆರ್. ಆರ್. ನಗರ ಉಪ ಚುನಾವಣೆ; ಜೆಡಿಎಸ್ ಮಹತ್ವದ ಘೋಷಣೆ

ಗುರುವಾರ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಸರಣಿ ಟ್ವೀಟ್‌ಗಳನ್ನು ಮಾಡಿದ್ದಾರೆ. ಕಾಂಗ್ರೆಸ್ ವರ್ತನೆಯು ಮೈತ್ರಿಗೆ ತಾನು ಯೋಗ್ಯವಲ್ಲ ಎಂಬುದರ ಸಂದೇಶ ಎಂದು ಹೇಳಿದ್ದಾರೆ.

ಶಿರಾ, ಆರ್‌ಆರ್‌ ನಗರ ಉಪ ಚುನಾವಣೆಗೆ ದಿನಾಂಕ ಪ್ರಕಟ!ಶಿರಾ, ಆರ್‌ಆರ್‌ ನಗರ ಉಪ ಚುನಾವಣೆಗೆ ದಿನಾಂಕ ಪ್ರಕಟ!

ನಾವ್ಯಾರೂ ಕಾಂಗ್ರೆಸ್ ಮನೆ ಬಾಗಿಲಿಗೆ ಹೋಗಿಲ್ಲ

ನಾವ್ಯಾರೂ ಕಾಂಗ್ರೆಸ್ ಮನೆ ಬಾಗಿಲಿಗೆ ಹೋಗಿಲ್ಲ

"ಜೆಡಿಎಸ್ ಜೊತೆ ಮೈತ್ರಿ ಇಲ್ಲ ಎಂದು ಕಾಂಗ್ರೆಸ್ ನಾಯಕರು ಹೇಳಿರುವ ಪತ್ರಿಕೆ, ವಾಹಿನಿಗಳ ವರದಿಯನ್ನು ಗಮನಿಸಿದೆ. ಕಾಂಗ್ರೆಸ್ ಜೊತೆಗೆ ಮೈತ್ರಿ ಮಾಡಿಕೊಳ್ಳುವ ಪ್ರಸ್ತಾವವನ್ನು ಜೆಡಿಎಸ್‌ ಮುಂದಿಟ್ಟಿರುವುದಾದರೂ ಯಾರು?. 2018ರ ಫಲಿತಾಂಶದ ಬಳಿಕ ದೇವೇಗೌಡರ ಮನೆ ಬಾಗಿಲಿಗೆ ಕಾಂಗ್ರೆಸ್ ಬಂದಂತೆ ನಾವ್ಯಾರೂ ಕಾಂಗ್ರೆಸ್ ಬಾಗಿಲಿಗೆ ಹೋಗಿಲ್ಲ" ಎಂದು ಎಚ್. ಡಿ. ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಮೈತ್ರಿಗೆ ಯೋಗ್ಯವಲ್ಲ ಎಂಬ ಸಂದೇಶ

ಮೈತ್ರಿಗೆ ಯೋಗ್ಯವಲ್ಲ ಎಂಬ ಸಂದೇಶ

"ಕಾಂಗ್ರೆಸ್ ಮೈತ್ರಿಗೆ ಯೋಗ್ಯ ಪಕ್ಷವಲ್ಲ. ರಾಜ್ಯದಲ್ಲಿ ನನ್ನ ನೇತೃತ್ವದ ಮೈತ್ರಿ ಸರ್ಕಾರ ಕೆಡವಿದ, ರಾಜಸ್ಥಾನದಲ್ಲಿ ಬೆಂಬಲ ನೀಡಿದ್ದ BSP ಶಾಸಕರನ್ನೇ ಸೆಳೆದ, ಮಹಾರಾಷ್ಟ್ರದಲ್ಲಿ ಸರ್ಕಾರವನ್ನು ದಿನವೂ ಅಲುಗಾಡಿಸುತ್ತಿರುವ ಅದರ ವರ್ತನೆಯು, ಮೈತ್ರಿಗೆ ತಾನು ಯೋಗ್ಯವಲ್ಲ ಎಂಬುದರ ಸಂದೇಶ. ಅಷ್ಟಕ್ಕೂ ಕಾಂಗ್ರೆಸ್ ಮಿತ್ರ ಪಕ್ಷಗಳು ಬೇರೆಯೇ ಇವೆ" ಎಂದು ಎಚ್. ಡಿ. ಕುಮಾರಸ್ವಾಮಿ ಟ್ವೀಟ್‌ ಮಾಡಿದ್ದಾರೆ.

ಕಾಂಗ್ರೆಸ್‌ ಜೊತೆ ಮೈತ್ರಿ ಇಲ್ಲ

ಕಾಂಗ್ರೆಸ್‌ ಜೊತೆ ಮೈತ್ರಿ ಇಲ್ಲ

"ಮೈತ್ರಿಧರ್ಮವನ್ನೂ ಧರ್ಮವೆಂದು ಒಪ್ಪದ ಕಾಂಗ್ರೆಸ್ ಜೊತೆ ಎಂದೂ ಮೈತ್ರಿ ಇಲ್ಲ. ಮೈತ್ರಿ ವಿಷಯವಾಗಿ ಕಾಂಗ್ರೆಸ್ ಎದುರು ಜೆಡಿಎಸ್ ಅವಕಾಶವನ್ನು ಯಾರೂ ಮುಂದಿಡುವುದೂ ಬೇಡ. ರಾಜ್ಯದಲ್ಲಿ ಮೈತ್ರಿ ಎಂದರೆ ಕಾಂಗ್ರೆಸ್-ಜೆಡಿಎಸ್ ಎಂಬ ಭಾವನೆಯೂ ಬೇಡ. ಹಾಗೇ, ಜೆಡಿಎಸ್, ದೇವೇಗೌಡರ ಹೆಸರು ಬಳಸಿ ಆ ಪಕ್ಷದ 'ನಾಯಕ'ರು ಲಾಭ ಮಾಡಿಕೊಳ್ಳುವುದೂ ಬೇಡ‌" ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಏಕಾಂಗಿ ಹೋರಾಟ

ಏಕಾಂಗಿ ಹೋರಾಟ

ಎಚ್. ಡಿ. ಕುಮಾರಸ್ವಾಮಿ ಅವರ ಟ್ವೀಟ್‌ನಿಂದಾಗಿ ರಾಜರಾಜೇಶ್ವರಿ ನಗರ ಮತ್ತು ಶಿರಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಮೈತ್ರಿ ಇಲ್ಲ ಎಂಬುದು ಖಚಿತವಾಗಿದೆ. 2018ರಲ್ಲಿ ಶಿರಾದಲ್ಲಿ ಜೆಡಿಎಸ್, ಆರ್. ಆರ್. ನಗರದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿತ್ತು.

Recommended Video

ಉಪಚುನಾವಣೆ , Rajarajeshwari ಕ್ಷೇತ್ರದ್ದೆ TENSION!! | Oneindia Kannada

English summary
Congress and JD(S) alliance in Rajarajeshwari Nagar and Sira by election. Former CM H.D.Kumaraswamy tweet about alliance.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X