ಲಕ್ಷ್ಮಣ ಸವದಿಗೆ ಸಂಕಷ್ಟ; ಪರಿಷತ್ ಉಪ ಚುನಾವಣೆಗೆ ತಿರುವು

ಬೆಂಗಳೂರು, ಫೆಬ್ರವರಿ 06 : ಕರ್ನಾಟಕದ ವಿಧಾನ ಪರಿಷತ್ ಉಪ ಚುನಾವಣೆಗೆ ಮಹತ್ವದ ತಿರುವು ಸಿಕ್ಕಿದೆ. ಫೆಬ್ರವರಿ 17ರಂದು ಒಂದು ಸ್ಥಾನವನ್ನು ಭರ್ತಿ ಮಾಡಲು ಉಪ ಚುನಾವಣೆ ನಡೆಸಲು ದಿನಾಂಕ ನಿಗದಿಯಾಗಿದೆ.

ವಿಧಾನ ಪರಿಷತ್ ಸದಸ್ಯರಾಗಿದ್ದ ಕಾಂಗ್ರೆಸ್ ನಾಯಕ ರಿಜ್ವಾನ್ ಅರ್ಷದ್ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಉಪ ಚುನಾವಣೆ ನಿಗದಿಯಾಗಿದೆ. ನಾಮಪತ್ರ ಸಲ್ಲಿಸಲು ಗುರುವಾರ ಕೊನೆ ದಿನ. ಆಯ್ಕೆಯಾದ ಸದಸ್ಯರ ಅವಧಿ 2022ರ ಜೂನ್ ತನಕ ಇರಲಿದೆ.

ಉಪ ಚುನಾವಣೆ ಟಿಕೆಟ್ ಪಡೆಯಲು ಬಿಜೆಪಿಯಲ್ಲಿ ಭಾರಿ ಪೈಪೋಟಿ ಇತ್ತು. ಅಂತಿಮವಾಗಿ ಪಕ್ಷ ಸಾರಿಗೆ ಸಚಿವ ಲಕ್ಷ್ಮಣ ಸವದಿಯನ್ನು ಅಭ್ಯರ್ಥಿ ಎಂದು ಘೋಷಣೆ ಮಾಡಿದೆ. ಬುಧವಾರ ಅವರು ನಾಮಪತ್ರವನ್ನು ಸಲ್ಲಿಸಿದ್ದಾರೆ.

ವಿಧಾನಸಭೆ ಮತ್ತು ಪರಿಷತ್ ಸದಸ್ಯರಲ್ಲದ ಲಕ್ಷ್ಮಣ ಸವದಿ ಫೆಬ್ರವರಿ 26ರೊಳಗೆ ಸದಸ್ಯರಾಗುವುದು ಅನಿವಾರ್ಯವಾಗಿದೆ. ಇಲ್ಲವಾದಲ್ಲಿ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಅವಿರೋಧವಾಗಿ ಅವರು ಆಯ್ಕೆಯಾಗುವ ನಿರೀಕ್ಷೆಯಲ್ಲಿದ್ದರು. ಆದರೆ, ಉಪ ಚುನಾವಣೆಗೆ ಈಗ ತಿರುವು ಸಿಕ್ಕಿದೆ.

ಕಾಂಗ್ರೆಸ್-ಜೆಡಿಎಸ್ ಮೈತ್ರಿ

ಕಾಂಗ್ರೆಸ್-ಜೆಡಿಎಸ್ ಮೈತ್ರಿ

ವಿಧಾನ ಪರಿಷತ್ ಉಪ ಚುನಾವಣೆಗೆ ಅಭ್ಯರ್ಥಿ ಕಣಕ್ಕಿಳಿಸುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದರು. ಆದರೆ, ಕೊನೆ ಕ್ಷಣದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಮೈತ್ರಿ ಅಭ್ಯರ್ಥಿಯಾಗಿ ಬೆಂಗಳೂರು ನಗರ ಘಟಕದ ಜೆಡಿಎಸ್ ಅಧ್ಯಕ್ಷ ಆರ್. ಪ್ರಕಾಶ್ ಕಣಕ್ಕಿಳಿಯಲಿದ್ದಾರೆ.

ಗುರುವಾರ ನಾಮಪತ್ರ

ಗುರುವಾರ ನಾಮಪತ್ರ

ವಿಧಾನ ಪರಿಷತ್ ಉಪ ಚುನಾವಣೆಗೆ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಗುರುವಾರ ಆರ್. ಪ್ರಕಾಶ್ ನಾಮಪತ್ರವನ್ನು ಸಲ್ಲಿಸಲಿದ್ದಾರೆ. ಇಂದು ಮಧ್ಯಾಹ್ನ 2ಗಂಟೆಗೆ ವಿಧಾನಸಭೆ ಕಾರ್ಯದರ್ಶಿ ಎಂ. ಕೆ. ವಿಶಾಲಾಕ್ಷಿ ಅವರಿಗೆ ನಾಮಪತ್ರವನ್ನು ಸಲ್ಲಿಕೆ ಮಾಡಲಿದ್ದಾರೆ. ನಾಮಪತ್ರ ಸಲ್ಲಿಸಲು ಮಧ್ಯಾಹ್ನ 3 ಗಂಟೆ ತನಕ ಅವಕಾಶವಿದೆ.

ಲಕ್ಷ್ಮಣ ಸವದಿ ನಾಮಪತ್ರ

ಲಕ್ಷ್ಮಣ ಸವದಿ ನಾಮಪತ್ರ

ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಸಾರಿಗೆ ಸಚಿವ ಲಕ್ಷ್ಮಣ ಸವದಿ ಬುಧವಾರ ನಾಮಪತ್ರವನ್ನು ಸಲ್ಲಿಸಿದ್ದಾರೆ. ಅವಿರೋಧವಾಗಿ ಆಯ್ಕೆಯಾಗುವ ಲೆಕ್ಕಾಚಾರದಲ್ಲಿ ಅವರು ಇದ್ದರು. ಆದರೆ, ಕಾಂಗ್ರೆಸ್-ಜೆಡಿಎಸ್ ಮೈತ್ರಿಯಿಂದಾಗಿ ಲೆಕ್ಕಾಚಾರ ಬದಲಾಗಿದೆ.

ಫೆಬ್ರವರಿ 17ರಂದು ಉಪ ಚುನಾವಣೆ

ಫೆಬ್ರವರಿ 17ರಂದು ಉಪ ಚುನಾವಣೆ

ಒಬ್ಬರು ವಿಧಾನ ಪರಿಷತ್ ಸದಸ್ಯರನ್ನು ಆಯ್ಕೆ ಮಾಡಲು ವಿಧಾನಸಭೆಯ ಸದಸ್ಯರು ಮತದಾನ ಮಾಡಲಿದ್ದಾರೆ. ಇಬ್ಬರು ನಾಮಪತ್ರ ಸಲ್ಲಿಕೆ ಮಾಡಿದರೆ ಉಪ ಚುನಾವಣೆಗೆ ಮತದಾನ ನಡೆಯುವುದು ಅನಿವಾರ್ಯವಾಗಲಿದೆ. ಫೆಬ್ರವರಿ 17ರಂದು ವಿಧಾನಸೌಧದಲ್ಲಿಯೇ ಮತದಾನ ನಡೆಯಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+