ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಲೋಕಸಭಾ ಚುನಾವಣೆ : ಜೆಡಿಎಸ್ ಬೇಡಿಕೆ ಇಟ್ಟಿರುವ ಕ್ಷೇತ್ರಗಳ ಪಟ್ಟಿ

|
Google Oneindia Kannada News

Recommended Video

Lok Sabha Election 2019 : ಜೆಡಿಎಸ್ ಬೇಡಿಕೆ ಇಟ್ಟಿರುವ 12 ಕ್ಷೇತ್ರಗಳು | Oneindia Kannada

ಬೆಂಗಳೂರು, ಜನವರಿ 09 : ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌-ಜೆಡಿಎಸ್ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಆದರೆ, ಸೀಟು ಹಂಚಿಕೆ ಬಗ್ಗೆ ಉಭಯ ಪಕ್ಷಗಳು ಇನ್ನೂ ಅಂತಿಮ ತೀರ್ಮಾನ ಕೈಗೊಂಡಿಲ್ಲ.

'12 ಲೋಕಸಭಾ ಕ್ಷೇತ್ರಗಳನ್ನು ಕಾಂಗ್ರೆಸ್ ಬಿಟ್ಟುಕೊಡಬೇಕು' ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದ್ದಾರೆ. ಜೆಡಿಎಸ್ ಪಟ್ಟಿ ಮಾಡಿರುವ 12 ಕ್ಷೇತ್ರಗಳಲ್ಲಿ ಹಲವು ಕಡೆ ಕಾಂಗ್ರೆಸ್‌ ಸಂಸದರು ಇದ್ದಾರೆ. ಆ ಕ್ಷೇತ್ರವನ್ನು ಪಕ್ಷ ಬಿಟ್ಟುಕೊಡಲಿದೆಯೇ?.

ಸಿದ್ದರಾಮಯ್ಯ ದಾಳಕ್ಕೆ ದೇವೇಗೌಡರ ಪ್ರತಿದಾಳ, ರಾಹುಲ್ ಗಾಂಧಿ ತಳಮಳ!ಸಿದ್ದರಾಮಯ್ಯ ದಾಳಕ್ಕೆ ದೇವೇಗೌಡರ ಪ್ರತಿದಾಳ, ರಾಹುಲ್ ಗಾಂಧಿ ತಳಮಳ!

ಲೋಕಸಭಾ ಚುನಾವಣೆ ತಯಾರಿ ಕುರಿತು ಚರ್ಚೆ ನಡೆಸಲು ಜೆ.ಪಿ.ಭವನದಲ್ಲಿ ಎಚ್.ಡಿ.ದೇವೇಗೌಡ ಅಧ್ಯಕ್ಷತೆಯಲ್ಲಿ ಮಂಗಳವಾರ ಸಭೆ ನಡೆಯಿತು. ಲೋಕಸಭೆ ಸೀಟು ಹಚಿಕೆ ವಿಚಾರದಲ್ಲಿ ದೇವೇಗೌಡರ ತೀರ್ಮಾನವೇ ಅಂತಿಮ ಎಂದು ಪಕ್ಷದ ಎಲ್ಲಾ ಮುಖಂಡರು ಹೇಳಿದ್ದಾರೆ.

ದೋಸ್ತಿಗೂ ಮುಂಚೆ ಕಾಂಗ್ರೆಸ್ ಸರಿಯಾಗಿ ನಡೆಸಿಕೊಳ್ಳಲಿ ಅಂದರೇಕೆ ಗೌಡರು?ದೋಸ್ತಿಗೂ ಮುಂಚೆ ಕಾಂಗ್ರೆಸ್ ಸರಿಯಾಗಿ ನಡೆಸಿಕೊಳ್ಳಲಿ ಅಂದರೇಕೆ ಗೌಡರು?

ಜನವರಿ 15ರ ಬಳಿಕ ನವದೆಹಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರ ಜೊತೆ ದೇವೇಗೌಡರು ಸಭೆ ನಡೆಸಲಿದ್ದಾರೆ. ಈಗಾಗಲೇ ಅವರು ಜೆಡಿಎಸ್‌ಗೆ ಯಾವ ಕ್ಷೇತ್ರಗಳು ಬೇಕು ಎಂಬ ಪಟ್ಟಿಯನ್ನು ರಾಹುಲ್ ಗಾಂಧಿ ಅವರಿಗೆ ಸಲ್ಲಿಸಿದ್ದಾರೆ...

ಲೋಕಸಭಾ ಚುನಾವಣೆಯಲ್ಲಿ ದೇವೇಗೌಡರ ತಂತ್ರವೇನಿರಬಹುದು?ಲೋಕಸಭಾ ಚುನಾವಣೆಯಲ್ಲಿ ದೇವೇಗೌಡರ ತಂತ್ರವೇನಿರಬಹುದು?

ಯಾವ ಕ್ಷೇತ್ರಗಳತ್ತ ಕಣ್ಣು

ಯಾವ ಕ್ಷೇತ್ರಗಳತ್ತ ಕಣ್ಣು

ಎಂ.ವೀರಪ್ಪ ಮೊಯ್ಲಿ ಪ್ರತಿನಿಧಿಸುವ ಚಿಕ್ಕಬಳ್ಳಾಪುರ, ಕೆ.ಎಚ್.ಮುನಿಯಪ್ಪ ಪ್ರತಿನಿಧಿಸುವ ಕೋಲಾರ, ಮುದ್ದಹನುಮೇಗೌಡರು ಪ್ರತಿನಿಧಿಸುವ ತುಮಕೂರು ಕ್ಷೇತ್ರಗಳನ್ನು ಬಿಟ್ಟುಕೊಡುವಂತೆ ಜೆಡಿಎಸ್ ಬೇಡಿಕೆ ಇಡಲಿದೆ. ಹಳೇ ಮೈಸೂರು ಭಾಗದ ಕ್ಷೇತ್ರಗಳು ನಮಗೆ ಬೇಕು ಎಂಬುದು ಜೆಡಿಎಸ್ ಬೇಡಿಕೆಯಾಗಿದೆ.

ಯಾವ-ಯಾವ ಕ್ಷೇತ್ರಗಳು

ಯಾವ-ಯಾವ ಕ್ಷೇತ್ರಗಳು

ಮೈಸೂರು, ಮಂಡ್ಯ, ಹಾಸನ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಶಿವಮೊಗ್ಗ, ಬೀದರ್, ವಿಜಯಪುರ ಸೇರಿದಂತೆ 12 ಸ್ಥಾನಗಳಿಗೆ ಜೆಡಿಎಸ್ ಬೇಡಿಕೆ ಇಡಲಿದೆ. ಇವುಗಳಲ್ಲಿ ಮೈಸೂರು-ಕೊಡಗು ಕ್ಷೇತ್ರವನ್ನು ಸಿದ್ದರಾಮಯ್ಯ ಜೆಡಿಎಸ್‌ಗೆ ಬಿಟ್ಟುಕೊಡಲಿದ್ದಾರೆಯೇ?.

ರಾಹುಲ್ ಗಾಂಧಿ ಜೊತೆ ಚರ್ಚೆ

ರಾಹುಲ್ ಗಾಂಧಿ ಜೊತೆ ಚರ್ಚೆ

ಎಚ್.ಡಿ.ದೇವೇಗೌಡರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಶಾಸಕರು ಸೀಟು ಹಂಚಿಕೆ ಕುರಿತು ರಾಜ್ಯ ನಾಯಕರ ಜೊತೆ ಚರ್ಚೆ ನಡೆಸುವ ಬದಲು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಜೊತೆಯೇ ಚರ್ಚಿಸಬೇಕು ಎಂದು ಸಲಹೆ ನೀಡಿದರು. ಈಗಾಗಲೇ ದೇವೇಗೌಡರು ಜೆಡಿಎಸ್ ಬೇಡಿಕೆ ಇಟ್ಟಿರುವ ಕ್ಷೇತ್ರಗಳ ಪಟ್ಟಿಯನ್ನು ರಾಹುಲ್ ಗಾಂಧಿ ಅವರಿಗೆ ಕಳುಹಿಸಿದ್ದಾರೆ.

ಹಾಲಿ ಸಂಸದರ ಬದಲಾವಣೆ ಬೇಡ

ಹಾಲಿ ಸಂಸದರ ಬದಲಾವಣೆ ಬೇಡ

ಶಾಸಕರ ಸಲಹೆಗೆ ಪ್ರತಿಕ್ರಿಯೆ ನೀಡಿದ ದೇವೇಗೌಡರು, 'ಹಳೇ ಮೈಸೂರು ಭಾಗದಲ್ಲಿ ಕಾಂಗ್ರೆಸ್‌ನ ಹಾಲಿ ಸಂಸದರು ಇದ್ದಾರೆ. ಅವರನ್ನು ಬದಲಾವಣೆ ಮಾಡುವಂತೆ ಕೇಳುವುದು ಸರಿಯಲ್ಲ. ಈ ಬಗ್ಗೆ ಕಾಂಗ್ರೆಸ್ ನಾಯಕರ ಜೊತೆ ಚರ್ಚೆ ನಡೆಸೋಣ' ಎಂದು ಹೇಳಿದರು.

English summary
All set for Congress and JD(S) alliance in Lok Sabha Elections 2019 in Karnataka. JD(S) demand for 12 seats out of 28. Will Congress approved for this.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X