ರಾಜ್ಯಸಭೆ ಚುನಾವಣೆ; ಕರ್ನಾಟಕದಲ್ಲೊಂದು ಬ್ರೇಕಿಂಗ್ ನ್ಯೂಸ್!

ಬೆಂಗಳೂರು, ಮೇ 26 : ರಾಜ್ಯಸಭೆ ಚುನಾವಣೆಯ ವಿಚಾರದಲ್ಲಿ ಕರ್ನಾಟಕದಿಂದ ಬ್ರೇಕಿಂಗ್ ನ್ಯೂಸ್ ಒಂದು ಹೊರಬಂದಿದೆ. ಮೈತ್ರಿ ಮಾಡಿಕೊಂಡು ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ರಚನೆ ಮಾಡಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ ರಾಜ್ಯಸಭೆ ಚುನಾವಣೆಯಲ್ಲಿ ಕೈ ಜೋಡಿಸಲಿವೆ.

Recommended Video

      Ramesh Babu Resigned to Jds | ರಮೇಶ್ ಬಾಬು ಜೆಡಿಎಸ್ ಗೆ ರಾಜೀನಾಮೆ | Oneindia Kannada

      ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಗೆ ಒಬ್ಬರು ಸದಸ್ಯರನ್ನು ಆಯ್ಕೆ ಮಾಡಲು ಜೂನ್‌ನಲ್ಲಿ ಚುನಾವಣೆ ನಡೆಯಲಿದೆ. ಈ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಳ್ಳಲಿದ್ದು, ಕಾಂಗ್ರೆಸ್ ಜೆಡಿಎಸ್ ಅಭ್ಯರ್ಥಿಗೆ ಬೆಂಬಲ ನೀಡಲಿದ್ದಾರೆ ಎಂಬದು ಸುದ್ದಿ.

      ಕಾಂಗ್ರೆಸ್-ಜೆಡಿಎಸ್ ಬೆಂಬಲಿತ ಅಭ್ಯರ್ಥಿಯಾಗಿ ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ ಕಣಕ್ಕಿಳಿಯಲಿದ್ದಾರೆ ಎಂಬುದು ಸುದ್ದಿ. ಕೆಲವು ದಿನಗಳ ಹಿಂದೆ ದೇವೇಗೌಡರ ಮನೆಯಲ್ಲಿ ನಡೆದ ರಹಸ್ಯ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ.

      2019ರ ಲೋಕಸಭಾ ಚುನಾವಣೆಯಲ್ಲಿ ಹಾಸನ ಬಿಟ್ಟು ತುಮಕೂರಿಗೆ ಬಂದು ಕಣಕ್ಕಿಳಿದಿದ್ದ ದೇವೇಗೌಡರು ಸೋಲು ಕಂಡಿದ್ದರು. ಈಗ ರಾಜ್ಯಸಭೆ ಮೂಲಕ ಪುನಃ ರಾಷ್ಟ್ರ ರಾಜಕೀಯಕ್ಕೆ ಹೋಗಲಿದ್ದಾರೆಯೇ? ಕಾದು ನೋಡಬೇಕು.

      ಕುಪೇಂದ್ರ ರೆಡ್ಡಿ ಅವಧಿ ಅಂತ್ಯ

      ಕುಪೇಂದ್ರ ರೆಡ್ಡಿ ಅವಧಿ ಅಂತ್ಯ

      ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ಕುಪೇಂದ್ರ ರೆಡ್ಡಿ ಅವರ ಅವಧಿ ಜೂನ್ 25ಕ್ಕೆ ಅಂತ್ಯವಾಗಲಿದೆ. ತೆರವಾಗುವ ಒಂದು ಸ್ಥಾನಕ್ಕೆ ನಡೆಯುವ ಚುನಾವಣೆಯಲ್ಲಿ ಎಚ್. ಡಿ. ದೇವೇಗೌಡರು ಅಭ್ಯರ್ಥಿಯಾಗಲಿದ್ದಾರೆ ಎಂಬುದು ಸುದ್ದಿ.

      ಸೋನಿಯಾ ಗಾಂಧಿ ಮನವಿ

      ಸೋನಿಯಾ ಗಾಂಧಿ ಮನವಿ

      ರಾಜ್ಯಸಭೆ ಚುನಾವಣೆ ಕಣಕ್ಕಿಳಿಯುವಂತೆ ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಎಚ್. ಡಿ. ದೇವೇಗೌಡರ ಮನವೊಲಿಸಿದ್ದಾರೆ ಎಂಬ ಸುದ್ದಿ ಹಬ್ಬಿದೆ. ದೇವೇಗೌಡರು ಕಣಕ್ಕಿಳಿದರೆ ಪಕ್ಷ ಸಹ ಬೆಂಬಲ ನೀಡಲಿದೆ ಎಂದು ಸೋನಿಯಾ ಗಾಂಧಿ ಭರವಸೆ ನೀಡಿದ್ದಾರೆ.

      ಕಾಂಗ್ರೆಸ್ ಬೆಂಬಲ ಬೇಕು

      ಕಾಂಗ್ರೆಸ್ ಬೆಂಬಲ ಬೇಕು

      ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಗೆ ಆಯ್ಕೆಯಾಗಲು 48 ಶಾಸಕರ ಬಲ ಬೇಕು. ಜೆಡಿಎಸ್ ವಿಧಾನಸಭೆಯಲ್ಲಿ 34 ಸದಸ್ಯ ಬಲ ಹೊಂದಿದೆ. ಕಾಂಗ್ರೆಸ್ ಜೆಡಿಎಸ್ ಪಕ್ಷಕ್ಕೆ ಬೆಂಬಲ ನೀಡಲಿದ್ದು, ದೇವೇಗೌಡರು ಅಭ್ಯರ್ಥಿಯಾದರೆ 14 ಶಾಸಕರು ಜೆಡಿಎಸ್ ಪರವಾಗಿ ಮತದಾನ ಮಾಡಲಿದ್ದಾರೆ ಎಂಬ ಸುದ್ದಿ ಹಬ್ಬಿದೆ.

      ಬಿಜೆಪಿ ತಂತ್ರ ಏನು?

      ಬಿಜೆಪಿ ತಂತ್ರ ಏನು?

      ರಾಜ್ಯಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯನ್ನು ಕಣಕ್ಕಿಳಿಸುವುದಿಲ್ಲವೇ?. ಒಂದು ವೇಳೆ ದೇವೇಗೌಡರು ಅಭ್ಯರ್ಥಿಯಾದರೆ ಬಿಜೆಪಿ ಅಭ್ಯರ್ಥಿಯನ್ನು ಹಾಕದೇ ತಟಸ್ಥವಾಗಿ ಉಳಿಯುವುದೇ? ಕಾದು ನೋಡಬೇಕಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+