ಲೋಕಸಭೆ ಚುನಾವಣೆಯಲ್ಲಿಯೂ ಕಾಂಗ್ರೆಸ್-ಜೆಡಿಎಸ್ ಮೈತ್ರಿ?

ಬೆಂಗಳೂರು, ಜೂನ್ 01 : ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿಎಸ್ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಎರಡೂ ಪಕ್ಷಗಳ ನಡುವಿನ ಮೈತ್ರಿ 2019ರ ಲೋಕಸಭೆ ಚುನಾವಣೆಯಲ್ಲಿಯೂ ಮುಂದುವರೆಯುವ ಸಾಧ್ಯತೆ ಇದೆ.

ಹಿರಿಯ ಕಾಂಗ್ರೆಸ್ ನಾಯಕ ಅಶೋಕ್ ಗೆಹ್ಲೋಟ್ ರಾಷ್ಟ್ರೀಯ ಮಾಧ್ಯಮಗಳ ಜೊತೆ ಮಾತನಾಡುವಾಗ ಈ ವಿಚಾರದ ಬಗ್ಗೆ ಮಾತನಾಡಿದ್ದಾರೆ. 'ಕರ್ನಾಟಕದಲ್ಲಿ ಎಚ್.ಡಿ.ಕುಮಾರಸ್ವಾಮಿ 5 ವರ್ಷ ಮುಖ್ಯಮಂತ್ರಿಯಾಗಿರುತ್ತಾರೆ. ಅಧಿಕಾರ ಹಂಚಿಕೆ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ' ಎಂದು ಅವರು ಸ್ಪಷ್ಟಪಡಿಸಿದ್ದಾರೆ.

Congress JDS alliance to continue in 2019 Lok Sabha elections

'ಕಾಂಗ್ರೆಸ್-ಜೆಡಿಎಸ್ ಒಟ್ಟಾಗಿ 2019ರ ಲೋಕಸಭೆ ಚುನಾವಣೆಯನ್ನು ಎದುರಿಸಲು ನಿರ್ಧರಿಸಿವೆ. ಈ ಕುರಿತು ಕೆಲವೇ ದಿನಗಳಲ್ಲಿ ಘೋಷಣೆ ಮಾಡುವ ಸಾಧ್ಯತೆ ಇದೆ' ಎಂದು ಅಶೋಕ್ ಗೆಹ್ಲೋಟ್ ಹೇಳಿದ್ದಾರೆ.

ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿಎಸ್ 30 ತಿಂಗಳ ಒಪ್ಪಂದದಲ್ಲಿ ಅಧಿಕಾರವನ್ನು ಹಂಚಿಕೆ ಮಾಡಿಕೊಂಡಿವೆ ಎಂಬ ಸುದ್ದಿಗಳು ಹರಿದಾಡುತ್ತಿತ್ತು. ಆದರೆ, ಹೈಕಮಾಂಡ್ ಈ ಸುದ್ದಿಗಳನ್ನು ತಳ್ಳಿಹಾಕಿದೆ. ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿ 5 ವರ್ಷ ಮುಂದುವರೆಯಲಿದ್ದಾರೆ.

ಈಗಾಗಲೇ ಮೈತ್ರಿ ಸರ್ಕಾರದ ಸಂಪುಟ ವಿಸ್ತರಣೆಗೆ ವೇದಿಕೆ ಸಜ್ಜಾಗಿದೆ. ಮೊದಲ ಹಂತದಲ್ಲಿ ಕಾಂಗ್ರೆಸ್‌ನ 12, ಜೆಡಿಎಸ್‌ನ 8 ಶಾಸಕರು ಎಚ್.ಡಿ.ಕುಮಾರಸ್ವಾಮಿ ಸಂಪುಟವನ್ನು ಸೇರಲಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+