ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಿಧಾನ ಪರಿಷತ್ ಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಅಂತಿಮ

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 16 : ಕಾಂಗ್ರೆಸ್-ಜೆಡಿಎಸ್ ಮೈತ್ರಿ ವಿಧಾನ ಪರಿಷತ್ ಚುನಾವಣೆಯಲ್ಲಿಯೂ ಮುಂದುವರೆಯಲಿದೆ. ಉಪ ಚುನಾವಣೆ, ನಾಮ ನಿರ್ದೇಶನ ಸೇರಿ 6 ಸ್ಥಾನಗಳು ತೆರವಾಗಿದ್ದು, 4 ಸ್ಥಾನ ಕಾಂಗ್ರೆಸ್‌ಗೆ ಸಿಗಲಿವೆ. ಪಕ್ಷ ಪರಿಷತ್ ಸದಸ್ಯರ ಪಟ್ಟಿಯನ್ನು ಸಿದ್ಧಗೊಳಿಸಿದೆ.

ಕರ್ನಾಟಕ ಪ್ರವಾಸದಲ್ಲಿರುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರು ವಿಧಾನ ಪರಿಷತ್ ಸ್ಥಾನಕ್ಕೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದ್ದಾರೆ. ಪಟ್ಟಿ ಹಿಡಿದು ದೆಹಲಿಗೆ ತೆರಳಿದ್ದು, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಜೊತೆ ಚರ್ಚಿಸಿ ಪಟ್ಟಿ ಅಂತಿಮಗೊಳಿಸಲಿದ್ದಾರೆ.

3 ವಿಧಾನ ಪರಿಷತ್ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆ3 ವಿಧಾನ ಪರಿಷತ್ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆ

ಅಕ್ಟೋಬರ್ 3ರಂದು ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ 3 ಸದಸ್ಯರನ್ನು ಆಯ್ಕೆ ಮಾಡಲು ಚುನಾವಣೆ ನಿಗದಿಯಾಗಿದೆ. ತಾರಾ ಅನುರಾಧ ಮತ್ತು ಕೆ.ಬಿ.ಶಾಣಪ್ಪ ಅವರ ಅವಧಿ ಮುಗಿದ ಹಿನ್ನಲೆಯಲ್ಲಿ 2 ಸ್ಥಾನ ತೆರವಾಗಿದೆ. ಒಬ್ಬರನ್ನು ಸರ್ಕಾರ ನಾಮ ನಿರ್ದೇಶನ ಮಾಡಬೇಕಿದೆ.

ವಿಧಾನಪರಿಷತ್ ಚುನಾವಣೆ, ಅಂಕಿ-ಅಂಶಗಳುವಿಧಾನಪರಿಷತ್ ಚುನಾವಣೆ, ಅಂಕಿ-ಅಂಶಗಳು

ವಿಧಾನ ಪರಿಷತ್ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳಲು ಎರಡು ಪಕ್ಷಗಳು ಬಯಸಿವೆ. ಆಕಾಂಕ್ಷಿಗಳ ಸಂಖ್ಯೆಯೂ ಹೆಚ್ಚಿದೆ. ಆದರೆ, ಕಾಂಗ್ರೆಸ್ ಗೊಂದಲ ಉಂಟಾಗದಂತೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ. ಯಾರ-ಯಾರ ಹೆಸರಿದೆ ಚಿತ್ರಗಳಲ್ಲಿ ನೋಡಿ....

ವಿಧಾನ ಪರಿಷತ್ತಿನಲ್ಲಿ ತಾರಾ ಅನುರಾಧ ವಿದಾಯದ ಭಾಷಣವಿಧಾನ ಪರಿಷತ್ತಿನಲ್ಲಿ ತಾರಾ ಅನುರಾಧ ವಿದಾಯದ ಭಾಷಣ

ಮೂವರು ನಾಮ ನಿರ್ದೇಶನ

ಮೂವರು ನಾಮ ನಿರ್ದೇಶನ

ಸರ್ಕಾರ ಸಾಹಿತ್ಯ, ಕಲೆ, ಚಿತ್ರರಂಗ ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಮೂವರು ಗಣ್ಯರನ್ನು ವಿಧಾನ ಪರಿಷತ್ತಿನ ಸದಸ್ಯ ಸ್ಥಾನಕ್ಕೆ ನಾಮ ನಿರ್ದೇಶನ ಮಾಡಬೇಕು. ನಾಮ ನಿರ್ದೇಶನಕ್ಕೆ ಕಾಂಗ್ರೆಸ್ ಐವರ ಹೆಸರನ್ನು ಆಯ್ಕೆ ಮಾಡಿದೆ ಎಂಬುದು ಸದ್ಯದ ಸುದ್ದಿ

* ಬರಗೂರು ರಾಮಚಂದ್ರಪ್ಪ
* ಮುಖ್ಯಮಂತ್ರಿ ಚಂದ್ರು
* ಯು.ಬಿ.ವೆಂಕಟೇಶ್ ಸೇರಿದಂತೆ 5 ಜನರ ಹೆಸರನ್ನು ಕಾಂಗ್ರೆಸ್ ಅಂತಿಮಗೊಳಿಸಿದೆ. ಇವರಲ್ಲಿ ಮೂವರನ್ನು ಪರಿಷತ್ತಿಗೆ ನಾಮ ನಿರ್ದೇಶನ ಮಾಡಲಾಗುತ್ತದೆ.

ವಿಧಾನಸಭೆಯಿಂದ ಆಯ್ಕೆ

ವಿಧಾನಸಭೆಯಿಂದ ಆಯ್ಕೆ

ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ 3 ಸದಸ್ಯರನ್ನು ಆಯ್ಕೆ ಮಾಡಲು ಅಕ್ಟೋಬರ್ 3ರಂದು ಚುನಾವಣೆ ನಡೆಯಲಿದೆ. ಈ ಚುನಾವಣೆಗೆ ಕಾಂಗ್ರೆಸ್ ನಾಲ್ವರ ಹೆಸರನ್ನು ಅಂತಿಮಗೊಳಿಸಿದೆ. ಇವರಲ್ಲಿ ಯಾರು ಆಯ್ಕೆಯಾಗಲಿದ್ದಾರೆ? ಎಂಬುದು ಸದ್ಯದ ಕುತೂಹಲ

* ವಾಸಂತಿ ಶಿವಣ್ಣ
* ನಿವೇದಿತ್ ಆಳ್ವಾ
* ಎಂ.ಸಿ.ವೇಣುಗೋಪಾಲ್
* ಮಲ್ಲಾಜಮ್ಮ ಹೆಸರುಗಳನ್ನು ಪಟ್ಟಿಯಲ್ಲಿ ಸೇರಿಸಲಾಗಿದ್ದು, ದೆಹಲಿಗೆ ಕಳುಹಿಸಲಾಗಿದೆ. (ಚಿತ್ರ :ನಿವೇದಿತ್ ಆಳ್ವಾ)

ಮೂವರ ರಾಜೀನಾಮೆಯಿಂದ ತೆರವು

ಮೂವರ ರಾಜೀನಾಮೆಯಿಂದ ತೆರವು

ಕೆ.ಎಸ್.ಈಶ್ವರಪ್ಪ, ಡಾ.ಜಿ.ಪರಮೇಶ್ವರ, ವಿ.ಸೋಮಣ್ಣ ಅವರು ವಿಧಾನಸಭೆ ಚುನಾವಣೆಯಲ್ಲಿ ಗೆದ್ದ ಬಳಿಕ ಅವರ ಪರಿಷತ್ ಸದಸ್ಯ ಸ್ಥಾನ ರದ್ದಾಗಿದೆ. ತೆರವಾದ ಈ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

ಕೆ.ಎಸ್.ಈಶ್ವರಪ್ಪ ಮತ್ತು ಪರಮೇಶ್ವರ ಅವರ ಅವಧಿ 2020 ಜೂನ್, ಸೋಮಣ್ಣ ಅವರ ಅವಧಿ 2022ರ ಜೂನ್ ತನಕ ಇತ್ತು. ಆದ್ದರಿಂದ, ಈಗ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಸಾಕಷ್ಟು ಕಾಲಾವಕಾಶ ಸಿಗಲಿದೆ. ಆದ್ದರಿಂದ, ಮೂರು ಸ್ಥಾನಗಳಿಗೆ ಆಕಾಂಕ್ಷಿಗಳು ಹೆಚ್ಚಿದ್ದಾರೆ.

ಅಕ್ಟೋಬರ್ 3ರಂದು ಚುನಾವಣೆ

ಅಕ್ಟೋಬರ್ 3ರಂದು ಚುನಾವಣೆ

ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ಇನ್ನೂ ಅಭ್ಯರ್ಥಿಗಳನ್ನು ಅಂತಿಮಗೊಳಿಸಿಲ್ಲ. ಸೆ.19ರಂದು ಬಿ.ಎಸ್.ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದ್ದು, ಅಭ್ಯರ್ಥಿಗಳು ಅಂತಿಮಗೊಳ್ಳುವ ಸಾಧ್ಯತೆ ಇದೆ.

ಮತ್ತೊಂದು ಕಡೆ 6 ಸ್ಥಾನಗಳ ಪೈಕಿ ಜೆಡಿಎಸ್‌ಗೆ 2 ಸ್ಥಾನಗಳು ಸಿಕ್ಕಿವೆ. ಆದರೆ, ಯಾರನ್ನು ಅಭ್ಯರ್ಥಿಯಾಗಿ ಆಯ್ಕೆ ಮಾಡಬೇಕು ಎಂದು ಜೆಡಿಎಸ್ ಇನ್ನೂ ತೀರ್ಮಾನಿಸಿಲ್ಲ.

English summary
Congress-JD(S) alliance will continue in Legislative Council election. 6 post will vacant in council. Congress will get 4 and JD(S) will get 2 seats according to alliance. Congress final the name for the post.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X