ಮಾರ್ಚ್ 21ಕ್ಕೆ ಕಾಂಗ್ರೆಸ್-ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ ಸಾಧ್ಯತೆ
ಬೆಂಗಳೂರು, ಮಾರ್ಚ್ 19: ಕಾಂಗ್ರೆಸ್-ಜೆಡಿಎಸ್ ಸೀಟು ಹಂಚಿಕೆ ಮುಗಿದಿದ್ದರೂ ಅಭ್ಯರ್ಥಿ ಆಯ್ಕೆ ಅಂತಿಮವಾಗಿಲ್ಲ, ಆದರೆ ಇನ್ನೆರಡು ದಿನದಲ್ಲಿ ಅಭ್ಯರ್ಥಿ ಆಯ್ಕೆಯು ಅಂತಿಮವಾಗಲಿದೆ ಎಂದು ಕಾಂಗ್ರೆಸ್ ಮುಖಂಡರು ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಅವರು, ಇನ್ನೆರಡು ದಿನಗಳಲ್ಲಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದಿದ್ದು, ಎಲ್ಲ ನಾಯಕರು ತಮ್ಮ ಅಸಮಾಧಾನಗಳನ್ನು ಬದಿಗಿಟ್ಟು ಮೈತ್ರಿ ಅಭ್ಯರ್ಥಿಗಳು ಚುನಾವಣೆಯಲ್ಲಿ ಭಾರಿ ಅಂತರದಿಂದ ಗೆಲ್ಲಲು ಶ್ರಮವಹಿಸಬೇಕು ಎಂದು ಹೇಳಿದ್ದಾರೆ.
ಮೂಲಗಳ ಪ್ರಕಾರ ಮಾರ್ಚ್ 21 ರ ಗುರುವಾರ ಎರಡೂ ಪಕ್ಷಗಳ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತದೆ ಎನ್ನಲಾಗುತ್ತಿದೆ.

ಇಂದಿನಿಂದ (ಮಾರ್ಚ್ 19) ನಾಮಪತ್ರ ಸಲ್ಲಿಕೆ ಆರಂಭವಾಗಿದೆ. ಮಾರ್ಚ್ 26 ಕ್ಕೆ ನಾಮಪತ್ರ ಸಲ್ಲಿಕೆ ಅಂತಿಮದಿನವಾಗಿದೆ. ರಾಜ್ಯದಲ್ಲಿ ಮೊದಲ ಹಂತದ ಮತದಾನ ಏಪ್ರಿಲ್ 18 ಕ್ಕೆ ನಡೆಯಲಿದೆ. ಏಪ್ರಿಲ್ 23ಕ್ಕೆ ಎರಡನೇ ಹಂತದ ಮತದಾನ ನಡೆಯಲಿದೆ. ಫಲಿತಾಂಶ ಮೇ 23ಕ್ಕೆ ಹೊರಬೀಳಲಿದೆ.












Click it and Unblock the Notifications