ಲೋಕಸಭಾ ಸೀಟು ಹಂಚಿಕೆ : ಕಾಂಗ್ರೆಸ್‌ ನಾಯಕರಿಗೆ ಪಟ್ಟಿ ಕೊಟ್ಟ ಜೆಡಿಎಸ್

Recommended Video

      Lok Sabha Elections 2019 : ಬಿಜೆಪಿಯನ್ನ ಅಧಿಕಾರದಿಂದ ದೂರ ಇಡುವುದೇ ನಮ್ಮ ಗುರಿ ಎಂದ ಸಿದ್ದರಾಮಯ್ಯ

      ಬೆಂಗಳೂರು, ಮಾರ್ಚ್ 04 : 'ಕಾಂಗ್ರೆಸ್-ಜೆಡಿಎಸ್ ನಡುವೆ ಸೀಟು ಹಂಚಿಕೆ ವಿಚಾರದಲ್ಲಿ ನಂಬರ್ ಮುಖ್ಯವಲ್ಲ. ಬಿಜೆಪಿಯನ್ನು ಅಧಿಕಾರದಿಂದ ದೂರ ಇಡುವುದೇ ನಮ್ಮ ಮುಖ್ಯ ಗುರಿ' ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

      ಸೋಮವಾರ ಕುಮಾರಕೃಪಾ ಅತಿಥಿಗೃಹದಲ್ಲಿ ಸಮನ್ವಯ ಸಮಿತಿ ಸಭೆ ನಡೆಯಿತು. ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಡಾ.ಜಿ.ಪರಮೇಶ್ವರ, ಕೆ.ಸಿ.ವೇಣುಗೋಪಾಲ್, ಡ್ಯಾನಿಷ್ ಅಲಿ ಪಾಲ್ಗೊಂಡಿದ್ದರು.

      ಸಮನ್ವಯ ಸಮಿತಿ ಸಭೆಗೂ ಮೊದಲು ಕಾಂಗ್ರೆಸ್ ನಾಯಕರು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರ ಜೊತೆ ಸಭೆ ನಡೆಸಿದರು. ಚಿಂಚೋಳಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಡಾ.ಉಮೇಶ್ ಜಾಧವ್ ರಾಜೀನಾಮೆ ಬಗ್ಗೆ ಮೊದಲು ಸಭೆಯಲ್ಲಿ ಚರ್ಚೆ ನಡೆಯಿತು.

      ಲೋಕಸಭಾ ಚುನಾವಣೆಗೆ ಸೀಟು ಹಂಚಿಕೆ ಮಾಡಿಕೊಳ್ಳುವ ಕುರಿತು ಸಭೆಯಲ್ಲಿ ಸುಧೀರ್ಘವಾದ ಚರ್ಚೆ ನಡೆಯಿತು. ಜೆಡಿಎಸ್ ನಾಯಕರು ತಮ್ಮ ಬೇಡಿಕೆಯ ಕ್ಷೇತ್ರಗಳ ಪಟ್ಟಿಯನ್ನು ಸಭೆಯಲ್ಲಿ ಕಾಂಗ್ರೆಸ್ ನಾಯಕರಿಗೆ ನೀಡಿದರು.

      ಸುದೀರ್ಘ ಚರ್ಚೆ ನಡೆದಿದೆ

      ಸುದೀರ್ಘ ಚರ್ಚೆ ನಡೆದಿದೆ

      'ಉತ್ತಮ ವಾತಾವರಣದಲ್ಲಿ ಕಾಂಗ್ರೆಸ್‌-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಬಗ್ಗೆ ಸಮನ್ವಯ ಸಮಿತಿ ಸಭೆಯಲ್ಲಿ ಸುಧೀರ್ಘವಾದ ಚರ್ಚೆ ನಡೆದಿದೆ. ಸರ್ಕಾರ ಸರಿಯಾದ ದಿಕ್ಕಿನಲ್ಲಿ ಸಾಗುತ್ತಿದೆ. ಲೋಕಸಭಾ ಚುನಾವಣೆಯನ್ನೂ ಒಟ್ಟಾಗಿ ಎದುರಿಸುತ್ತೇವೆ' ಎಂದು ಸಿದ್ದರಾಮಯ್ಯ ಹೇಳಿದರು.

      ಸಿದ್ದರಾಮಯ್ಯ ಹೇಳಿದ್ದೇನು?

      ಸಿದ್ದರಾಮಯ್ಯ ಹೇಳಿದ್ದೇನು?

      'ಲೋಕಸಭಾ ಚುನಾವಣೆ ಸೀಟು ಹಂಚಿಕೆ ಬಗ್ಗೆ ಸುದೀರ್ಘವಾದ ಚರ್ಚೆ ನಡೆದಿದೆ. ಮೊದಲ ಹಂತದ ಚರ್ಚೆ ಮುಕ್ತಾಯವಾಗಿದೆ. ಸೀಟು ಹಂಚಿಕೆ ಪ್ರಕ್ರಿಯೆ ಇಲ್ಲೇ ಬಗೆ ಹರಿಯುವ ವಿಶ್ವಾಸವಿದೆ' ಎಂದು ಸಿದ್ದರಾಮಯ್ಯ ಸಭೆಯ ಬಳಿಕ ಹೇಳಿದರು.

      ಜೆಡಿಎಸ್‌ ಪಟ್ಟಿ ಕೊಟ್ಟಿದ್ದಾರೆ

      ಜೆಡಿಎಸ್‌ ಪಟ್ಟಿ ಕೊಟ್ಟಿದ್ದಾರೆ

      'ಜೆಡಿಎಸ್ ಪಕ್ಷದವರು 12 ಸೀಟುಗಳಿಗೆ ಬೇಡಿಕೆ ಇಟ್ಟಿದ್ದಾರೆ. ಸಭೆಯಲ್ಲಿ ಈ ಕುರಿತು ಚರ್ಚೆ ನಡೆಸಲಾಯಿತು. ಜೆಡಿಎಸ್‌ ಪಕ್ಷದವರು ತಮಗೆ ಬೇಕಾದ ಸೀಟುಗಳ ಪಟ್ಟಿಯನ್ನು ಕೊಟ್ಟಿದ್ದಾರೆ. 2ನೇ ಹಂತದ ಚರ್ಚೆಯಲ್ಲಿ ಸೀಟು ಹಂಚಿಕೆ ಪ್ರಕ್ರಿಯೆ ಅಂತಿಮಗೊಳ್ಳುವ ಸಾಧ್ಯತೆ ಇದೆ' ಎಂದರು.

      ನಂಬರ್ ಬಗ್ಗೆ ಚಿಂತೆ ಇಲ್ಲ

      ನಂಬರ್ ಬಗ್ಗೆ ಚಿಂತೆ ಇಲ್ಲ

      'ಸೀಟು ಹಂಚಿಕೆಯ ನಂಬರ್ ಬಗ್ಗೆ ಕೇಳಬೇಡಿ. ನಂಬರ್‌ಗಿಂತ ಬಿಜೆಪಿಯನ್ನು ಅಧಿಕಾರದಿಂದ ದೂರವಿಡುವುದು ನಮಗೆ ಮುಖ್ಯ. ಮುಂದಿನ ವಾರದಲ್ಲಿ ಮತ್ತೊಮ್ಮೆ ಸಭೆ ನಡೆಸಿ ಸೀಟು ಹಂಚಿಕೆ ಕುರಿತು ಚರ್ಚೆ ನಡೆಸುತ್ತೇವೆ' ಎಂದು ಸಿದ್ದರಾಮಯ್ಯ ಹೇಳಿದರು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+