ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಾಂಗ್ರೆಸ್‌-ಜೆಡಿಎಸ್ ಅಸಮಾಧಾನದ ಲಾಭ ಬಿಜೆಪಿಗೆ?

|
Google Oneindia Kannada News

ಬೆಂಗಳೂರು, ಮಾರ್ಚ್ 12 : ಲೋಕಸಭಾ ಚುನಾವಣೆಯಲ್ಲಿ 20ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆಯಬೇಕು ಎಂಬುದು ಬಿಜೆಪಿಯ ಗುರಿಯಾಗಿದೆ. ಕಾಂಗ್ರೆಸ್-ಜೆಡಿಎಸ್ ನಡುವೆ ಅಸಮಾಧಾನವಿರುವ ಕ್ಷೇತ್ರಗಳ ಮೇಲೆ ಬಿಜೆಪಿ ಇದಕ್ಕಾಗಿ ಕಣ್ಣಿಟ್ಟಿದೆ.

ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನಿವಾಸದಲ್ಲಿ ನಡೆದ ಸಭೆಯಲ್ಲಿ ಮೂರು ಕ್ಷೇತ್ರಗಳ ಮೇಲೆ ಕಣ್ಣಿಡಲು ತೀರ್ಮಾನ ಕೈಗೊಳ್ಳಲಾಗಿದೆ. ಕಾಂಗ್ರೆಸ್ ನಾಯಕರ ವಿರುದ್ಧ ಅಸಮಾಧಾನಗೊಂಡಿರುವ ಎ.ಮಂಜು ಅವರು ಬಿಜೆಪಿ ಸೇರುವ ಸಾಧ್ಯತೆ ಇದೆ.

ಬಿಜೆಪಿ ಸೇರುವ ಬಗ್ಗೆ ಮಾಜಿ ಸಚಿವ ಎ.ಮಂಜು ಹೇಳಿದ್ದೇನು?ಬಿಜೆಪಿ ಸೇರುವ ಬಗ್ಗೆ ಮಾಜಿ ಸಚಿವ ಎ.ಮಂಜು ಹೇಳಿದ್ದೇನು?

ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಸೀಟು ಹಂಚಿಕೆ ಪ್ರಕ್ರಿಯೆ ಇನ್ನೂ ಅಂತಿಮವಾಗಿಲ್ಲ. ಅದರಲ್ಲೂ ಮಂಡ್ಯ, ಚಿಕ್ಕಬಳ್ಳಾಪುರ ಮತ್ತು ಹಾಸನ ಟಿಕೆಟ್ ವಿಚಾರದಲ್ಲಿ ಕಾಂಗ್ರೆಸ್-ಜೆಡಿಎಸ್ ನಡುವೆ ಅಸಮಾಧಾನವಿದೆ. ಇದನ್ನು ಬಳಕೆ ಮಾಡಿಕೊಳ್ಳಲು ಬಿಜೆಪಿ ಆಲೋಚನೆ ನಡೆಸಿದೆ.

ಹಾಸನದಿಂದ ಪ್ರಜ್ವಲ್ ರೇವಣ್ಣ ಸ್ಪರ್ಧಿಸಿದರೆ ಬೆಂಬಲಿಸಲ್ಲ : ಎ ಮಂಜುಹಾಸನದಿಂದ ಪ್ರಜ್ವಲ್ ರೇವಣ್ಣ ಸ್ಪರ್ಧಿಸಿದರೆ ಬೆಂಬಲಿಸಲ್ಲ : ಎ ಮಂಜು

ಮೈತ್ರಿ ಪಾಳಯ ಪ್ರಬಲವಾಗಿರುವ ಕ್ಷೇತ್ರಗಳಲ್ಲಿ ಅಸಮಾಧಾನದ ಲಾಭ ಪಡೆಯಬೇಕು ಎಂಬುದು ಬಿಜೆಪಿ ತಂತ್ರವಾಗಿದೆ. ಆದ್ದರಿಂದ, ಪಕ್ಷದ ನಾಯಕರ ವಿರುದ್ದ ಅಸಮಾಧಾನಗೊಳ್ಳುವ ನಾಯಕರನ್ನು ಸೆಳೆಯಲು ಬಿಜೆಪಿ ಮುಂದಾಗಿದೆ..

ಲೋಕಸಭಾ ಚುನಾವಣೆ 2019 : ಬಿಜೆಪಿ ಅಭ್ಯರ್ಥಿಗಳ ಸಂಭಾವ್ಯ ಪಟ್ಟಿಲೋಕಸಭಾ ಚುನಾವಣೆ 2019 : ಬಿಜೆಪಿ ಅಭ್ಯರ್ಥಿಗಳ ಸಂಭಾವ್ಯ ಪಟ್ಟಿ

ಹಾಸನ ಕ್ಷೇತ್ರದ ಅಸಮಾಧಾನ

ಹಾಸನ ಕ್ಷೇತ್ರದ ಅಸಮಾಧಾನ

ಹಾಸನ ಕ್ಷೇತ್ರದಲ್ಲಿ ಮಾಜಿ ಸಚಿವ ಎ.ಮಂಜು ಅವರು ಕಾಂಗ್ರೆಸ್ ನಾಯಕರ ವಿರುದ್ಧ ಅಸಮಾಧಾನಗೊಂಡಿದ್ದಾರೆ. ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಟ್ಟರೆ ಎಚ್.ಡಿ.ದೇವೇಗೌಡ ಅಭ್ಯರ್ಥಿಯಾಗಬೇಕು ಎಂಬುದು ಅವರ ಬೇಡಿಕೆ. ಆದರೆ, ಪ್ರಜ್ವಲ್ ರೇವಣ್ಣ ಅವರು ಜೆಡಿಎಸ್‌ನಿಂದ ಕಣಕ್ಕಿಳಿಯಲಿದ್ದಾರೆ. ಆದ್ದರಿಂದ, ಎ.ಮಂಜು ಅವರು ಬಿಜೆಪಿ ಸೇರಿ ಚುನಾವಣಾ ಕಣಕ್ಕಿಳಿಯುವ ಸಾಧ್ಯತೆ ಇದೆ.

ಚಿಕ್ಕಬಳ್ಳಾಪುರ ಕ್ಷೇತ್ರ

ಚಿಕ್ಕಬಳ್ಳಾಪುರ ಕ್ಷೇತ್ರ

ಚಿಕ್ಕಬಳ್ಳಾಪುರ ಕ್ಷೇತ್ರಕ್ಕಾಗಿ ಜೆಡಿಎಸ್ ಬೇಡಿಕೆ ಇಟ್ಟಿದೆ. ಆದರೆ, ಹಾಲಿ ಸಂಸದ ಕಾಂಗ್ರೆಸ್‌ನ ಎಂ.ವೀರಪ್ಪ ಮೊಯ್ಲಿ ಅವರು ಕ್ಷೇತ್ರ ಬಿಟ್ಟುಕೊಡಲು ಒಪ್ಪಿಗೆ ನೀಡಿಲ್ಲ. ಕಾಂಗ್ರೆಸ್‌-ಜೆಡಿಎಸ್‌ ನಡುವಿನ ಹಗ-ಜಗ್ಗಾಟದ ಲಾಭ ಪಡೆಯಲು ಬಿಜೆಪಿ ಚಿಂತನೆ ನಡೆಸಿದೆ. ಮಾಜಿ ಸಚಿವ ಬಚ್ಚೇಗೌಡ ಅಥವ ಅವರ ಪುತ್ರ ಶರತ್ ಬಚ್ಚೇಗೌಡ ಅವರು ಬಿಜೆಪಿ ಅಭ್ಯರ್ಥಿಯಾಗಲಿದ್ದಾರೆ.

ಮಂಡ್ಯ ಕ್ಷೇತ್ರ

ಮಂಡ್ಯ ಕ್ಷೇತ್ರ

ಮಂಡ್ಯ ಕ್ಷೇತ್ರವನ್ನು ಕಾಂಗ್ರೆಸ್ ಜೆಡಿಎಸ್‌ಗೆ ಬಿಟ್ಟುಕೊಟ್ಟಿದೆ. ಆದರೆ, ಜೆಡಿಎಸ್‌ನಿಂದ ನಿಖಿಲ್ ಕುಮಾರಸ್ವಾಮಿ ಕಣಕ್ಕಿಳಿಯಲು ಕಾಂಗ್ರೆಸ್‌ ಮತ್ತು ಜೆಡಿಎಸ್‌ನ ಕೆಲವು ನಾಯಕರು ಒಪ್ಪಿಗೆ ನೀಡುತ್ತಿಲ್ಲ. ಮತ್ತೊಂದು ಕಡೆ ಸುಮಲತಾ ಅವರು ಪಕ್ಷೇತರ ಅಭ್ಯರ್ಥಿಯಾಗಿ ಕ್ಷೇತ್ರದಿಂದ ಕಣಕ್ಕಿಳಿಯಲು ಬಯಸಿದ್ದಾರೆ. ಬಿಜೆಪಿ ಸುಮಲತಾ ಅವರಿಗೆ ಬೆಂಬಲ ನೀಡಲಿದೆಯೇ? ಕಾದು ನೋಡಬೇಕು.

ಮಾ.18ರ ಬಳಿಕ ತೀರ್ಮಾನ

ಮಾ.18ರ ಬಳಿಕ ತೀರ್ಮಾನ

ಮಾ.18ರ ಬಳಿಕ ಕರ್ನಾಟಕ ಬಿಜೆಪಿ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಲಿದೆ. ಎ.ಮಂಜು ಅವರು ಬುಧವಾರ ಬಿಜೆಪಿ ಸೇರಲಿದ್ದಾರೆ ಎಂಬ ಸುದ್ದಿ ಹಬ್ಬಿದೆ. ಹಾಸನಕ್ಕೆ ಎ.ಮಂಜು ಅಭ್ಯರ್ಥಿ ಎಂದು ಘೋಷಣೆ ಮಾಡಲಾಗುತ್ತದೆಯೇ? ಕಾದು ನೋಡಬೇಕು.

English summary
Karnataka BJP eye on Hassan, Mandya and Chikkaballapura lok sabha constituencies. Where Congress and JD(S) yet to final seat sharing for 2019 lok sabha elections.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X