ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಲೋಕಸಭಾ ಚುನಾವಣೆ : ಸೀಟು ಹಂಚಿಕೆ ಬಗ್ಗೆ ಮಿತ್ರರಲ್ಲಿ ಮೂಡಿಲ್ಲ ಒಮ್ಮತ

|
Google Oneindia Kannada News

ಬೆಂಗಳೂರು, ಫೆಬ್ರವರಿ 26 : ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳುವುದಾಗಿ ಘೋಷಣೆ ಮಾಡಿರುವ ಕಾಂಗ್ರೆಸ್‌-ಜೆಡಿಎಸ್ ಪಕ್ಷಗಳಿಗೆ ಸೀಟು ಹಂಚಿಕೆ ಪ್ರಕ್ರಿಯೆ ಕಗ್ಗಂಟಾಗಿದೆ. ಸೀಟು ಹಂಚಿಕೆ ಕುರಿತು ಚರ್ಚೆ ನಡೆಸಲು ಕರೆದಿದ್ದ ಸಭೆ ಒಮ್ಮತಕ್ಕೆ ಬಾರದೇ ಅಂತ್ಯವಾಗಿದೆ.

ಸುಮಾರು ಒಂದೂಕಾಲು ಗಂಟೆಗಳ ಕಾಲ ಕಾಂಗ್ರೆಸ್‌ ಮತ್ತು ಜೆಡಿಎಸ್ ನಾಯಕರು ಸಭೆ ನಡೆಸಿದರೂ ಒಮ್ಮತ ಮೂಡಿಲ್ಲ. ಕುಮಾರಕೃಪಾ ಅತಿಥಿಗೃಹದಲ್ಲಿ ನಡೆದ ಸಭೆಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಪಾಲ್ಗೊಂಡಿದ್ದರು.

ಹಾಸನದಿಂದ ದೇವೇಗೌಡರೇ ಸ್ಪರ್ಧಿಸಲಿ : ಪ್ರಜ್ವಲ್ ರೇವಣ್ಣಹಾಸನದಿಂದ ದೇವೇಗೌಡರೇ ಸ್ಪರ್ಧಿಸಲಿ : ಪ್ರಜ್ವಲ್ ರೇವಣ್ಣ

12 ಸೀಟುಗಳನ್ನು ಬಿಟ್ಟು ಕೊಡಬೇಕು ಎಂದು ಜೆಡಿಎಸ್ ಪಟ್ಟು ಹಿಡಿದಿದೆ. ಆದರೆ, ಕಾಂಗ್ರೆಸ್ ಇದಕ್ಕೆ ಒಪ್ಪಿಗೆ ನೀಡಿಲ್ಲ. ಸೀಟು ಹಂಚಿಕೆ ಪ್ರಕ್ರಿಯೆ ಅಂತಿಮಗೊಳ್ಳದಿದ್ದರೂ ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಮಧು ಬಂಗಾರಪ್ಪ ಅವರು ಅಭ್ಯರ್ಥಿ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಘೋಷಣೆ ಮಾಡಿದ್ದಾರೆ.

ಲೋಕಸಭೆ ಚುನಾವಣೆ: ಮೊದಲ ಅಭ್ಯರ್ಥಿ ಘೋಷಣೆ ಮಾಡಿದ ಜೆಡಿಎಸ್‌ಲೋಕಸಭೆ ಚುನಾವಣೆ: ಮೊದಲ ಅಭ್ಯರ್ಥಿ ಘೋಷಣೆ ಮಾಡಿದ ಜೆಡಿಎಸ್‌

ಮಾರ್ಚ್ 1 ಅಥವ 2ರಂದು ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಸಮನ್ವಯ ಸಮಿತಿ ಸಭೆ ನಡೆಯಲಿದ್ದು, ಅಂದು ಸೀಟು ಹಂಚಿಕೆ ಬಗ್ಗೆಯೂ ಚರ್ಚೆ ನಡೆಯಲಿದೆ. ಅಂತಿಮವಾಗಿ ಸೀಟು ಹಂಚಿಕೆ ಪ್ರಕ್ರಿಯೆ ದೆಹಲಿಗೆ ಹೋಗಿದೆ....

ಕೋಲಾರ ಕಾಂಗ್ರೆಸ್‌ ಅಭ್ಯರ್ಥಿ ಬಗ್ಗೆ ದೇವೇಗೌಡರ ಸಲಹೆ ಏನು?ಕೋಲಾರ ಕಾಂಗ್ರೆಸ್‌ ಅಭ್ಯರ್ಥಿ ಬಗ್ಗೆ ದೇವೇಗೌಡರ ಸಲಹೆ ಏನು?

ರಾಹುಲ್ ಗಾಂಧಿ ಜೊತೆ ಚರ್ಚೆ

ರಾಹುಲ್ ಗಾಂಧಿ ಜೊತೆ ಚರ್ಚೆ

ಒಂದೂವರೆ ಗಂಟೆಗಳ ಕಾಲ ಸಭೆ ನಡೆಸಿದರೂ ಅಂತಿಮ ತೀರ್ಮಾನಕ್ಕೆ ಬರಲು ಸಾಧ್ಯವಾಗಿಲ್ಲ. ಆದ್ದರಿಂದ, ಸೀಟು ಹಂಚಿಕೆ ಬಗ್ಗೆ ನಿರ್ಧಾರವನ್ನು ಕೈಗೊಳ್ಳುವ ಜವಾಬ್ದಾರಿಯನ್ನು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಮತ್ತು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರಿಗೆ ವಹಿಸಲಾಯಿತು.

12 ಸೀಟು ಸಿಗಬೇಕು

12 ಸೀಟು ಸಿಗಬೇಕು

ಸೀಟು ಹಂಚಿಕೆ ಬಗ್ಗೆ ಮಾತನಾಡಿರುವ ಎಚ್.ಡಿ.ದೇವೇಗೌಡ ಅವರು, '12 ಸೀಟು ಸಿಗಬೇಕು ಎಂಬುದು ನಮ್ಮ ನಿಲುವು. ಮತ್ತೊಮ್ಮೆ ಚರ್ಚೆ ನಡೆಸುತ್ತೇವೆ. ಅನಿವಾರ್ಯವಾದರೆ ದೆಹಲಿ ಮಟ್ಟದಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುತ್ತದೆ' ಎಂದು ಹೇಳಿದರು.

ಕ್ಷೇತ್ರ ಹಂಚಿಕೆ ಅಂತಿಮಗೊಳಿಸುತ್ತೇವೆ

ಕ್ಷೇತ್ರ ಹಂಚಿಕೆ ಅಂತಿಮಗೊಳಿಸುತ್ತೇವೆ

ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಈ ಕುರಿತು ಹೇಳಿಕೆ ನೀಡಿದ್ದು,'ಅಭ್ಯರ್ಥಿಗಳ ಶಕ್ತಿ ಮತ್ತು ಸಾಮರ್ಥ್ಯ ಆಧರಿಸಿ ಟಿಕೆಟ್ ಹಂಚುತ್ತೇವೆ. ಸಮನ್ವಯ ಸಮಿತಿ ಸಭೆಯಲ್ಲಿ ಕ್ಷೇತ್ರ ಹಂಚಿಕೆ ಅಂತಿಮಗೊಳಿಸುತ್ತೇವೆ' ಎಂದು ಹೇಳಿದರು.

ಶಿವಮೊಗ್ಗಕ್ಕೆ ಅಭ್ಯರ್ಥಿ ಘೋಷಣೆ

ಶಿವಮೊಗ್ಗಕ್ಕೆ ಅಭ್ಯರ್ಥಿ ಘೋಷಣೆ

ಸೀಟು ಹಂಚಿಕೆ ಅಂತಿಮಗೊಳ್ಳುವ ಮೊದಲೇ ಶಿವಮೊಗ್ಗ ಕ್ಷೇತ್ರಕ್ಕೆ ಮಧು ಬಂಗಾರಪ್ಪ ಅವರು ಅಭ್ಯರ್ಥಿ ಎಂದು ಘೋಷಣೆ ಮಾಡಲಾಗಿದೆ. 2018ರ ನವೆಂಬರ್‌ನಲ್ಲಿ ನಡೆದ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯನ್ನು ಕಣಕ್ಕಿಳಿಸದೇ ಜೆಡಿಎಸ್‌ ಬೆಂಬಲಿಸಿತ್ತು.

English summary
Karnataka Congress and JD(S) yet to final seat sharing formula for Lok Sabha elections 2019. JD(S) supremo H.D.Deve Gowda and AICC president Rahul Gandhi will take final decision.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X