ಕಾಂಗ್ರೆಸ್-ಜೆಡಿಎಸ್‌ನಿಂದ ಮತ್ತೊಂದು ಮೈತ್ರಿಗೆ ಅಖಾಡ ಸಜ್ಜು!
Recommended Video

ಬೆಂಗಳೂರು, ಸೆಪ್ಟೆಂಬರ್ 01: ವಿಧಾನಸಭೆ ಚುನಾವಣೆ ನಂತರ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಿರುವ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಈಗ ಮತ್ತೊಂದು ಮೈತ್ರಿಕೆ ಸಜ್ಜಾಗಿವೆ.
ನಿನ್ನೆಯಷ್ಟೆ ರಾಜ್ಯದ 105 ಸ್ಥಳೀಯ ಸಂಸ್ಥೆಗಳಿಗೆ ಮತದಾನ ಮುಗಿದಿದ್ದು ಫಲಿತಾಂಶ ಬಂದ ನಂತರ ಕಾಂಗ್ರೆಸ್-ಜೆಡಿಎಸ್ ಪಕ್ಷಗಳು ಅಲ್ಲಿಯೂ ಮೈತ್ರಿ ಮಾಡಿಕೊಳ್ಳುವುದು ಅಧಿಕೃತವಾಗಿದೆ.
ನಿನ್ನೆ ನಡೆದ ಸಮನ್ವಯ ಸಮಿತಿ ಸಭೆಯಲ್ಲಿ ಈ ಬಗ್ಗೆ ನಿರ್ಣಯ ಕೈಗೊಂಡಿದ್ದು. ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಫಲಿತಾಂಶ ಬಂದ ನಂತರ ಅವಶ್ಯಕತೆ ಇದ್ದಕಡೆ ಮೈತ್ರಿ ಮಾಡಿಕೊಳ್ಳುವುದಾಗಿ ನಿರ್ಧರಿಸಲಾಗಿದೆ.

ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿ ಈ ಬಗ್ಗೆ ಸ್ಪಷ್ಟಪಡಿಸಿರುವ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರು, ಎಲ್ಲೆಲ್ಲಿ ಬಹುಮತ ಇರುವುದಿಲ್ಲವೋ ಅಲ್ಲೆಲ್ಲಾ ಮೈತ್ರಿ ಮಾಡಿಕೊಳ್ಳುತ್ತೇವೆ. ಬಹುಮತ ಇದ್ದ ಕಡೆ ಮೈತ್ರಿ ಇರುವುದಿಲ್ಲ ಎಂದು ಮಾಹಿತಿ ನೀಡಿದ್ದಾರೆ.
ನಿನ್ನೆಯಷ್ಟೆ ರಾಜ್ಯದ 105 ಸ್ಥಳೀಯ ಸಂಸ್ಥೆಗಳಿಗೆ ಮತದಾನ ನಡೆದಿದ್ದು ಸೆಪ್ಟೆಂಬರ್ 1 ರಂದು ಫಲಿತಾಂಶ ಬರಲಿದೆ.
ಈಗಾಗಲೇ ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷಗಳು ಬಿಬಿಎಂಪಿಯಲ್ಲಿ ಮೈತ್ರಿ ಮಾಡಿಕೊಂಡು ಅಧಿಕಾರ ಹಿಡಿದಿವೆ. ಸ್ಥಳೀಯ ಸಂಸ್ಥೆಯಲ್ಲಿ ಮೈತ್ರಿ ಮಾಡಿಕೊಂಡು ಬಿಜೆಪಿಯನ್ನು ಎಲ್ಲ ಪ್ರಮುಖ ಆಡಳಿತ ಸಂಸ್ಥೆಗಳ ಅಧಿಕಾರದಿಂದ ದೂರ ಇಡುವ ತಂತ್ರ ಮಾಡುತ್ತಿದೆ.












Click it and Unblock the Notifications