ಎಚ್ಡಿಕೆ ಎದುರು ಕಾಂಗ್ರೆಸ್-ಜೆಡಿಎಸ್ ಕಾರ್ಯಕರ್ತರ ಬಡಿದಾಟ

ಚಿಕ್ಕಮಗಳೂರು, ಫೆ.10 : ಮೂಡಿಗೆರೆ ತಾಲೂಕಿನ ಬಲಿಗೆ ಗ್ರಾಮದಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ ಸಂಭವಿಸಿದೆ. ಸ್ಥಳಕ್ಕೆ ಬಿಜೆಪಿ ಶಾಸಕ ಸಿಟಿ ರವಿ ಆಗಮಿಸಿದ್ದರಿಂದ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಿದ್ದ, ಅವರಿಗೆ ಮುತ್ತಿಗೆ ಹಾಕಿ ಜೆಡಿಎಸ್ ಕಾರ್ಯಕರ್ತರು ಸ್ಥಳದಿಂದ ವಾಪಸ್ ತೆರಳುವಂತೆ ಒತ್ತಾಯಿಸುತ್ತಿದ್ದಾರೆ.

ಸುಪ್ರೀಂ ಕೋರ್ಟ್ ಆದೇಶದಂತೆ ಇನಾಂ ಭೂಮಿಯನ್ನು ಸರ್ಕಾರ ತೆರವು ಮಾಡಿದರೆ ರೈತರು ಸಂಕಷ್ಟಕ್ಕೆ ಸಿಲುಕುತ್ತಾರೆ. ಆದ್ದರಿಂದ ಭೂಮಿ ತೆರವು ಮಾಡಬಾರದು ಎಂದು ಆಗ್ರಹಿಸಿ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಮೂಡಿಗೆರೆ ತಾಲೂಕಿನ ಬಲಿಗೆ ಗ್ರಾಮದಲ್ಲಿ ಸೋಮವಾ ಪ್ರತಿಭಟನೆ ನಡೆಸುತ್ತಿದ್ದಾರೆ.

hd kumaraswamy

ಪ್ರತಿಭಟನೆ ಸಂದರ್ಭದಲ್ಲಿ ಜೆಡಿಎಸ್ ಕಾರ್ಯಕರ್ತರು ಸಿಎಂ ಸಿದ್ದರಾಮಯ್ಯ ವಿರುದ್ಧ ಘೋಷಣೆ ಕೂಗಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್ ಕಾರ್ಯಕರ್ತರು, ಜೆಡಿಎಸ್ ಸದಸ್ಯರೊಂದಿಗೆ ಹೊಡೆದಾಟ ಆರಂಭಿಸಿದರು. ಇದರಿಂದ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಪ್ರತಿಭಟನಾ ಸ್ಥಳಕ್ಕೆ ಬಿಜೆಪಿ ಶಾಸಕ ಸಿಟಿ ರವಿ ಆಗಮಿಸಿದ್ದರಿಂದ ಆಕ್ರೋಶಗೊಂಡ ಜೆಡಿಎಸ್ ಕಾರ್ಯಕರ್ತರು ಅವರಿಗೆ ಮುತ್ತಿಗೆ ಹಾಕಿ ಸ್ಥಳದಿಂದ ನಿರ್ಗಮಿಸುವಂತೆ ಒತ್ತಾಯಿಸಿದರು. [ರೈತರನ್ನು ಒಕ್ಕಲೆಬ್ಬಿಸಿದರೆ ಹೋರಾಟ ಎಚ್ಡಿಕೆ ಎಚ್ಚರಿಕೆ]

ಅರಣ್ಯ ಭೂಮಿಯಲ್ಲಿ ಅಕ್ರಮ ಸಾಗುವಳಿ ಮಾಡುತ್ತಿರುವವರನ್ನು ತೆರವುಗೊಳಿಸುವಂತೆ ಸುಪ್ರೀಂಕೋರ್ಟ್ ಸರ್ಕಾರಕ್ಕೆ ಸೂಚನೆ ನೀಡಿತ್ತು. ಕೋರ್ಟ್ ಆದೇಶದಂತೆ ರೈತರನ್ನು ಒಕ್ಕಲೆಬ್ಬಿಸಬಾರದೆಂದು ಎಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುತ್ತದೆ. ಸ್ಥಳೀಯ ಶಾಸಕ ಸಿಟಿ ರವಿ ಸ್ಥಳಕ್ಕೆ ಆಗಮಿಸಿದಾಗ, ಜೆಡಿಎಸ್ ಕಾರ್ಯಕರ್ತರು ನಿಮ್ಮ ಸರ್ಕಾರವಿದ್ದಾಗ ಈ ಕುರಿತು ಏಕೆ ಕ್ರಮ ಕೈಗೊಂಡಿಲ್ಲ ಎಂದು ಅವರನ್ನು ಪ್ರಶ್ನಿಸಿದರು, ಧರಣಿ ಸ್ಥಳದಿಂದ ತೆರಳುವಂತೆ ಒತ್ತಾಯಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+