'ಬೇಟಿ ಬಚಾವೋ ಎನ್ನುವುದು ಮೋದಿ ಪ್ರಚಾರಕ್ಕೆ ಇರುವ ಘೋಷಣೆಯೇ ಹೊರತು ನೈಜ ಕಾಳಜಿಯಲ್ಲ'
ಬೆಂಗಳೂರು, ಜುಲೈ. 31: 2019 ಮತ್ತು 2021 ರ ನಡುವಿನ ಮೂರು ವರ್ಷಗಳಲ್ಲಿ ದೇಶದಲ್ಲಿ 13.13 ಲಕ್ಷಕ್ಕೂ ಹೆಚ್ಚು ಬಾಲಕಿಯರು ಮತ್ತು ಮಹಿಳೆಯರು ಕಾಣೆಯಾಗಿದ್ದಾರೆ ಎನ್ನುವ ಆಘಾತಕಾರಿ ಅಂಶ ಬಹಿರಂಗವಾಗಿದೆ. ಇದರಲ್ಲಿ ಮಧ್ಯಪ್ರದೇಶದಲ್ಲೇ ಎರಡು ಲಕ್ಷಕ್ಕಿಂತ ಅಧಿಕ ಮಂದಿ ಕಾಣೆಯಾಗಿದ್ದಾರೆ. ರಾಜ್ಯದಲ್ಲಿಯೂ ಬರೋಬ್ಬರಿ 40 ಸಾವಿರ ಮಂದಿ ನಾಪತ್ತೆಯಾಗಿದ್ದಾರೆ.
ಈ ವಿಷಯವನ್ನಿಟ್ಟುಕೊಂಡು ಬಿಜೆಪಿ ಸರ್ಜಾರದ ವಿರುದ್ಧ ಕಿಡಿ ಕಾರಿರುವ ರಾಜ್ಯ ಕಾಂಗ್ರೆಸ್, "ಬೇಟಿ ಬಚಾವೋ" ಎನ್ನುವುದು ಮೋದಿಯವರ ಪ್ರಚಾರಕ್ಕೆ ಇರುವ ಘೋಷಣೆಯೇ ಹೊರತು ನೈಜ ಕಾಳಜಿಯಲ್ಲ ಎಂದು ಟೀಕಿಸಿದೆ. ಕರ್ನಾಟಕದಲ್ಲಿ ಕಳೆದ ಮೂರು ವರ್ಷಗಳಲ್ಲಿ ನಾಪತ್ತೆಯಾಗಿರುವವರ ಸಂಖ್ಯೆ ಇದು. ಕಳೆದ ವಾರ ಕೇಂದ್ರ ಗೃಹ ಸಚಿವಾಲಯ ಸಂಸತ್ತಿನಲ್ಲಿ ಈ ಅಂಕಿ ಅಂಶಗಳನ್ನು ಮಂಡಿಸಿದೆ.

"ಬೇಟಿ ಬಚಾವೋ ಎನ್ನುವುದು ಮೋದಿಯವರ ಪ್ರಚಾರಕ್ಕೆ ಇರುವ ಘೋಷಣೆಯೇ ಹೊರತು ನೈಜ ಕಾಳಜಿಯಲ್ಲ. ಕಳೆದ ಮೂರು ವರ್ಷಗಳಲ್ಲಿ ಬಿಜೆಪಿಯ ಡಬಲ್ ಇಂಜಿನ್ ಆಡಳಿತದ ಕರ್ನಾಟಕದಲ್ಲಿ 40,000 ಕ್ಕೂ ಹೆಚ್ಚು ಮಹಿಳೆಯರು ಹಾಗೂ ದೇಶದಲ್ಲಿ 13 ಲಕ್ಷಕ್ಕೂ ಹೆಚ್ಚು ಮಹಿಳೆಯರು ಕಾಣೆಯಾಗಿದ್ದಾರೆ. ಮಹಿಳೆಯರ ನಾಪತ್ತೆ ಪ್ರಕರಣಗಳು ಬಿಜೆಪಿ ಆಡಳಿತದ ರಾಜ್ಯಗಳಲ್ಲೇ ಹೆಚ್ಚು. ಬಿಜೆಪಿಯ ಅಚ್ಚೆ ದಿನಗಳಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲದಿರುವುದು ಪ್ರಮುಖ ವೈಫಲ್ಯ" ಎಂದು ಕಾಂಗ್ರೆಸ್ ಟೀಕಿಸಿದೆ.
ಕರ್ನಾಟಕದಲ್ಲಿ 40 ಸಾವಿರ ಮಂದಿ ಬಾಲಕಿಯರು, ಮಹಿಳೆಯರು ನಾಪತ್ತೆ
ಕಳೆದ ಮೂರು ವರ್ಷಗಳಲ್ಲಿ ಕರ್ನಾಟಕದಲ್ಲಿ 40 ಸಾವಿರ ಮಂದಿ ಬಾಲಕಿಯರು, ಮಹಿಳೆಯರು ನಾಪತ್ತೆಯಾಗಿದ್ದಾರೆ ಎಂದು ಕೇಂದ್ರ ಗೃಹ ಸಚಿವಾಲಯ ಸಂಸತ್ತಿನಲ್ಲಿ ತಿಳಿಸಿದೆ. ಈ ಮಾಹಿತಿಯ ಪ್ರಕಾರ 2019 ರಲ್ಲಿ 18 ವರ್ಷಕ್ಕಿಂತ ಕೆಳಗಿನ 703 ಬಾಲಕಿಯರು ಹಾಗೂ 18 ವರ್ಷ ಮೇಲ್ಪಟ್ಟ 12, 247 ಮಹಿಳೆಯರು ನಾಪತ್ತೆಯಾಗಿದ್ದಾರೆ. 2020 ರಲ್ಲಿ 834 ಬಾಲಕಿಯರು ಹಾಗೂ 11950, ಮಹಿಳೆಯರು, 2021 ರಲ್ಲಿ 1,237 ಬಾಲಕಿಯರು ಹಾಗೂ 12, 964 ಮಹಿಳೆಯರು ಕಾಣೆಯಾಗಿದ್ದಾರೆ.
ಈ ಅಂಕಿ ಅಂಶಗಳ ಪ್ರಕಾರ ಕಾಣೆಯಾಗುತ್ತಿರುವ ಬಾಲಕಿಯರ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ನಾಪತ್ತೆಯಾಗುತ್ತಿರುವ ಮಹಿಳೆಯರ ಸಂಖ್ಯೆಯಲ್ಲಿ ಏರಿಳಿತಗಳಿವೆ ಆದರೆ, ಬಾಲಕಿಯರ ಸಂಕ್ಯೆ ಏರಿಕೆಯಾಗುತ್ತಿರುವುದು ಆತಂಕದ ವಿಷಯವಾಗಿದೆ. ಮಾಹಿತಿ ಪ್ರಕಾರ ಈ 3 ವರ್ಷಗಳಲ್ಲಿ ಕರ್ನಾಟಕದಲ್ಲಿ 2,774 ಬಾಲಕಿಯರು ಹಾಗೂ 36,891 ಮಹಿಳೆಯರು ನಾಪತ್ತೆಯಾಗಿದ್ದಾರೆ.
ದೇಶದಲ್ಲಿ 2019 ಮತ್ತು 2021 ರ ನಡುವೆ 18 ವರ್ಷಕ್ಕಿಂತ ಮೇಲ್ಪಟ್ಟ 10,61,648 ಮಹಿಳೆಯರು ಮತ್ತು 18 ಕ್ಕಿಂತ ಕಡಿಮೆ ವಯಸ್ಸಿನ 2,51,430 ಹುಡುಗಿಯರು ನಾಪತ್ತೆಯಾಗಿದ್ದಾರೆ. ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (ಎನ್‌ಸಿಆರ್‌ಬಿ) ಈ ಡೇಟಾವನ್ನು ಸಂಗ್ರಹಿಸಿದೆ. ಇದನ್ನು ಕೇಂದ್ರ ಗೃಹ ಸಚಿವಾಲಯ ಸಂಸತ್ತಿನಲ್ಲಿ ಮಂಡಿಸಿದೆ.
-
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ











Click it and Unblock the Notifications