Anjali Nimbalka V/s Rashmika Mandanna: ಬೂಟು ನೆಕ್ಕುವುದು ನಿಲ್ಲಿಸಿ : ನಟಿ ರಶ್ಮಿಕಾ ಮಂದಣ್ಣಗೆ ಅಂಜಲಿ ನಿಂಬಾಳ್ಕರ್ ಚಾಟಿ!
ಬೆಂಗಳೂರು, ಮೇ. 17: ಕನ್ನಡ ಸಿನಿಮಾದಿಂದ ಬಾಲಿವುಡ್ ಚಿತ್ರರಂಗದಲ್ಲಿ ಹೆಸರು ಮಾಡುತ್ತಿರುವ ನಟಿ ರಶ್ಮಿಕಾ ಮಂದಣ್ಣ ಅವರು ಹೊಸದಾಗಿ ಉದ್ಘಾಟನೆಗೊಂಡ ಅಟಲ್ ಸೇತು ಸೇತುವೆಯನ್ನು ಶ್ಲಾಘಿಸಿದ್ದಾರೆ. ಇದು ಮುಂಬೈನ ಸಾರಿಗೆ ಪ್ರಯಾಣದಲ್ಲಿ ಗಮನಾರ್ಹ ಬದಲಾವಣೆ ಮಾಡಿದೆ ಎಂದು ಹೇಳಿದ್ದರು. ಇದಕ್ಕೆ ಕಾಂಗ್ರೆಸ್ ನಾಯಕಿ ಅಂಜಲಿ ನಿಂಬಾಳ್ಕರ್ ಕಿಡಿಕಾರಿದ್ದಾರೆ.
ಮುಂಬೈನ ಅಟಲ್ ಬಿಹಾರಿ ವಾಜಪೇಯಿ ಸೇವ್ರಿ-ನವ ಶೇವಾ ಅಟಲ್ ಸೇತು ಮತ್ತು ದೇಶದ ಮೂಲಸೌಕರ್ಯ ಅಭಿವೃದ್ಧಿ ಬಗ್ಗೆ ನಟಿ ರಶ್ಮಿಕಾ ಮಂದಣ್ಣ ವಿರುದ್ಧ ಪ್ರತಿಪಕ್ಷಗಳು ವಾಗ್ದಾಳಿ ನಡೆಸುತ್ತಿವೆ. ಕರ್ನಾಟಕ ಮಾಜಿ ಸಚಿವೆ ಡಾ. ಅಂಜಲಿ ನಿಂಬಾಳ್ಕರ್ ಅವರು ನಟಿ ರಶ್ಮಿಕಾ ಮಂದಣ್ಣ ಅವರಿಗೆ ಸ್ವಲ್ಪ ಕಾರವಾಗಿಯೇ ಪ್ರತಿಕ್ರಿಯಿಸಿದ್ದಾರೆ. ಜೊತೆಗೆ ಬೂಟು ನೆಕ್ಕುವುದನ್ನು ನಿಲ್ಲಿಸಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೂಟು ನೆಕ್ಕುವುದನ್ನು ನಿಲ್ಲಿಸಿ, ಇದು ನಿಮ್ಮನ್ನು ಮೆಗಾಸ್ಟಾರ್ ಮಾಡಲ್ಲ
ನಟಿ ರಶ್ಮಿಕಾ ಮಂದಣ್ಣ ವಿಡಿಯೋಗೆ ತಮ್ಮ ಅಧಿಕೃತ ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿಕ್ರಿಯಿಸಿರುವಮಾಜಿ ಸಚಿವೆ ಅಂಜಲಿ ನಿಂಬಾಳ್ಕರ್, ಬುಲೆಟ್ ರೈಲಿನ ಬಗ್ಗೆ ನಿಮಗೆ ಏನಾದರೂ ಹೇಳಲು ಇದೆಯೇ..? ಎಂದು ಬುಲೆಟ್ ಟ್ರೈನ್ ಬಗ್ಗೆ ಪ್ರಶ್ನಿಸಿದ್ದಾರೆ. ಇದಾದ ಬಳಿಕ 'ಮುಂಬೈ ಮತ್ತು ಅಹಮದಾಬಾದ್ ಬುಲೆಟ್ ರೈಲು : ಅದೊಂದು ನಿರ್ಮಾಣದ ದುರಂತ, ಬೂಟು ನೆಕ್ಕುವುದನ್ನು ನಿಲ್ಲಿಸಿ, ಇದು ನಿಮಗೆ ಮೆಗಾಸ್ಟಾರ್ ಮಾಡಲು ಯಾವುದೇ ಸಹಾಯ ಮಾಡುವುದಿಲ್ಲ" ಎಂದು ವಾಗ್ದಾಳಿ ನಡೆಸಿದ್ದಾರೆ.
Do you have anything to say about the Bullet train.
— Dr. Anjali Hemant Nimbalkar (@DrAnjaliTai) May 17, 2024
Mumbai - Ahmedabad Bullet Train: A disaster in the making.
Stop boot licking, this will not help u in making a megastar…
#AmchiMumbai#MyINDIA https://t.co/a1Sh8W2d1G
ರಶ್ಮಿಕಾ ಮಂದಣ್ಣಗೆ ಚೇತನ್ ಅಹಿಂಸಾ ತಿರುಗೇಟು
ಇನ್ನು, ನಟಿ ರಶ್ಮಿಕಾ ಮಂದಣ್ಣ ಅವರ ಮಾತುಗಳಿಗೆ ನಟ ಚೇತನ್ ತಿರುಗೇಟು ನೀಡಿದ್ದಾರೆ. "ಕಳೆದ 10 ವರ್ಷಗಳಲ್ಲಿ, ಭಾರತದ ಆದಾಯ ಅಸಮಾನತೆ ಗಗನಕ್ಕೇರಿದೆ ಮತ್ತು ಪ್ರಜಾಸತ್ತಾತ್ಮಕ ಸ್ವಾತಂತ್ರ್ಯಗಳು ದಾಳಿಗೆ ಒಳಗಾಗಿವೆ. ಯಾವುದೇ ಮೂರ್ಖ ಪಕ್ಷವು ಕಾಂಕ್ರೀಟ್ ಸುರಿಯಬಹುದು ಮತ್ತು ಮೂಲಸೌಕರ್ಯಗಳನ್ನು ನಿರ್ಮಿಸಬಹುದು. ಸಮಾಜವನ್ನು ಸುಸ್ಥಿರವಾಗಿ ಮತ್ತು ಸಮಾನವಾಗಿ ಅಭಿವೃದ್ಧಿಪಡಿಸಲು ನಿಜವಾದ ಒಳನೋಟದ ಅಗತ್ಯವಿದೆ.ಸೆಲೆಬ್ರಿಟಿಗಳ ಅಜ್ಞಾನವು ಸವಲತ್ತುಗಳ 'ಫ್ರ್ಯಾಕಿಂಗ್ ಬ್ರಿಲಿಯಂಟ್' ರೂಪವಾಗಿದೆ" ಎಂದು ಟೀಕಿಸಿದ್ದಾರೆ.
ಅಟಲ್ ಸೇತುವನ್ನು ಹೊಗಳಿದ ನಟಿ ರಶ್ಮಿಕಾ ಮಂದಣ್ಣ
"ದಕ್ಷಿಣ ಭಾರತದಿಂದ ಉತ್ತರ ಭಾರತಕ್ಕೆ... ಪಶ್ಚಿಮ ಭಾರತದಿಂದ ಪೂರ್ವ ಭಾರತಕ್ಕೆ... ಜನರನ್ನು ಸಂಪರ್ಕಿಸುತ್ತಿದೆ, ಹೃದಯಗಳನ್ನು ಸಂಪರ್ಕಿಸುತ್ತಿದೆ! ಮೈಇಂಡಿಯಾ" ಎಂಬ ಶೀರ್ಷಿಕೆಯಲ್ಲಿ ನಟಿ ರಶ್ಮಿಕಾ ಮಂದಣ್ಣ ವಿಡಿಯೋ ಒಂದನ್ನು ಶೇರ್ ಮಾಡಿಕೊಂಡಿದ್ದರು. ಅದರಲ್ಲಿ ಹೊಸದಾಗಿ ನಿರ್ಮಿಸಿದ 'ಮುಂಬೈ ಟ್ರಾನ್ಸ್ ಹಾರ್ಬರ್ ಲಿಂಕ್' ಕುರಿತು ಇಂಟ್ರಸ್ಟಿಂಗ್ ವಿಷಯಗಳನ್ನು ಹಂಚಿಕೊಂಡಿದ್ದಾರೆ.

ಈ ಅಟಲ್ ಸೇತುವೆಯನ್ನು ಗೇಮ್ ಚೇಂಜರ್ ಎಂದು ಕರೆದಿದ್ದು, ಸೇತುವೆಯು ಪ್ರಯಾಣದ ಸಮಯವನ್ನು ಹೇಗೆ ಗಮನಾರ್ಹವಾಗಿ ಕಡಿಮೆ ಮಾಡುತ್ತದೆ ಎಂಬುದನ್ನು ರಶ್ಮಿಕಾ ಮಂದಣ್ಣ ವಿವರಿಸಿದ್ದಾರೆ. ಹಿಂದಿನ ಎರಡು ಗಂಟೆಗಳ ಪ್ರಯಾಣವನ್ನು ಕೇವಲ 20 ನಿಮಿಷಗಳಿಗೆ ಕಡಿತಗೊಳಿಸಸುತ್ತದೆ ಎಂಬುದನ್ನು ವಿವರಿಸಿದ್ದಾರೆ. ಅವರ ಈ ವಿಡಿಯೋವನ್ನು ಪ್ರಧಾನಿ ನರೇಂದ್ರ ಮೋದಿ ಕೂಡ ರಿಟ್ವೀಟ್ ಮಾಡಿ ಹೊಗಳಿದ್ದಾರೆ.
-
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Rashmika Mandanna: ರಶ್ಮಿಕಾ ಮಂದಣ್ಣ - ವಿಜಯ್ ದೇವರಕೊಂಡ ಕನಸಿನ ಹನಿಮೂನ್: ವಿಶೇಷ ವಿಡಿಯೋ ಹಂಚಿಕೊಂಡ ಜೋಡಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ












Click it and Unblock the Notifications