ಮಾಜಿ ಸಚಿವನಿಗೆ ಪಕ್ಷದ ನಾಯಕಿಯಿಂದಲೇ ಅಶ್ಲೀಲ ಚಾಟ್, ಹನಿಟ್ರ್ಯಾಪ್!
ರಾಜ್ಯ ರಾಜಕಾರಣದಲ್ಲಿ ಮತ್ತೊಂದು ಹನಿಟ್ರ್ಯಾಪ್ ವಿಚಾರ ಸದ್ದು ಮಾಡುತ್ತಿದೆ. ಮಾಜಿ ಸಚಿವರೊಬ್ಬರಿಗೆ ಪಕ್ಷವೊಂದರ ನಾಯಕಿಯೇ ಹನಿಟ್ರ್ಯಾಪ್ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಪಕ್ಷದ ನಾಯಕಿಯನ್ನು ಪೊಲೀಸರು ಬಂಧಿಸಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ.
ಕಾಂಗ್ರೆಸ್ ನಾಯಕಿಯ ವಿರುದ್ಧ ಈ ಆರೋಪ ಕೇಳಿಬಂದಿದೆ. ಮಾಜಿ ಸಚಿವರೊಬ್ಬರಿಗೆ ಕಾಂಗ್ರೆಸ್ ನಾಯಕಿ ಅಶ್ಲೀಲ ಚಾಟ್ ಮಾಡುವ ಮೂಲಕ ಹನಿಟ್ರ್ಯಾಪ್ ಖೆಡ್ಡಾಗೆ ಬೀಳಿಸಿದ್ದರು ಎನ್ನಲಾಗಿದೆ. ಈ ಸಂಬಂಧ ನಾಯಕಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ಕಾಂಗ್ರೆಸ್‌ನಲ್ಲಿ ಗುರುತಿಸಿಕೊಂಡಿದ್ದ ಮಂಜುಳಾ ಎಂಬುವರ ಮೇಲೆ ಈ ಆರೋಪ ಕೇಳಿಬಂದಿದ್ದು, ಮೊದಲಿಗೆ ಮಾಜಿ ಸಚಿವರೊಬ್ಬರಿಗೆ ವಾಟ್ಸಪ್‌ನಲ್ಲಿ ಅಶ್ಲೀಲವಾಗಿ ಸಂದೇಶಗಳನ್ನು ಕಳಿಸಿದ್ದಾರೆ. ನಂತರ ಖಾಸಗಿ ವಿಡಿಯೋ ರೆಕಾರ್ಡ್ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಬಳಿಕ ಆ ರಾಜಕಾರಣಿಗೆ ಬರೋಬ್ಬರಿ 20 ಲಕ್ಷ ರೂಪಾಯಿ ಹಣ ನೀಡುವಂತೆ ಬ್ಲ್ಯಾಕ್‌ಮೇಲ್ ಮಾಡಲಾಗಿದೆ ಎಂದು ಹೇಳಲಾಗಿದೆ.
ಈ ಸಂಬಂಧ ಸಿಸಿಬಿ ಪೊಲೀಸರಿಗೆ ಮಾಜಿ ಸಚಿವರ ಪುತ್ರ ದೂರು ನೀಡಿದ್ದರು. ಹನಿಟ್ರ್ಯಾಪ್ ಮತ್ತು ಹಣ ಸುಲಿಗೆ ಆರೋಪದ ಮೇರೆಗೆ ದೂರು ದಾಖಲಿಸಿಕೊಂಡಿದ್ದ ಸಿಸಿಬಿ ಪೊಲೀಸರು ಮಂಜುಳಾ ಎಂಬುವರನ್ನು ಬಂಧಿಸಿದ್ದಾರೆ ಎನ್ನಲಾಗಿದೆ. ಇನ್ನು ಬಂಧಿತ ಆರೋಪಿಯಾಗಿರುವ ಮಂಜುಳಾ ಪಾಟೀಲ್ ಅವರು ಕಲಬುರಗಿಯ ನಲಪಾಡ್ ಬ್ರಿಗೇಡ್‌ನ ಅಧ್ಯಕ್ಷೆ ಎಂದು ತಿಳಿದುಬಂದಿದೆ. ಮಂಜುಳಾ ಅವರ ಜೊತೆಗೆ ಪತಿ ಶಿವರಾಜ್ ಪಾಟೀಲ್ ಅವರನ್ನು ಸಿಸಿಬಿ ಬಂಧಿಸಿದೆ.

ಯಾರು ಆ ರಾಜಕಾರಣಿ?: ಪೊಲೀಸರು ನೀಡಿರುವ ಮಾಹಿತಿ ಪ್ರಕಾರ ಕಾಂಗ್ರೆಸ್ ಮುಖಂಡರು ಹಾಗೂ ಮಾಜಿ ಸಚಿವ ಮಾಲಿಕಯ್ಯ ಗುತ್ತೇದಾರ್ ಅವರಿಗೆ ಈ ಆರೋಪಿ ಮಂಜುಳಾ ಅವರು ಬರೋಬ್ಬರಿ 20 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಲಾಗಿದೆ. ಇದರಲ್ಲಿ ಇವರಿಗೆ ಪತಿ ಕೂಡ ಸಾಥ್ ನೀಡಿರುವ ಆರೋಪವಿದ್ದು ಇಬ್ಬರನ್ನೂ ಪೊಲೀಸರು ಬಂಧಿಸಿದ್ದಾರೆ.
ಇನ್ನು ಮಾಜಿ ಸಚಿವರ ಪುತ್ರ ಸಿಸಿಬಿ ಪೊಲೀಸರಿಗೆ ಈ ಸುಲಿಗೆ ಸಂಬಂಧ ಮಂಜುಳಾ ಮೇಲೆ ದೂರು ನೀಡಿದ್ದರು. ಹಾಗಾಗಿ ಸಿಸಿಬಿ ಪೊಲೀಸರು ಮಂಜುಳಾ ಹಾಗೂ ಅವರ ಪತಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ಆರೋಪಿ ಮಹಿಳೆಯು ಕಲಬುರಗಿ ಮೂಲದವರು ಎನ್ನಲಾಗಿದೆ. ಇವರು ರಾಜಕಾರಣಿಗೆ 20 ಲಕ್ಷ ರೂಪಾಯಿ ನೀಡುವಂತೆ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಈ ವಿಚಾರವನ್ನು ರಾಜಕಾರಣಿಯ ಪುತ್ರ ಸಿಸಿಬಿ ಪೊಲೀಸರಿಗೆ ತಿಳಿಸಿದ್ದರು ಎನ್ನಲಾಗಿದೆ. ಅದರಂತೆ ಹಣ ಪಡೆದುಕೊಳ್ಳಲು ಮಂಜುಳಾ ಬೆಂಗಳೂರಿಗೆ ಬಂದಿದ್ದರು. ಈ ವೇಳೆ ಸಿಸಿಬಿ ಪೊಲೀಸರು ಇಬ್ಬರನ್ನೂ ಬಂಧಿಸಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ.












Click it and Unblock the Notifications