ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹಿಮಾಚಲ ಪ್ರದೇಶದ ಫಲಿತಾಂಶ ಯಾಕೆ ಕರ್ನಾಟಕದ ಮೇಲೆ ಪ್ರಭಾವ ಬೀರುವುದಿಲ್ಲ..? - ಬಿ.ಕೆ ಹರಿಪ್ರಸಾದ್‌

|
Google Oneindia Kannada News

ಬೆಂಗಳೂರು, ಡಿಸೆಂಬರ್‌, 8: ಗುಜರಾತ್‌ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಬಹುಮತ ಸಾಧಿಸಿದೆ. ಈ ಬಗ್ಗೆ ಕಾಂಗ್ರೆಸ್‌ ಮುಖಂಡ ಬಿ.ಕೆ ಹರಿಪ್ರಸಾದ್‌ ಪ್ರತಿಕ್ರಿಯಿಸಿದ್ದು, ಬಿಜೆಪಿ ಗೆಲುವಿನ ಬಗ್ಗೆ ಕಿಡಿಕಾರಿದ್ದಾರೆ.

ಚುನಾವಣಾ ಪ್ರಜಾಪ್ರಭುತ್ವ ಪ್ರಕ್ರಿಯೆಯಲ್ಲಿ ಪ್ರಜೆಗಳ ತೀರ್ಪಿಗೆ ತಲೆಬಾಗಬೇಕಿದೆ. ಗುಜರಾತ್ ಚುನಾವಣೆಯಲ್ಲಿ ನಮ್ಮ ಪಕ್ಷದ ನಿರೀಕ್ಷೆ ಹುಸಿಯಾಗಿದೆ. ಜನತೆ ಮಾಡಿದ ನಿರ್ಧಾರವನ್ನ ಸ್ವಾಗತಿಸುತ್ತೇವೆ. ಸಾಲು ಸಾಲು ಅಕ್ರಮಗಳು, ಆಡಳಿತ ಯಂತ್ರದ ದುರ್ಬಳಕೆ, ಪ್ರಜಾತಂತ್ರ ವ್ಯವಸ್ಥೆಯನ್ನೇ ಬುಡಮೇಲು ಮಾಡಿದ ಕೇಂದ್ರದ ಪ್ರಭುತ್ವಕ್ಕೆ ಕಾಲ ಉತ್ತರಿಸಲಿದೆ ಎಂದು ಬಿ.ಕೆ ಹರಿಪ್ರಸಾದ್‌ ಬಿಜೆಪಿ ವಿರುದ್ಧ ಗುಡುಗಿದ್ದಾರೆ.

ವಿಪಕ್ಷಗಳ ಹಾಲಿ ಶಾಸಕ ಅಭ್ಯರ್ಥಿಗಳ ಮೇಲೆಯೇ ಬಿಜೆಪಿ ಪಕ್ಷದ ಕಾರ್ಯಕರ್ತರು ನಡೆಸಿದ ಹಲ್ಲೆ, ನಾಮಪತ್ರ ಸಲ್ಲಿಸುವಾಗ ಅಭ್ಯರ್ಥಿಯನ್ನೇ ಅಪಹರಣ ಮಾಡಿದ ಘಟನೆ, ಪ್ರಧಾನಿ ಮೋದಿಯವರ ಚುನಾವಣೆ ಯಾತ್ರೆಗೆ ಸಹಕಾರ, ಚುನಾವಣೆ ದಿನವೂ ರೋಡ್ ಶೋ ಸೇರಿದಂತೆ ಅನೇಕ ಘಟನೆಗಳಿಗೆ ಚುನಾವಣೆ ಆಯೋಗ ತೋರಿದ ಅಸಾಹಯಕತೆಯ ಸಾಕ್ಷಿಯೇ ಗುಜರಾತಿನ ಫಲಿತಾಂಶ ಎಂದು ಅಸಮಾಧಾನ ಹೊರಹಾಕಿದ್ದಾರೆ.

Congress Leader B. K Hariprasad Reaction on Gujarat Election Result 2022

ಗುಜರಾತ್‌ನಲ್ಲಿ ಕಾಂಗ್ರೆಸ್‌ ಸೋಲಿನ ಬಗ್ಗೆ ಪ್ರತಿಕ್ರಿಯಿಸಿರುವ ಬಿ.ಕೆ ಹರಿಪ್ರಸಾದ್‌, ಕಾಂಗ್ರೆಸ್ ಪಕ್ಷ ಚುನಾವಣೆಯಲ್ಲಿ ಸೋತಿದೆ, ಸತ್ತಿಲ್ಲ. ನಮ್ಮ ಪಕ್ಷದ ಬೆನ್ನೆಲುಬಾಗಿರುವ ಕಾರ್ಯಕರ್ತರ ಜೊತೆಗೆ ಪಕ್ಷ ಬಲವಾಗಿ ನಿಲ್ಲಲಿದೆ. ಕೋಮು ಅಜೆಂಡಾಗಳು, ಮತೀಯ ಭಾವನೆಗಳು, ಹುಸಿ ಭರವಸೆಗಳು, ಕಾರ್ಯಕರ್ತರ ಕುಟುಂಬಗಳಿಗೆ ಹುಟ್ಟಿಸಿದ ಭಯದ ವಾತಾವರಣವನ್ನೂ ಮೀರಿಯೂ ಗುಜರಾತ್ ಜನತೆ ನಮಗೆ ಮತ ನೀಡಿದ್ದಾರೆ. ಅವರೆಲ್ಲರಿಗೂ ನನ್ನ ಕೃತಜ್ಞತೆಗಳು.

ಗುಜರಾತ್, ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆ 2022 - ಲೈವ್ ಫಲಿತಾಂಶಗಳುಗುಜರಾತ್, ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆ 2022 - ಲೈವ್ ಫಲಿತಾಂಶಗಳು

ಬಿದ್ದರೂ ಮೀಸೆ ಮಣ್ಣಾಗಿಲ್ಲ ಎಂಬಂತೆ ಪ್ರಧಾನಿ ಮೋದಿಯ ವರ್ಚಸ್ಸಿನ ಬಗ್ಗೆ ಗೋದಿ ಮೀಡಿಯಾ ಭಜನೆ ಮಾಡುತ್ತಿದೆ. ಹದಿನೈದು ವರ್ಷದ ದೆಹಲಿಯ ಪಾಲಿಕೆ ಬಿಜೆಪಿ ಕೈ ತಪ್ಪಿದೆ, ಅಧಿಕಾರದಲ್ಲಿದ್ದರೂ ಹಿಮಾಚಲ ಪ್ರದೇಶದಲ್ಲಿ ಸೋತು ಸುಣ್ಣವಾಗಿದ್ದರೂ ಪ್ರಧಾನಿಯ ಸುನಾಮಿ ಯಾವ ದಿಕ್ಕಿನಲ್ಲಿ ಎದ್ದಿರುವುದನ್ನು ದುರ್ಭೀನ ಹಾಕಿ ನೋಡಬೇಕಿದೆ ಎಂದಿದ್ದಾರೆ.

ಗುಜರಾತ್ ಚುನಾವಣೆಯ ಫಲಿತಾಂಶ ಕರ್ನಾಟಕ ಚುನಾವಣೆಯ ಮೇಲೆ ಪ್ರಭಾವ ಬೀರುವ ಬಗ್ಗೆ ಪ್ರತಿಕ್ರಿಯಿಸಿರುವ ಬಿ.ಕೆ ಹರಿಪ್ರಸಾದ್‌, ಗುಜರಾತ್ ಚುನಾವಣೆಯ ಫಲಿತಾಂಶ ಮಾತ್ರವೇ ಕರ್ನಾಟಕದ ಮೇಲೆ ಪ್ರಭಾವ ಬೀರುವುದಾದರೆ ಹಿಮಾಚಲ ಪ್ರದೇಶದ ಫಲಿತಾಂಶ ಯಾಕೆ ಪ್ರಭಾವ ಬೀರುವುದಿಲ್ಲ..? ರಾಷ್ಟ್ರ ರಾಜಧಾನಿಯಲ್ಲೇ ಮತದಾರರು ಮಣ್ಣು‌ ಮುಕ್ಕಿಸಿರುವುದು ಅಧಿಕಾರದಲ್ಲಿದ್ದ ಯಾವ ಪಕ್ಷಕ್ಕೆ..? ಪ್ರಧಾನಿಗಳ ಸುನಾಮಿ, ಬಿರುಗಾಳಿ ದೆಹಲಿ ಮತ್ತು ಹಿಮಾಚಲದ ಜನರತ್ತ ಬೀಸಲಿಲ್ವಾ..? ಎಂದು ಪ್ರಶ್ನಿಸಿದ್ದಾರೆ.

ಇನ್ನು ಕರ್ನಾಟಕದ ಭ್ರಷ್ಟ ಬಿಜೆಪಿ ಸರ್ಕಾರವನ್ನ ಕಿತ್ತೊಗೆಯಲು ಜನತೆ ನಿರ್ಧಾರ ಮಾಡಿಯಾಗಿದೆ. ಅದರಿಂದ ಪಾರಾಗಲು ಕರ್ನಾಟದ ಬಿಜೆಪಿ ಗುಜರಾತ್ ಫಲಿತಾಂಶದ ಬಿಲದಲ್ಲಿ ನುಸುಳುತ್ತಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವನ್ನ ಅಧಿಕಾರಕ್ಕೆ ತರಲು ಜನ ತೀರ್ಮಾನಿಸಿದ್ದಾರೆ. ಚುನಾವಣೆಯಿಂದ ಪಾಠ ಕಲಿತಿದ್ದೇವೆ. ನಾವು ಮತ್ತೆ ಅದುಮಿದಷ್ಟು ಎದ್ದು ಬರುತ್ತೇವೆ ಎಂದಿದ್ದಾರೆ.

English summary
Congress leader B. K Hariprasad Reaction on Gujarat Election Result.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X