ಬಿಜೆಪಿ ಸೇರಿದ ಮಾಜಿ ಸಚಿವ ಬಾಬೂರಾವ್ ಚಿಂಚನಸೂರು
ಬೆಂಗಳೂರು, ಆಗಸ್ಟ್ 29 : ಲೋಕಸಭೆ ಚುನಾವಣೆಗೆ ಮೊದಲೇ ಕಾಂಗ್ರೆಸ್ ಪಕ್ಷಕ್ಕೆ ಭಾರಿ ಹಿನ್ನಡೆ ಉಂಟಾಗಿದೆ. ಹೈದರಾಬಾದ್-ಕರ್ನಾಟಕ ಭಾಗದ ಪ್ರಭಾವಿ ನಾಯಕ ಬಾಬೂರಾವ್ ಚಿಂಚನಸೂರು ಅವರು ಬಿಜೆಪಿ ಸೇರಿದ್ದಾರೆ.
ಬುಧವಾರ ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಬಾಬೂರಾವ್ ಚಿಂಚನಸೂರು ಬಿಜೆಪಿ ಸೇರಿದರು. ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಮಾಜಿ ಸಚಿವರನ್ನು ಪಕ್ಷಕ್ಕೆ ಬರಮಾಡಿಕೊಂಡರು.
2018ರ ಚುನಾವಣೆಯಲ್ಲಿ ಗುರುಮಿಠಕಲ್ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧೆಸಿದ್ದ ಬಾನೂರಾವ್ ಚಿಂಚನಸೂರು ಅವರು 55,147 ಮತಗಳನ್ನು ಪಡೆದು, ಜೆಡಿಎಸ್ ನಾಗನಗೌಡ ವಿರುದ್ಧ ಸೋಲು ಅನುಭವಿಸಿದ್ದರು.

'ವಿಧಾನಸಭೆ ಚುನಾವಣೆಯಲ್ಲಿ ತಮ್ಮ ಸೋಲಿಗೆ ಸ್ವ ಪಕ್ಷದವರೇ ಕಾರಣ. ಆದ್ದರಿಂದ ಪಕ್ಷ ತೊರೆಯುತ್ತಿದ್ದೇನೆ' ಎಂದು ಬಾಬೂರಾವ್ ಚಿಂಚನಸೂರು ಕೆಲವು ದಿನಗಳ ಹಿಂದೆ ಹೇಳಿದ್ದರು.
2008 ಮತ್ತು 2013ರ ಚುನಾವಣೆಯಲ್ಲಿ ಗುರುಮಿಠಕಲ್ ಕ್ಷೇತ್ರದಲ್ಲಿ ಅವರು ಜಯಗಳಿಸಿದ್ದರು. 2013ರ ಚುನಾವಣೆ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟದಲ್ಲಿ ಜವಳಿ, ಆಂತರಿಕ ಸಾರಿಗೆ, ಬಂದರು ಖಾತೆ ಸಚಿವರಾಗಿದ್ದರು. ಸಂಪುಟ ಪುನಾರಚನೆ ಸಮಯದಲ್ಲಿ ಸಚಿವ ಸ್ಥಾನ ಕಳೆದುಕೊಂಡಿದ್ದರು.
ಹೈದರಾಬಾದ್ ಕರ್ನಾಟಕ ಭಾಗದ ಪ್ರಭಾವಿ ನಾಯಕರಾದ ಬಾಬೂರಾವ್ ಚಿಂಚನಸೂರು ಅವರು 5 ಬಾರಿ ಶಾಸಕರಾಗಿದ್ದರು. ಎಸ್.ಎಂ.ಕೃಷ್ಣ ಅವರ ಸರ್ಕಾರದಲ್ಲಿ ಮುಜರಾಯಿ ಸಚಿವರಾಗಿದ್ದರು.
-
ಮಾರ್ಚ್ 19ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ಇನ್ಮುಂದೆ KPSC ಮೂಲಕ ಪ್ರತಿ ವರ್ಷ ಗ್ರೂಪ್ A, B ಅಧಿಕಾರಿಗಳ ನೇಮಕಾತಿ: ಕೃಷ್ಣ ಬೈರೇಗೌಡ ಸ್ಪಷ್ಟನೆ -
ಔಷಧಿ ಪೂರೈಸುವ ಕೆಸ್ಎಂಸಿಎಲ್ಗೆ ಐಎಎಸ್ ಅಧಿಕಾರಿ ಮುಖ್ಯಸ್ಥ, ಇ-ಔಷಧಿ ಸಾಫ್ಟವೇರ್ ಜಾರಿ: ದಿನೇಶ್ ಗುಂಡೂರಾವ್ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ












Click it and Unblock the Notifications