ವಿಧಾನಪರಿಷತ್ ಸದಸ್ಯ ಭೈರತಿ ಸುರೇಶ್ ರಾಜೀನಾಮೆ

ಬೆಂಗಳೂರು, ಏಪ್ರಿಲ್ 09 : ವಿಧಾನಪರಿಷತ್ ಸದಸ್ಯ ಭೈರತಿ ಸುರೇಶ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಯಾಗಿ ಅವರು ಹೆಬ್ಬಾಳ ಕ್ಷೇತ್ರದಿಂದ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲಿದ್ದಾರೆ.

ವಿಧಾನಪರಿಷತ್ ಸದಸ್ಯ ಭೈರತಿ ಸುರೇಶ್ ಭಾನುವಾರ ಸಂಜೆ ವಿಧಾನಪರಿಷತ್ ಸಭಾಪತಿ ಡಿ.ಎಚ್.ಶಂಕರಮೂರ್ತಿ ಅವರನ್ನು ಭೇಟಿ ಮಾಡಿ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಡಿ.ಎಚ್.ಶಂಕರಮೂರ್ತಿ ಅವರು ರಾಜೀನಾಮೆ ಅಂಗೀಕರಿಸಿದ್ದಾರೆ.

ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಬಿಜೆಪಿ ಅಭ್ಯರ್ಥಿಗಳ ಮೊದಲ ಅಧಿಕೃತ ಪಟ್ಟಿ ಪ್ರಕಟ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರಮಾಪ್ತರಾದ ಭೈರತಿ ಸುರೇಶ್ 2018ರ ವಿಧಾನಸಭೆ ಚುನಾವಣೆಗೆ ಹೆಬ್ಬಾಳ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ. ಈಗಾಗಲೇ ಟಿಕೆಟ್ ನೀಡುವಂತೆ ಕೆಪಿಸಿಸಿಗೆ ಅರ್ಜಿ ಸಲ್ಲಿಸಿದ್ದಾರೆ.

Congress leader Byrathi Suresh quits legislative council member post

ಭೈರತಿ ಸುರೇಶ್ ಅವರ ವಿಧಾನ ಪರಿಷತ್ ಸದಸ್ಯತ್ವದ ಅವಧಿ ಇನ್ನೂ ಮೂರು ತಿಂಗಳು ಬಾಕಿ ಇತ್ತು. ಆದರೆ, ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಕಾರಣದಿಂದಾಗಿ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಭೈರತಿ ಸುರೇಶ್ ಅವರು ಸಿದ್ದರಾಮಯ್ಯ ಅವರ ಆಪ್ತರಾಗಿರುವ ಕಾರಣ ಟಿಕೆಟ್ ಸಿಗುವ ನಿರೀಕ್ಷೆ ಇದೆ. ಈಗಾಗಲೇ ಅವರು ಕ್ಷೇತ್ರದಲ್ಲಿ ಪ್ರಚಾರ ಕಾರ್ಯವನ್ನು ಆರಂಭಿಸಿದ್ದಾರೆ. ಹಿರಿಯ ಕಾಂಗ್ರೆಸ್ ನಾಯಕ ಸಿ.ಕೆ.ಜಾಫರ್ ಷರೀಫ್ ಮೊಮ್ಮಗ ರೆಹಮಾನ್ ಷರೀಫ್ ಅವರು ಸಹ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ.

ಹೆಬ್ಬಾಳ ಕ್ಷೇತ್ರದಲ್ಲಿ 2013ರ ಚುನಾವಣೆಯಲ್ಲಿ ಮಾಜಿ ಸಚಿವ ಕಟ್ಟಾ ಸುಬ್ರಮಣ್ಯ ನಾಯ್ಡು ಆಪ್ತ ಆರ್.ಜಗದೀಶ್ ಜಯಗಳಿಸಿದ್ದರು. ಆದರೆ, ಹೃದಯಾಘಾತದಿಂದ ಅವರು ಮೃತಪಟ್ಟಿದ್ದರಿಂದ ಉಪ ಚುನಾವಣೆ ಎದುರಾಗಿತ್ತು. 2016ರಲ್ಲಿ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿಯ ವೈ.ಎ.ನಾರಾಯಣ ಸ್ವಾಮಿ ಗೆಲುವು ಸಾಧಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+