• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಕಾಂಗ್ರೆಸ್ ಮುಖಂಡ ಈಶ್ವರ್ ಖಂಡ್ರೆ ಅವರಿಗೆ ಕೊರೊನಾವೈರಸ್

|

ಬೆಂಗಳೂರು, ಏಪ್ರಿಲ್ 06: ಕರ್ನಾಟಕದ ಮಾಜಿ ಸಚಿವ ಮತ್ತು ಕಾಂಗ್ರೆಸ್ ಕಾರ್ಯದರ್ಶಿ ಈಶ್ವರ್ ಖಂಡ್ರೆ ಅವರಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.

"ಇಂದು ಸಣ್ಣ ಪ್ರಮಾಣದಲ್ಲಿ ರೋಗ ಲಕ್ಷಣಗಳು ಕಂಡು ಬಂದಿರುವ ಕಾರಣ ಕೊವಿಡ್-19 ಪರೀಕ್ಷೆಗೆ ಮಾಡಿಕೊಂಡಿದ್ದು ವರದಿ ಪಾಸಿಟಿವ್ ಎಂದು ಬಂದಿದ್ದು ಯಾರು ಆತಂಕ ಪಡುವ ಅಗತ್ಯವಿಲ್ಲ ಕೊವಿಡ್ ನಿಯಮಗಳ ಪ್ರಕಾರ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದೇನೆ" ಎಂದು ಈಶ್ವರ್ ಖಂಡ್ರೆ ಟ್ವೀಟ್ ಮಾಡಿದ್ದಾರೆ.

ಕರ್ನಾಟಕ: ಆರ್‌ಟಿ-ಪಿಸಿಆರ್ ಪರೀಕ್ಷಾ ವರದಿ ವಿಳಂಬವೇ ದೊಡ್ಡ ತಲೆನೋವು

"ಕಳೆದ ಕೆಲವು ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದಿರುವ ಎಲ್ಲರೂ ಕೋವಿಡ್ ಪರೀಕ್ಷೆ ಮಾಡಿಕೊಂಡು ಸುರಕ್ಷಿತವಾಗಿರಿ. ನಿಮ್ಮೆಲ್ಲರ ಆಶೀರ್ವಾದ ಹಾಗೂ ಶುಭ ಹಾರೈಕೆಗಳಿಂದ ಆದಷ್ಟು ಬೇಗ ಮತ್ತೆ ಜನಸೇವೆಗೆ ಮರಳುತ್ತೇನೆ" ಎಂದು ಮನವಿ ಮಾಡಿಕೊಂಡಿದ್ದಾರೆ.

ರಾಜ್ಯದಲ್ಲಿ ಕೊರೊನಾವೈರಸ್ ಸೋಂಕಿನ ಸ್ಫೋಟ:

ಕರ್ನಾಟಕದಲ್ಲಿ ಒಂದೇ ದಿನ 6150 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಒಂದು ದಿನದಲ್ಲಿ 39 ಮಂದಿ ಮಹಾಮಾರಿಗೆ ಬಲಿಯಾಗಿದ್ದರೆ, ಇದೇ ಅವಧಿಯಲ್ಲಿ 3487 ಸೋಂಕಿತರು ಗುಣಮುಖರಾಗಿದ್ದಾರೆ. ಕರ್ನಾಟಕದಲ್ಲಿ ಒಟ್ಟು 1026584ಕ್ಕೆ ಕೊರೊನಾವೈರಸ್ ಸೋಂಕಿತ ಪ್ರಕರಣಗಳಿವೆ. ಈ ಪೈಕಿ 968762 ಸೋಂಕಿತರು ಗುಣಮುಖರಾಗಿದ್ದು, ಸೋಂಕಿಗೆ ಈವರೆಗೂ 12696 ಮಂದಿ ಪ್ರಾಣ ಬಿಟ್ಟಿದ್ದಾರೆ. ಇದರ ಹೊರತಾಗಿ ರಾಜ್ಯದಲ್ಲಿ 45107 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

   ಎರಡನೇ ಬಾರಿ Bus Strike ಮಾಡಿದರು ಕ್ಯಾರೆ ಅನ್ನೋರಿಲ್ಲಾ!! | Oneindia Kannada

   English summary
   Congress Leader Eshwar Khandre Tested Positive For COVID-19.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X