Virat Kohli: ವಿರಾಟ್ ಕೊಹ್ಲಿ ಒಬ್ಬ RSS ಕಾರ್ಯಕರ್ತ: ಕೆಪಿಸಿಸಿ ವಕ್ತಾರ ಸ್ಪಷ್ಟನೆ

ಮೈಸೂರು, ಫೆಬ್ರವರಿ 25: ಚಾಂಪಿಯನ್ಸ್ ಟ್ರೋಫಿಯ ಪಾಕಿಸ್ತಾನ ಮತ್ತು ಭಾರತ ನಡುವಿನ ಪಂದ್ಯ ದುಬೈನ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆದಿದ್ದು, ಪಾಕಿಸ್ತಾನದ ವಿರುದ್ಧ ಭಾರತ ಆರು ವಿಕೆಟ್ ಗಳಿಂದ ಗೆದ್ದು ಬೀಗಿದೆ. ಭಾರತ 45 ಎಸೆತಗಳು ಬಾಕಿ ಇರುವಂತೆ 4 ವಿಕೆಟ್ ನಷ್ಟಕ್ಕೆ 244 ರನ್ ಪೇರಿಸಿ ಗೆಲುವಿನ ನಗೆ ಬೀರಿತು. ಈ ಟೂರ್ನಿಯಲ್ಲಿ ಭಾರತದ ಅಜೇಯ ಓಟ ಮುಂದುವರೆದರೆ, ಪಾಕಿಸ್ತಾನದ ಸೋಲಿನ ಸರಣಿ ಮುಂದುವರೆದಿದ್ದು, ಈ ಮಧ್ಯ ವಿರಾಟ್ ಕೊಹ್ಲಿ ಆರ್ಎಸ್ಎಸ್ ಕಾರ್ಯಕರ್ತ ಎನ್ನುವ ಪೋಸ್ಟ್ ಹರಿದಾಡುತ್ತಿದೆ.

ಹೌದು, ಐಸಿಸಿ ಚಾಂಪಿಯನ್ಸ್ ಟ್ರೋಫಿ 2025ರಲ್ಲಿ ಭಾರತ ಎರಡು ಪಂದ್ಯಗಳನ್ನು ಗೆದ್ದು ಬೀಗಿದೆ. ಪಾಕಿಸ್ತಾನ ವಿರುದ್ಧದ ಮ್ಯಾಚ್‌ನಲ್ಲಿ ವಿರಾಟ್ ಕೊಹ್ಲಿ ಸೆಂಚುರಿ ಬಾರಿಸಿ ತಂಡವನ್ನು ಗೆಲುವಿನ ದಡ ಸೇರಿಸಿದ್ದಾರೆ. ಅಲ್ಲದೇ 111 ಬಾಲ್‌ಗಳಲ್ಲಿ 100 ರನ್ ಹೊಡೆದ ಭಾರತೀಯ ಕ್ರಿಕೆಟಿಗ ವಿರಾಟ್‌ ಕೊಹ್ಲಿ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಇದಾದ ಬಳಿಕ ವಿರಾಟ್ ಕೊಹ್ಲಿ ಬಗ್ಗೆ ನಾನಾ ರೀತಿಯ ಪೋಸ್ಟ್ಗಳು ಹರಿದಾಡುತ್ತಿವೆ. ಅದರಂತೆ ವಿರಾಟ್ ಕೊಹ್ಲಿ ಒಬ್ಬ ಆರ್‌ ಎಸ್‌ ಎಸ್( RSS )‌ ಕಾರ್ಯಕರ್ತನೇ ಇರಬೇಕು ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಹೆಸರಿನಲ್ಲಿ ಪೋಸ್ಟ್ ಹರಿದಾಡುತ್ತಿದೆ.

Congress Leader M Lakshman Clarify about derogatory post On Indian Cricketer Virat Kohli

ಭಾನುವಾರ ದುಬೈ ಅಂತಾರಾಷ್ಟ್ರೀಯ ಸ್ಟೇಡಿಯಂ ನಡೆದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅವರ ಅದ್ಭುತ ಶತಕದ ನೆರವಿನಿಂದ ಭಾರತ ತಂಡ ಪಾಕಿಸ್ತಾನವನ್ನು 6 ವಿಕೆಟ್‌ಗಳಿಂದ ಸೋಲಿಸಿತು. 2025ರ ಚಾಂಪಿಯನ್ಸ್ ಟ್ರೋಫಿಯಿಂದ ಪಾಕಿಸ್ತಾಮನ ಹೊರಬಿದ್ದಿತು. ಇನ್ನೂ ಭಾರತೀಯ ಕ್ರಿಕೆಟರ್‌ ವಿರಾಟ್‌ ಕೊಹ್ಲಿ ಆರ್​ಎಸ್​ಎಸ್​ ಕಾರ್ಯಕರ್ತ ಎನ್ನುವ ಪೋಸ್ಟ್​ ಹರಿದಾಡುತ್ತಿದ್ದು, ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ಹೆಸರಿನಲ್ಲಿ ಈ ಪೋಸ್ಟ್‌ ಮಾಡಲಾಗಿದೆ. ಹೀಗಾಗಿ ಈ ಪೋಸ್ಟ್‌ ಕುರಿತು ಸ್ವತಃ ಕಾಂಗ್ರೆಸ್‌ ಮುಖಂಡರಾದ ಎಂ ಲಕ್ಷ್ಮಣ್ ಅವರೇ ಸ್ಪಷ್ಟೀಕರಣ ನೀಡಿದ್ದಾರೆ.

ತನ್ನ ಹೆಸರಿನಲ್ಲಿ ವಿರಾಟ್ ಕೊಹ್ಲಿ ಬಗ್ಗೆ ಆಕ್ಷೇಪಾರ್ಹ ರೀತಿಯ ಹೇಳಿಕೆಯ ಪೋಸ್ಟ್ ಬಗ್ಗೆ ಸ್ಪಷ್ಟನೆ ನೀಡಿದ ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ ಅವರು, ಬಿಜೆಪಿಯವರಿಗೆ ನಾಚಿಕೆ ಮಾನ ಮರ್ಯಾದೆ ಇಲ್ಲ. ಈ ರಾಜ್ಯದ ಜನತೆಗೆ ಬರೀ ಸುಳ್ಳನ್ನ ಹೇಳುತ್ತಾ ಬಂದಿದ್ದಾರೆ. ಅದಕ್ಕೆ ಇದೊಂದು ಸಣ್ಣ ಉದಾಹರಣೆ. ನನ್ನ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ವಿರಾಟ್ ಕೊಹ್ಲಿಯ ಹೆಸರನ್ನು ಬಳಸಿಕೊಂಡು ಹಿಂದುಗಳ ಭಾವನೆಯನ್ನು ಕೆಣಿಸುವಂತಹ ಪೋಸ್ಟ್‌ಗಳನ್ನು ಹಾಕಿದ್ದಾರೆ. ಇದು ನಾಚಿಕೆಗೇಡಿನ ಸಂಗತಿ ಹಾಗೂ ಸದ್ಯದಲ್ಲೇ ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಬಿಜೆಪಿ ವಿರುದ್ಧ ಕಾಂಗ್ರೆಸ್‌ ಮುಖಂಡ ಲಕ್ಷ್ಮಣ್‌ ಅವರು ತೀವ್ರ ವಾಗ್ದಾಳಿ ನಡೆಸಿದರು.

ಪೋಸ್ಟ್​ನಲ್ಲಿ ಏನಿದೆ?

ಫೆಬ್ರವರಿ 23 ರಂದು ಟೀಂ ಇಂಡಿಯಾ ಪಾಕಿಸ್ತಾನ ವಿರುದ್ಧ ಗೆದ್ದು ಬೀಗಿದೆ. ಅದರಲ್ಲೂ ವಿರಾಟ್​ ಕೊಹ್ಲಿ ಶತಕ ಬಾರಿಸಿದ್ದಕ್ಕೆ ಮೆಚ್ಚುಗೆ ಪೋಸ್ಟ್​ಗಳು ಹರಿದಾಡುತ್ತಿದ್ದವು. ಈ ಮಧ್ಯ ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ಹೆಸರಿನಲ್ಲಿ ವಿರಾಟ್ ಕೊಹ್ಲಿ ಬಗ್ಗೆ ಆಕ್ಷೇಪಾರ್ಹ ರೀತಿ ಹೇಳಿಕೆ ಪೋಸ್ಟ್ ವೈರಲ್ ಆಗಿತ್ತು. ಪಾಕ್ ನೆಲದಲ್ಲಿ ಪಾಕಿಗಳ ಎದುರೇ ಶತಕ ಸಿಡಿಸಿ ಪಾಕಿಗಳಿಗೆ ಅವಮಾನ ಮಾಡಿ ಭಾರತ ಗೆದ್ದು ಬಂದಿದ್ದು ನೋಡಿದರೆ ವಿರಾಟ್ ಕೊಹ್ಲಿ ಒಬ್ಬ RSS ಕಾರ್ಯಕರ್ತನೇ ಇರಬೇಕು ಎಂದು ಎಂ ಲಕ್ಷ್ಮಣ್ ಹೆಸರಿನಲ್ಲಿ ಪೋಸ್ಟ್ ಮಾಡಲಾಗಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+