ಗುಜರಾತ್‌ನಲ್ಲಿ ಆಪ್‌ ಪಕ್ಷದವರು ನಮ್ಮ ಮತಗಳನ್ನು ತಿಂದು ಬಿಟ್ಟಿದ್ದಾರೆ -ಸಿದ್ದರಾಮಯ್ಯ

ಬೆಂಗಳೂರು, ಡಿಸೆಂಬರ್‌ 8: ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್‌ ಹಾಗೂ ಬಿಜೆಪಿ ನಡುವೆ ಜಿದ್ದಾಜಿದ್ದಿಯ ಸ್ಪರ್ಧೆ ಇರಲಿದೆ. ಗುಜರಾತ್‌ನಲ್ಲಿ ಬಿಜೆಪಿ ಬರಲಿದೆ ಎನ್ನುವುದರ ಬಗ್ಗೆ ನಮಗೆ ಮಾಹಿತಿ ಇತ್ತು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುಜರಾತ್‌ನಲ್ಲಿ ಬಿಜೆಪಿ ಬರುವುದರಲ್ಲಿ ಆಶ್ಚರ್ಯ ಏನಿಲ್ಲ. ಯಾಕೆಂದರೆ ಆಮ್ ಆದ್ಮಿ ಪಕ್ಷದವರು ಚುನಾವಣೆಗೆ ನಿಂತು, ನಮ್ಮ ಮತಗಳನ್ನೇ ತಿಂದು ಬಿಟ್ಟಿದ್ದಾರೆ. ಎಲ್ಲಾ ಕ್ಷೇತ್ರಗಳಲ್ಲಿ ಆಮ್ ಆದ್ಮಿ ಪಕ್ಷದವರು ಕಾಂಗ್ರೆಸ್‌ ಮತಗಳನ್ನೇ ತಿಂದಿದ್ದಾರೆ. ಹೀಗಾಗಿ ಗುಜರಾತ್‌ನಲ್ಲಿ ಕಾಂಗ್ರೆಸ್‌ಗೆ ಹಿನ್ನೆಡೆಯಾಗಿದೆ ಎಂದರು.

Recommended Video

      Gujarat Assembly Elections: ಗೆದ್ದ ಶಾಸಕರನ್ನು ಬಿಜೆಪಿ ತನ್ನ ತೆಕ್ಕೆಗೆ ಸೆಳೆಯಬಹುದು ಎಂಬ ಭೀತಿಯಲ್ಲಿ ಕಾಂಗ್ರೆಸ್

      ಹಿಮಾಚಲ ಪ್ರದೇಶದಲ್ಲಿ ಈ ರೀತಿ ಆಗಿಲ್ಲ. ಅಲ್ಲಿ ನಾವು ಮುನ್ನಡೆಯಲ್ಲಿದ್ದೇವೆ. ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸುತ್ತದೆ ಎನ್ನುವ ಮಾಹಿತಿ ನಮಗೆ ಇತ್ತು. ನಾನೇನು ಅಲ್ಲಿಗೆ ಹೋಗಿಲ್ಲ. ಆದರೆ ಮಾಹಿತಿ ಪ್ರಕಾರ ಕಾಂಗ್ರೆಸ್‌ ಪರವಾಗಿತ್ತು ಎಂದು ಹೇಳಿದರು.

      Congress Leader Siddaramaiah Reaction on Gujarat and Himachal Pradesh Election Result 2022

      ಇನ್ನು ಗುಜರಾತ್‌ ಫಲಿತಾಂಶದ ಪರಿಣಾಮ ಕರ್ನಾಟಕದ ಮೇಲೆ ಪ್ರಭಾವ ಬೀರಲಿದೆಯಾ ಎನ್ನುವುದರ ಬಗ್ಗೆ ಮಾತನಾಡಿದ ಅವರು, ಒಂದು ರಾಜ್ಯದ ಫಲಿತಾಂಶ ಮತ್ತೊಂದು ರಾಜ್ಯದ ಮೇಲೆ ಪರಿಣಾಮ ಬೀರುವುದಿಲ್ಲ. ಒಂದು ವೇಳೆ ಬೀರುವುದಾದರೆ ದೆಹಲಿಯಲ್ಲಿ ಯಾಕೆ ಬಿಜೆಪಿ ಗೆದ್ದಿಲ್ಲ. ಹಾಗೆಯೇ ಒಂದು ರಾಜ್ಯದ ಫಲಿತಾಂಶ ಮತ್ತೊಂದು ರಾಜ್ಯದ ಮೇಲೆ ಪರಿಣಾಮ ಬೀರಲ್ಲ ಎಂದು ಹೇಳಿದರು.

      ಗುಜರಾತ್‌ ವಿಧಾನಸಭಾ ಚುನಾವಣೆ ಮತ ಎಣಿಕೆಯಲ್ಲಿಗುರುವಾರ 12:30ಕ್ಕೆ ಬಿಜೆಪಿ 154 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದರೆ, ಕಾಂಗ್ರೆಸ್‌ 19 ಕ್ಷೇತ್ರಗಳಲ್ಲಿ, ಆಮ್ ಆದ್ಮಿ ಪಕ್ಷ 6 ಕ್ಷೇತ್ರದಲ್ಲಿ, ಹಾಗೂ ಇತರರು 3 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದೆ. ಇನ್ನು ಹಿಮಾಚಲ ಪ್ರದೇಶದ ವಿಧಾನಸಭಾ ಚುನಾವಣೆ ಮತ ಎಣಿಕೆಯಲ್ಲಿ ಬಿಜೆಪಿ 27 ಕ್ಷೇತ್ರಗಳಲ್ಲಿ, ಕಾಂಗ್ರೆಸ್‌ 38 ಕ್ಷೇತ್ರಗಳಲ್ಲಿ, ಆಮ್ ಆದ್ಮಿ ಪಕ್ಷ 0 ಕ್ಷೇತ್ರದಲ್ಲಿ, ಹಾಗೂ ಇತರರು 3 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+