ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಎಸ್ಕಾಂ ಗೆ ನೀಡಿದ್ದು 6000 ಕೋಟಿಯೋ, 9000 ಕೋಟಿಯೋ?: ಸಿದ್ದರಾಮಯ್ಯ ಪ್ರಶ್ನೆ

|
Google Oneindia Kannada News

ಬೆಂಗಳೂರು,ಜನವರಿ13: ರಾಜ್ಯ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಎಸ್ಕಾಂ ಗಳಿಗೆ ನೀಡಿದ್ದು 6000 ಕೋಟಿಯೋ, 9000 ಕೋಟಿಯೋ? ಯಾವುದು ನಿಜ ಲೆಕ್ಕ? ಯಾವುದು ಸುಳ್ಳು ಲೆಕ್ಕ? ಎಂಬುದನ್ನು ಸುನೀಲ್ ಕುಮಾರ್ ಅವರು ಮೊದಲು ಹೇಳಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಮಕರ ಸಂಕ್ರಾಂತಿ ವಿಶೇಷ ಪುಟ

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಟ್ವೀಟರ್ ಮೂಲಕ ಸಚಿವ ಸುನೀಲ್ ಕುಮಾರ್ ಅವರಿಗೆ ತಿರುಗೇಟು ನೀಡಿದ್ದಾರೆ.

ಸುಮಲತಾ ಬಿಜೆಪಿ ಸೇರ್ಪಡೆ ವಿಚಾರದ ಬಗ್ಗೆ ಸಿ.ಪಿ. ಯೋಗೇಶ್ವರ್‌ ಹೇಳಿದ್ದೇನು?, ಇಲ್ಲಿದೆ ವಿವರಸುಮಲತಾ ಬಿಜೆಪಿ ಸೇರ್ಪಡೆ ವಿಚಾರದ ಬಗ್ಗೆ ಸಿ.ಪಿ. ಯೋಗೇಶ್ವರ್‌ ಹೇಳಿದ್ದೇನು?, ಇಲ್ಲಿದೆ ವಿವರ

2013ರಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬರುವ ಹೊತ್ತಿಗೆ ಹಿಂದಿನ ಸರ್ಕಾರ ವಿದ್ಯುತ್ ಇಲಾಖೆಯ ಮೇಲೆ ದೊಡ್ಡ ಮೊತ್ತದ ಸಾಲದ ಗಂಟನ್ನು ಹೊರಿಸಿ ಹೋಗಿತ್ತು, ಸಾಲ ಮಾಡಿ ಈ ಎಸ್ಕಾಂಗಳ ಬಾಕಿ ಮೊತ್ತ ತೀರಿಸಿ, ಕುತ್ತಿಗೆವರೆಗೂ ಮುಳುಗಿದ್ದ ಎಸ್ಕಾಂಗಳನ್ನು ಮೇಲೆತ್ತಿದವರು ನಾವು ಸುನೀಲ್ ಕುಮಾರ್ ಎಂದು ಟ್ವೀಟ್ ಮಾಡಿದ್ದಾರೆ.

Congress Leader siddaramaiah Slams Minister Sunil Kumar

ಅಗತ್ಯ ಇರುವ ಕ್ಷೇತ್ರಕ್ಕೆ ಹಣ ಹಾಕುವುದನ್ನು ನಷ್ಟ ಎನ್ನುವುದಿಲ್ಲ, ಬದಲಾಗಿ ಬಂಡವಾಳ ಹೂಡಿಕೆ ಎನ್ನುತ್ತಾರೆ ಎಂಬ ಅರ್ಥ ಶಾಸ್ತ್ರದ ಸರಳ ತತ್ವದ ಅರಿವಿಲ್ಲದ ಸುನೀಲ್ ಕುಮಾರ್ ಅವರ ಜ್ಞಾನಭಂಡಾರದ ಬಗ್ಗೆ ಅನುಕಂಪವಿದೆ.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗ 2014-15 ರಲ್ಲಿ ರಾಜ್ಯದಲ್ಲಿ ಒಟ್ಟು ಉತ್ಪಾದನೆಯಾಗುತ್ತಿದ್ದ ವಿದ್ಯುತ್ 14,825 ಮೆ.ವ್ಯಾ ಮಾತ್ರ. ಅದರಲ್ಲಿ ಸೋಲಾರ್ ಮೂಲದಿಂದ 118 ಮೆ.ವ್ಯಾ ಮತ್ತು ಗಾಳಿ ಮೂಲದಿಂದ 2655 ಮೆ. ವ್ಯಾ ವಿದ್ಯುತ್ ಉತ್ಪಾದನೆ ಆಗುತ್ತಿತ್ತು. 2018 ರ ವೇಳೆಗೆ ಸೋಲಾರ್ ಮೂಲದಿಂದ 6157 ಮೆ.ವ್ಯಾ. ಮತ್ತು ಗಾಳಿ ಮೂಲದಿಂದ 4730 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆ ಮಾಡುವ ಶಕ್ತಿ ತುಂಬಿದವರು ನಾವು.
ವಿದ್ಯುತ್ ಉತ್ಪಾದನೆ ಹೆಚ್ಚಾದರೆ ಇಲಾಖೆಗೆ ಲಾಭವಾಗುತ್ತಾ? ನಷ್ಟವಾಗುತ್ತಾ ಸುನೀಲ್ ಕುಮಾಇರ್ ಅವರೇ.? ಎಂದು ಪ್ರಶ್ನಿಸಿದ್ದಾರೆ.

ಕಲ್ಲಿದ್ದಲು ಮೂಲದ ಉಷ್ಣ ವಿದ್ಯುತ್ ಉತ್ಪಾದನೆ 2014-15 ರಲ್ಲಿ 6,197 ಮೆಗಾವ್ಯಾಟ್ ಇದ್ದದ್ದು, 2018 ರ ವೇಳೆಗೆ 11,366 ಮೆಗಾವ್ಯಾಟ್ ಗೆ ತಲುಪಿತ್ತು. ಸುನೀಲ್ ಕುಮಾರ್ ಅವರೇ, ಇಂದು ನೀವು ವಿದ್ಯುತ್ ಮಾರಾಟ ಮಾಡಿ ಲಾಭ ಗಳಿಸುತ್ತಿದ್ದರೆ ಅದರ ಹಿಂದಿರುವುದು ನಮ್ಮ ಸರ್ಕಾರದ ಶ್ರಮ.

2014-15 ರಲ್ಲಿ ನವೀಕರಿಸಬಹುದಾದ ಇಂಧನ ಮೂಲದಿಂದ ಒಟ್ಟು ಉತ್ಪಾದನೆಯಾಗುತ್ತಿದ್ದ ವಿದ್ಯುತ್ ಪ್ರಮಾಣ 4,855 ಮೆಗಾ ವ್ಯಾಟ್. 2018 ರ ವೇಳೆಗೆ ಇದು 13,500 ಮೆಗಾ ವ್ಯಾಟ್ ಗಿಂತ ಹೆಚ್ಚಾಯಿತು. ಇದನ್ನು ನಷ್ಟ ಎಂದು ಯಾವ ಗಣಿತದ ಲೆಕ್ಕ ಹೇಳುತ್ತದೆ ಸುನೀಲ್ ಕುಮಾರ್ ಅವರೇ ಎಂದು ಪ್ರಶ್ನಿಸಿದ್ದಾರೆ.

ಒಂದು ಕಾಲದಲ್ಲಿ ಕೇವಲ 2-3 ಗಂಟೆ ವಿದ್ಯುತ್ ಒದಗಿಸಲು ಸಂಕಷ್ಟ ಪಡುತ್ತಿದ್ದ ರಾಜ್ಯವು 2018 ರ ವೇಳೆಗೆ 28,741 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆ ಮಾಡುವ ಹಂತಕ್ಕೆ ತಲುಪಿತ್ತು. ನಮ್ಮ 5 ವರ್ಷಗಳ ಆಡಳಿತದ ಅವಧಿಯಲ್ಲಿ 13,175 ಮೆಗಾವ್ಯಾಟ್ ವಿದ್ಯುತ್ ಉತ್ಪಾದನಾ ಸಾಮರ್ಥ್ಯ ಹೆಚ್ಚಿಸಿದ್ದೆವು. ರಾಜ್ಯದ ಅಗತ್ಯತೆಗೆ ಸಾಕಾಗಿ, ಹೊರರಾಜ್ಯಗಳಿಗೆ ಮಾರಾಟ ಮಾಡುವಷ್ಟು ವಿದ್ಯುತ್ ಅನ್ನು ನಾವೇ ಉತ್ಪಾದನೆ ಮಾಡುತ್ತಿದ್ದರು, ದುಪ್ಪಟ್ಟು ದರ ನೀಡಿ ಹೊರಗಿನಿಂದ ಖರೀದಿ ಮಾಡುತ್ತಿರುವ ನಿಮ್ಮ ಬಿಜೆಪಿ ಸರ್ಕಾರ ಎಸ್ಕಾಂ ಗಳನ್ನು ಉದ್ಧಾರ ಮಾಡಿದೆ ಎಂಬುದು ತಮಾಷೆಯಾಗಿದೆ ಎಂದು ಕಿಡಿಕಾರಿದ್ದಾರೆ.

ಸಚಿವ ಸುನೀಲ್ ಕುಮಾರ್ ಅವರ ಅಸಾಮರ್ಥ್ಯಕ್ಕೆ ತಕ್ಕುದಾಗಿ ರಾಜ್ಯದ ವಿದ್ಯುತ್ ಇಲಾಖೆ ಕೆಲಸ ಮಾಡುತ್ತಿದೆ. ನಾವು ಅಧಿಕಾರಕ್ಕೆ ಬಂದ ಮೇಲೆ ಇಲಾಖೆಯನ್ನು ಲಾಭದ ಹಳಿಗೆ ತಂದು, ರಾಜ್ಯದ ಜನರಿಗೆ ಉಚಿತವಾಗಿ 200 ಯುನಿಟ್ ವಿದ್ಯುತ್ ನೀಡುತ್ತೇವೆ. ಸಚಿವ ಸುನೀಲ್ ಕುಮಾರ್ ಅವರ ಅಸಾಮರ್ಥ್ಯಕ್ಕೆ ತಕ್ಕುದಾಗಿ ರಾಜ್ಯದ ವಿದ್ಯುತ್ ಇಲಾಖೆ ಕೆಲಸ ಮಾಡುತ್ತಿದೆ. ನಾವು ಅಧಿಕಾರಕ್ಕೆ ಬಂದ ಮೇಲೆ ಇಲಾಖೆಯನ್ನು ಲಾಭದ ಹಳಿಗೆ ತಂದು, ರಾಜ್ಯದ ಜನರಿಗೆ ಉಚಿತವಾಗಿ 200 ಯುನಿಟ್ ವಿದ್ಯುತ್ ನೀಡುತ್ತೇವೆ.

ಸನ್ಮಾನ್ಯ ಸುನೀಲ್ ಕುಮಾರ್ ಅವರೇ, ನಾವು ನುಡಿದಂತೆ ನಡೆಯುವವರು. ಈ ಬಗ್ಗೆ ಅನುಮಾನವೇ ಬೇಡ. ರಾಜ್ಯದ ಜನರಿಗೆ 200 ಯುನಿಟ್ ಉಚಿತ ಘೋಷಣೆ ಮಾಡಿ, ಕಾರ್ಯಕ್ರಮಕ್ಕೆ ನಿಮ್ಮನ್ನೂ ಆಹ್ವಾನಿಸುತ್ತೇವೆ. ತಪ್ಪದೇ ಬನ್ನಿ ಎಂದು ಟ್ವೀಟ್ ಮಾಡಿದ್ದಾರೆ.

English summary
Did BJP give Eskom 6000 crore or 9000 crore after coming to power? Congress Leader Siddaramaiah's question
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X