• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Sonia Gandhi Karnataka Visit : ಕರ್ನಾಟಕಕ್ಕೆ ಇಂದು ಸೋನಿಯಾಗಾಂಧಿ; ಅ.6ರಂದು ಭಾರತ್ ಜೋಡೊ ಯಾತ್ರೆಯಲ್ಲಿ ಭಾಗಿ

|
Google Oneindia Kannada News

ಬೆಂಗಳೂರು, ಅ.3: ರಾಜ್ಯ ವಿಧಾನಸಭಾ ಚುನಾವಣೆಗೆ ಕೆಲವು ತಿಂಗಳು ಬಾಕಿ ಇರುವಾಗಲೇ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆ ಭರ್ಜರಿ ರಂಗು ಪಡೆಯುತ್ತಿದೆ. ಯಾತ್ರೆ ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು, ಉತ್ತಮ ಪ್ರತಿಕ್ರಿಯೆಯೂ ವ್ಯಕ್ತವಾಗುತ್ತಿದೆ. ಈ ಮಧ್ಯೆ ಅ.6ರಂದು ಕಾಂಗ್ರೆಸ್ ನಾಯಕಿ ಸೋನಿಯಾಗಾಂಧಿ ಅವರೂ ಸಹ ಕರ್ನಾಟಕದಲ್ಲಿ ನಡೆಯುವ ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಮೂಲಗಳ ಪ್ರಕಾರ ಸೋನಿಯಾಗಾಂಧಿ ಅವರು ಅ.3 ಸೋಮವಾರವೇ ಕರ್ನಾಟಕಕ್ಕೆ ಬರಲಿದ್ದಾರೆ. ಬೆಳಗ್ಗೆ 8 ಗಂಟೆಗೆ ಮೈಸೂರಿಗೆ ಅವರು ಬರಲಿದ್ದಾರೆ. ಅಲ್ಲಿಂದ ಚಾಮುಂಡಿ ಬೆಟ್ಟಕ್ಕೆ ತೆರಳಿ ಪೂಜೆ ಸಲ್ಲಿಸಿದ್ದಾರೆ.

ಸದ್ಯ ಭಾರತ್ ಜೋಡೊ ಪಾದಯಾತ್ರೆ ಸೋಮವಾರ ಮೈಸೂರು, ಶ್ರೀರಂಗಪಟ್ಟಣ, ಮಂಡ್ಯ ಮೂಲಕ ಪಾಂಡವಪುರ ತಲುಪಿ ಅಲ್ಲಿ ವಿಶ್ರಾಂತಿ ಪಡೆಯಲಿದೆ. ಆಯುಧ ಪೂಜೆ ಮತ್ತು ವಿಜಯದಶಮಿ ಅಂಗವಾಗಿ ಅ.4ಮತ್ತು5 ರಂದು ಪಾದಯಾತ್ರೆಗೆ ವಿರಾಮ ನೀಡಲಾಗಿದೆ.

ಎರಡು ದಿನಗಳ ವಿರಾಮ ಸಂದರ್ಭದಲ್ಲಿ ರಾಹುಲ್‌ಗಾಂಧಿ ಮಡಿಕೇರಿ ಹೊರವಲಯದ ಮೇಕೇರಿ ಗ್ರಾಮದಲ್ಲಿರುವ ಕೂರ್ಗ್ ವೈಲ್ಡರ್‌ನೆಸ್ ರೆಸಾರ್ಟ್‌ನಲ್ಲಿ ಉಳಿದುಕೊಳ್ಳಲಿದ್ದಾರೆ. ಸೋನಿಯಾಗಾಂಧಿ ಅವರೂ ಸಹ ಎರಡು ದಿನ ಇದೇ ರೆಸಾರ್ಟ್‌ನಲ್ಲಿ ಉಳಿದುಕೊಳ್ಳಲಿದ್ದು, ಎರಡು ದಿನ ಕೊಡಗು ಜಿಲ್ಲೆ ಕಾಂಗ್ರೆಸ್‌ನ ಶಕ್ತಿ ಕೇಂದ್ರ ಆಗುವ ಸಾಧ್ಯತೆ ಇದೆ.

ಅ.6ರಂದು ಪಾದಯಾತ್ರೆಯಲ್ಲಿ ಸೋನಿಯಾಗಾಂಧಿ:

ಭಾರತ್ ಜೋಡೋ ಯಾತ್ರೆಯ ಅ.6ರಂದು ಕಾಂಗ್ರೆಸ್ ಅಧಿನಾಯಕಿ ಸೋನಿಯಾಗಾಂಧಿ ಅವರೂ ಸಹ ಕೆಲ ಕಾಲ ಹೆಜ್ಜೆ ಹಾಕಿ ಕಾರ್ಯಕರ್ತರಿಗೆ ಶಕ್ತಿ ತುಂಬಲಿದ್ದಾರೆ. ಈ ಸಂದರ್ಭದಲ್ಲಿ ಬೃಹತ್ ಸಭೆಯನ್ನು ಉದ್ದೇಶಿಸಿ ಮಾತನಾಡುವ ಸಾಧ್ಯತೆಯೂ ಇದೆ.

ಕಾಂಗ್ರೆಸ್‌ಗೆ ಸಂಕಷ್ಟ ಕಾಲದಲ್ಲಿ ಕರ್ನಾಟಕವೇ ಪುಷ್ಟಿ ನೀಡಿದೆ. ಈಗಲೂ ಸಹ ಕಾಂಗ್ರೆಸ್ ಸಂಕಷ್ಟದಲ್ಲಿಯೇ ಇದೆ. ಇಂತಹ ಸಂದರ್ಭದಲ್ಲಿ ಕಾಂಗ್ರೆಸ್‌ಗೆ ಬಲ ನೀಡಬೇಕು ಮಾಡಲಿದ್ದಾರೆ. ಅಲ್ಲದೆ, ರಾಜ್ಯ ಕಾಂಗ್ರೆಸ್ ನಾಯಕರು ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಮುಂದಿನ ಚುನಾವಣೆಗೆ ಒಗ್ಗಟ್ಟಾಗಿ ಸಿದ್ಧವಾಗಬೇಕು ಎಂಬುದನ್ನು ಮನದಟ್ಟು ಮಾಡಲಿದ್ದಾರೆ ಎಂದೂ ಸಹ ಕಾಂಗ್ರೆಸ್ ಮೂಲಗಳು ತಿಳಿಸಿವೆ.

ರಾಹುಲ ಗಾಂಧಿ
Know all about
ರಾಹುಲ ಗಾಂಧಿ
English summary
The ongoing Bharat Jodo Yatra is gaining momentum with the state assembly elections just a few months away. The Yatra has entered its fourth day and there is a good response. Meanwhile, Congress leader Sonia Gandhi will also participate in the Yatra in Karnataka on 6th.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X