ಡಿ. ಕೆ. ಶಿವಕುಮಾರ್ ಸ್ವಾಗತಿಸಲು ಅಭಿಮಾನಿಗಳ ಭರ್ಜರಿ ತಯಾರಿ

Recommended Video

      Karnataka Congress all set to welcome former minister D K Shivakumar | Oneindia Kannada

      ಬೆಂಗಳೂರು, ಅಕ್ಟೋಬರ್ 25 : ಮಾಜಿ ಸಚಿವ, ಕನಕಪುರ ಶಾಸಕ ಡಿ. ಕೆ. ಶಿವಕುಮಾರ್‌ ಸ್ವಾಗತಿಸಲು ಅಭಿಮಾನಿಗಳು ಭರ್ಜರಿ ತಯಾರಿ ನಡೆಸಿದ್ದಾರೆ. ಶನಿವಾರ ಮಧ್ಯಾಹ್ನ ಅವರು ಬೆಂಗಳೂರಿಗೆ ಆಗಮಿಸಲಿದ್ದಾರೆ.

      ಡಿ. ಕೆ. ಶಿವಕುಮಾರ್ ಶನಿವಾರ ಮಧ್ಯಾಹ್ನ 12.30ರ ಸುಮಾರಿಗೆ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಕಾಂಗ್ರೆಸ್ ನಾಯಕರು, ಅಭಿಮಾನಿಗಳು ಅವರನ್ನು ಸ್ವಾಗತಿಸಲು ಸಜ್ಜಾಗಿದ್ದು, ವಿಮಾನ ನಿಲ್ದಾಣದಲ್ಲಿ ಜನಸಂದಣಿ ಹೆಚ್ಚಾಗುವ ಸಾಧ್ಯತೆ ಇದೆ.

      Congress Leaders All Set To Welcome DK Shivakumar

      ಕನಕಪುರ, ಬೆಳಗಾವಿ, ಬಳ್ಳಾರಿ, ಮೈಸೂರು, ರಾಮನಗರ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳ ನೂರಾರು ಅಭಿಮಾನಿಗಳು ಡಿ. ಕೆ. ಶಿವಕುಮಾರ್ ಸ್ವಾಗತಿಸಲು ಆಗಮಿಸಲಿದ್ದಾರೆ. ಸುಮಾರು 30 ಸಾವಿರ ಜನರು ಆಗಮಿಸುವ ನಿರೀಕ್ಷೆ ಇದೆ.

      ವಿಮಾನ ನಿಲ್ದಾಣದಿಂದ ಡಿ. ಕೆ. ಶಿವಕುಮಾರ್ ಕೆಪಿಸಿಸಿ ಕಚೇರಿಗೆ ಭೇಟಿ ನೀಡಲಿದ್ದಾರೆ. ಅಲ್ಲಿ ಡಿ. ಕೆ. ಶಿವಕುಮಾರ್ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಬಳಿಕ ಅವರು ಸದಾಶಿವ ನಗರದ ನಿವಾಸಕ್ಕೆ ತೆರಳಲಿದ್ದಾರೆ.

      ಡಿ. ಕೆ. ಶಿವಕುಮಾರ್ ಸ್ವಾಗತಕ್ಕಾಗಿ, ಕೃಷಿ ಮೇಳ ವೀಕ್ಷಣೆಗಾಗಿ ನೂರಾರು ಜನರು ತೆರಳಲಿದ್ದು ಬೆಂಗಳೂರು ವಿಮಾನ ನಿಲ್ದಾಣದ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗುವ ಸಾಧ್ಯತೆ ಇದೆ. ಡಿ. ಕೆ. ಶಿವಕುಮಾರ್‌ರನ್ನು ಮೆರವಣಿಗೆ ಮೂಲಕ ಕರೆತರುವ ಚಿಂತನೆಯನ್ನೂ ನಡೆಸಲಾಗಿದೆ.

      "ರಾಜ್ಯಕ್ಕೆ ಶನಿವಾರ ಬರಲಿರುವ ಕಾಂಗ್ರೆಸ್ ಶಾಸಕ ಡಿ. ಕೆ. ಶಿವಕುಮಾರ್ ಅವರನ್ನು ಅದ್ದೂರಿಯಾಗಿ ಬರಮಾಡಿಕೊಳ್ಳಲಾಗುವುದು" ಎಂದು ಕೆಪಿಸಿಸಿ ಕಾರ್ಯದರ್ಶಿ ಕೇಶವ ರಾಜಣ್ಣ ಹೇಳಿದ್ದಾರೆ.

      ಬುಧವಾರ ರಾತ್ರಿ ಡಿ. ಕೆ. ಶಿವಕುಮಾರ್ ದೆಹಲಿಯ ತಿಹಾರ್ ಜೈಲಿನಿಂದ ಬಿಡುಗಡೆಗೊಂಡರು. ಜಾರಿ ನಿರ್ದೇಶನಾಲಯ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಅವರನ್ನು ಬಂಧಿಸಿತ್ತು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+