Get Updates
Get notified of breaking news, exclusive insights, and must-see stories!

Dhruva Narayan: ಅತ್ಯುನ್ನತ ಸ್ಥಾನಕ್ಕೇರಬೇಕಿದ್ದ ಅವರ ಬದುಕು ಅರ್ಧ ದಾರಿಯಲ್ಲಿಯೇ ಕೊನೆಗೊಂಡಿದೆ: ಸಿದ್ದರಾಮಯ್ಯ

ಬೆಂಗಳೂರು, ಮಾರ್ಚ್‌ 11: ನನ್ನ ಆತ್ಮೀಯರಾದ ಕಾಂಗ್ರೆಸ್ ಪಕ್ಷದ ನಾಯಕ ಮತ್ತು ಮಾಜಿ ಸಂಸದ ಧ್ರುವನಾರಾಯಣ ಅವರ ಹಠಾತ್ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ಅವರ ಕುಟುಂಬ ಮತ್ತು ಪ್ರೀತಿಪಾತ್ರರ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ. ಅವರ ಆತ್ಮಕ್ಕೆ ಶಾಂತಿ‌ಕೋರುತ್ತೇನೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ (61) ಅಗಲಿಕೆ ಸಂತಾಪ ಸೂಚಿಸಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ರಾಜಕೀಯ ನಾಯಕ ಮತ್ತು ಸಂಸದೀಯ ಪಟುವಾಗಿ ತನ್ನ ಶ್ರಮ, ಪ್ರಬುದ್ಧತೆ ಮತ್ತು ಬದ್ಧತೆಯಿಂದ ಅತ್ಯುನ್ನತ ಸ್ಥಾನಕ್ಕೇರುವ ಎಲ್ಲ ಲಕ್ಷಣಗಳನ್ನು ಹೊಂದಿದ್ದ ಧ್ರುವನಾರಾಯಣ ಅವರ ಬದುಕು ಅರ್ಧ ದಾರಿಯಲ್ಲಿಯೇ ಕೊನೆಗೊಂಡದ್ದು ನಾಡಿಗೆ ಮತ್ತು ಜನತೆಗೆ ತುಂಬಲಾರದ ನಷ್ಟ. ಅವರ ಸಾಧನೆಯ ಬದುಕು ಶಾಶ್ವತವಾಗಿ ನಮ್ಮ ನೆನಪಲ್ಲಿರುತ್ತದೆ ಎಂದಿದ್ದಾರೆ.

ಕೆಪಿಸಿಸಿ ಕಾರ್ಯಾಧ್ಯಕ್ಷರು ಹಾಗೂ ಮಾಜಿ ಸಂಸದರಾದ ಧ್ರುವನಾರಾಯಣ ಅವರ ದಿಢೀರ್ ಸಾವಿನಿಂದ ತೀವ್ರ ಆಘಾತಗೊಂಡಿದ್ದೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ಸಂತಾಪ ಸೂಚಿಸಿದ್ದಾರೆ. ವೈಯಕ್ತಿಕವಾಗಿ ಆತ್ಮೀಯರಾಗಿದ್ದ ಅವರು ಕಠಿಣ ನಿರ್ಧಾರ ಕೈಗೊಳ್ಳುವಾಗ ಅತ್ಯುತ್ತಮ ಸಲಹೆ ನೀಡುತ್ತಿದ್ದರು. ಯಾರ ಮನಸ್ಸನ್ನೂ ನೋವಿಸದೆ ಸದಾ ಹಸನ್ಮುಖರಾಗಿದ್ದ ವ್ಯಕ್ತಿತ್ವ ಅವರದ್ದು. ಅವರ ಆತ್ಮಕ್ಕೆ ಸದ್ಗತಿ ಸಿಗಲಿ ಎಂದು ಪ್ರಾರ್ಥಿಸಿದ್ದಾರೆ.

ಇನ್ನು ಮಾಜಿ ಸಂಸದ ಧ್ರುವನಾರಾಯಣ ಅವರ ಅಗಲಿಕೆಗೆ ಮಾಜಿ ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಸಂತಾಪ ಸೂಚಿಸಿದ್ದಾರೆ. ಧ್ರುವನಾರಾಯಣ ಹೃದಯಾಘಾತದಿಂದ ನಿಧನರಾಗಿದ್ದು ಅತೀವ ದುಃಖ ಉಂಟು ಮಾಡಿದೆ. ರಾಜ್ಯ ಕಾಂಗ್ರೆಸ್‌ನ ಕ್ರಿಯಾಶೀಲ ನಾಯಕರಾಗಿದ್ದ ಧೃವನಾರಾಯಣ್ ಪಕ್ಷದ ಆಸ್ತಿಯಾಗಿದ್ದರು. ಎರಡು ಬಾರಿ ಸಂಸದರಾಗಿ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಧೃವನಾರಾಯಣ್ ಸರಳ ಸಜ್ಜನಿಕೆಯ ರಾಜಕಾರಣಿಯಾಗಿದ್ದರು. ಅವರ ಅಕಾಲಿಕ ನಿಧನ ಆಘಾತ ತಂದಿದೆ ಎಂದಿದ್ದಾರೆ.

Congress Leaders Condolence To R. Dhruvanarayana Death

ನನ್ನ ಆತ್ಮೀಯ ಮಿತ್ರರೂ ಆಗಿದ್ದ ಧ್ರುವನಾರಾಯಣ ಸದಾ ಹಸನ್ಮುಖಿ. ಎಲ್ಲರೊಂದಿಗೂ ನಗು ನಗುತ್ತಲೇ ಮಾತಾಡುತ್ತಿದ್ದ ಧ್ರುವನಾರಾಯಣ ಇಂದು ನಮ್ಮೊಂದಿಗಿಲ್ಲ ಎಂಬುದೇ ನೋವಿನ ಸಂಗತಿ. ಪಕ್ಷ ಸಂಘಟನೆಯಲ್ಲಿ ಧ್ರುವನಾರಾಯಣ ಕೊಡುಗೆ ಅಪಾರ.ಧ್ರುವನಾರಾಯಣ ಆತ್ಮಕ್ಕೆ ಸದ್ಗತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಅವರ ಕುಟುಂಬದ ಶೋಕದಲ್ಲಿ ನಾನೂ ಭಾಗಿ ಎಂದು ತಮ್ಮ ಟ್ವಿಟರ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+