ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕದಿಂದ ರಾಹುಲ್ ಗಾಂಧಿ ಸ್ಪರ್ಧೆ : ಮೂರು ಕ್ಷೇತ್ರಗಳು

|
Google Oneindia Kannada News

ಬೆಂಗಳೂರು, ಮಾರ್ಚ್ 17 : ಕರ್ನಾಟಕ ಕಾಂಗ್ರೆಸ್‌ನಲ್ಲಿ #RaGaFromKarnataka ಎಂಬ ಮಾತುಗಳು ಕೇಳಿಬರುತ್ತಿವೆ. ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಕರ್ನಾಟಕದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸಬೇಕು ಎಂಬುದು ನಾಯಕರ ಒತ್ತಾಯವಾಗಿದೆ.

ಮಾರ್ಚ್ 18ರ ಸೋಮವಾರ ರಾಹುಲ್ ಗಾಂಧಿ ಕರ್ನಾಟಕಕ್ಕೆ ಆಗಮಿಸಲಿದ್ದಾರೆ. ಕಲಬುರಗಿಯಲ್ಲಿ ಅವರು ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ. ಸಮಾವೇಶದಲ್ಲಿ ಅವರಿಗೆ ಅಧಿಕೃತವಾಗಿ ಕರ್ನಾಟಕದಿಂದ ಸ್ಪರ್ಧಿಸುವಂತೆ ಆಹ್ವಾನ ನೀಡಲಾಗುತ್ತದೆ.

#RaGaFromKarnataka ಕಾಂಗ್ರೆಸ್‌ ನಾಯಕರಿಂದ ಟ್ವಿಟರ್ ಅಭಿಯಾನ#RaGaFromKarnataka ಕಾಂಗ್ರೆಸ್‌ ನಾಯಕರಿಂದ ಟ್ವಿಟರ್ ಅಭಿಯಾನ

#RaGaFromKarnataka ಎಂಬ ಹ್ಯಾಷ್ ಟ್ಯಾಗ್ ಬಳಸಿ ರಾಜ್ಯದ ಕಾಂಗ್ರೆಸ್ ನಾಯಕರು ಕರ್ನಾಟಕಕ್ಕೆ ರಾಹುಲ್ ಗಾಂಧಿ ಅವರನ್ನು ಆಹ್ವಾನಿಸಿದ್ದಾರೆ. ರಾಹುಲ್ ಗಾಂಧಿ ಅವರು ರಾಜ್ಯದ ಯಾವ ಕ್ಷೇತ್ರದಿಂದ ಕಣಕ್ಕಿಳಿಯಬೇಕು? ಎಂಬುದು ಸದ್ಯದ ಪ್ರಶ್ನೆ.

ರಾಹುಲ್ ಗಾಂಧಿ ದಕ್ಷಿಣದಿಂದ ಸ್ಪರ್ಧೆ? ಮೊದಲ ಆಯ್ಕೆ ಕರ್ನಾಟಕರಾಹುಲ್ ಗಾಂಧಿ ದಕ್ಷಿಣದಿಂದ ಸ್ಪರ್ಧೆ? ಮೊದಲ ಆಯ್ಕೆ ಕರ್ನಾಟಕ

ದಕ್ಷಿಣ ಭಾರತದಲ್ಲಿ ತಮಿಳುನಾಡು, ಕೇರಳ, ಆಂಧ್ರಪ್ರದೇಶದಲ್ಲಿ ಬಿಜೆಪಿ ವಿರೋಧಿ ಅಲೆಯೇ ಹೆಚ್ಚಿದೆ. ಕರ್ನಾಟಕದಲ್ಲಿ ಬಿಜೆಪಿಗೆ ಬೆಂಬಲವಿದೆ. ಆದರೆ, ರಾಜ್ಯದಲ್ಲಿ ಮೈತ್ರಿ ಸರ್ಕಾರವಿದೆ. ಆದ್ದರಿಂದ, ರಾಹುಲ್ ಗಾಂಧಿ ಅವರಿಗೆ ರಾಜ್ಯದಲ್ಲಿ ಸ್ಪರ್ಧಿಸಲು ಆಹ್ವಾನ ನೀಡಲಾಗುತ್ತಿದೆ.

20 ಕ್ಷೇತ್ರಗಳಿಗೆ ಕಾಂಗ್ರೆಸ್ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ20 ಕ್ಷೇತ್ರಗಳಿಗೆ ಕಾಂಗ್ರೆಸ್ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ

ಮೂರು ಕ್ಷೇತ್ರಗಳು

ಮೂರು ಕ್ಷೇತ್ರಗಳು

ರಾಹುಲ್ ಗಾಂಧಿ ಅವರಿಗೆ ಕರ್ನಾಟಕದಿಂದ ಸ್ಪರ್ಧಿಸುವಂತೆ ಮಾರ್ಚ್ 18ರಂದು ಅಧಿಕೃತವಾಗಿ ಆಹ್ವಾನ ನೀಡಲಾಗುತ್ತದೆ. ಅವರಿಗಾಗಿ ಮೂರು ಕ್ಷೇತ್ರಗಳನ್ನು ಕರ್ನಾಟಕದ ಕಾಂಗ್ರೆಸ್ ನಾಯಕರು ಅಂತಿಮಗೊಳಿಸಿದ್ದಾರೆ. ರಾಹುಲ್ ಸ್ಪರ್ಧೆಗೆ ಒಪ್ಪಿಗೆ ನೀಡಿದರೆ ತಕ್ಷಣ ಕ್ಷೇತ್ರವನ್ನು ಅಂತಿಮಗೊಳಿಸಲು ಕಾಂಗ್ರೆಸ್ ನಾಯಕರು ತೀರ್ಮಾನಿಸಿದ್ದಾರೆ.

ಯಾವ-ಯಾವ ಕ್ಷೇತ್ರ

ಯಾವ-ಯಾವ ಕ್ಷೇತ್ರ

ರಾಹುಲ್ ಗಾಂಧಿ ಅವರಿಗಾಗಿ ಮೈಸೂರು-ಕೊಡಗು, ಬೀದರ್ ಮತ್ತು ಬೆಂಗಳೂರು ಸೆಂಟ್ರಲ್ ಕ್ಷೇತ್ರಗಳನ್ನು ಅಂತಿಮಗೊಳಿಸಲಾಗಿದೆ. ಈ ಮೂರು ಕ್ಷೇತ್ರಗಳು ಬಿಜೆಪಿಯ ವಶದಲ್ಲಿವೆ. ಬೆಂಗಳೂರಿನಿಂದ ರಾಹುಲ್ ಗಾಂಧಿ ಕಣಕ್ಕಿಳಿಯಬೇಕು ಎಂಬ ಒತ್ತಾಯ ಕೇಳಿಬಂದಿದೆ.

ಜೆಡಿಎಸ್ ಜೊತೆ ಮೈತ್ರಿ

ಜೆಡಿಎಸ್ ಜೊತೆ ಮೈತ್ರಿ

ಕರ್ನಾಟಕದಲ್ಲಿ 28 ಲೋಕಸಭಾ ಕ್ಷೇತ್ರಗಳಿವೆ. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಂಡು ಚುನಾವಣೆಯನ್ನು ಎದುರಿಸುತ್ತಿವೆ. ಜೆಡಿಎಸ್‌ಗೆ 8 ಕ್ಷೇತ್ರಗಳನ್ನು ಬಿಟ್ಟುಕೊಟ್ಟಿವೆ. ರಾಹುಲ್ ಗಾಂಧಿ ಕರ್ನಾಟಕದಿಂದ ಚುನಾವಣೆಗೆ ಸ್ಪರ್ಧಿಸಲು ಒಪ್ಪಿಗೆ ನೀಡಲಿದ್ದಾರೆಯೇ? ಕಾದು ನೋಡಬೇಕಿದೆ.

ಅಭ್ಯರ್ಥಿಗಳನ್ನು ಅಂತಿಮಗೊಳಿಸಿಲ್ಲ

ಅಭ್ಯರ್ಥಿಗಳನ್ನು ಅಂತಿಮಗೊಳಿಸಿಲ್ಲ

ಮೈಸೂರು-ಕೊಡಗು, ಬೆಂಗಳೂರು ಸೆಂಟ್ರಲ್ ಮತ್ತು ಬೀದರ್ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಘೋಷಣೆ ಮಾಡಿಲ್ಲ. ಮೈಸೂರು-ಕೊಡಗು ಕ್ಷೇತ್ರದಿಂದ ಸಿ.ಎಚ್.ವಿಜಯಶಂಕರ್ ಅಭ್ಯರ್ಥಿಯಾಗುವ ಸಾಧ್ಯತೆ ಇದೆ. ಬೆಂಗಳೂರು ಸೆಂಟ್ರಲ್ ಕ್ಷೇತ್ರಕ್ಕೆ ಮೂವರು ಆಕಾಂಕ್ಷಿಗಳಿದ್ದಾರೆ. ಬೀದರ್‌ನಿಂದ ಈಶ್ವರ ಖಂಡ್ರೆ ಅವರು ಅಭ್ಯರ್ಥಿಯಾಗುವ ಸಾಧ್ಯತೆ ಇದೆ.

English summary
Karnataka Congress leaders have already started a campaign by using #RaGaFromKarnataka hash tag and demand for AICC president Rahul Gandhi to contest from Karnataka. Party leaders locally have discussed three seats as suitable for him, including Mysore, Bangalore Central and Bidar.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X