ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ತಡವಾಗುತ್ತಿರಲು ಈ ಕ್ಷೇತ್ರಗಳು ಕಾರಣ

ಬೆಂಗಳೂರು, ಮಾರ್ಚ್ 23: ಎರಡನೇ ಶನಿವಾರ, ಭಾನುವಾರಗಳನ್ನು ಪಕ್ಕಕ್ಕಿಟ್ಟರೆ ನಾಮಪತ್ರ ಸಲ್ಲಿಸಲು ಇರುವುದು ಎರಡು ದಿನಗಳಷ್ಟೆ. ಅದರಲ್ಲಿ ಒಂದು ಅಶುಭ ಎನ್ನಲಾಗುವ ಮಂಗಳವಾರ ಹಾಗಾಗಿ ನಾಮಪತ್ರ ಸಲ್ಲಿಕೆಗೆ ಉಳಿದಿರುವುದು ಒಂದೇ ದಿನ ಆದರೆ ಕಾಂಗ್ರೆಸ್ ಅಭ್ಯರ್ಥಿ ಪಟ್ಟಿ ಇನ್ನೂ ಪ್ರಕಟಿಸಿಲ್ಲ.

ಸಮಗ್ರ ಮಾಹಿತಿಯುಳ್ಳ ಲೋಕಸಭೆ ಚುನಾವಣೆಯ ವಿಶೇಷ ಪುಟ

ಕೆಲವು ಕ್ಷೇತ್ರಗಳಲ್ಲಿ ಯಾರನ್ನು ಅಭ್ಯರ್ಥಿ ಮಾಡಬೇಕು ಎಂಬುದನ್ನು ಕಾಂಗ್ರೆಸ್ ಪೂರ್ಣವಾಗಿ ನಿಶ್ಚಯಿಸಲು ಸಾಧ್ಯವಾಗುತ್ತಿಲ್ಲ ಹಾಗಾಗಿಯೇ ಕಾಂಗ್ರೆಸ್ ಅಭ್ಯರ್ಥಿ ಪಟ್ಟಿ ಬಿಡುಗಡೆ ತಡವಾಗುತ್ತಿದೆ.

ಈಗಾಗಲೇ 12 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದೆ ಆದರೆ ಉಳಿದ ಎಂಟು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ಕಸರತ್ತು ನಡೆಯುತ್ತಿದೆ. ಅದರಲ್ಲಿಯೂ ಕೆಲವು ಕ್ಷೇತ್ರಗಳಂತೂ ರಾಜ್ಯ ನಾಯಕರಿಗೆ ಮತ್ತು ಹೈಕಮಾಂಡ್‌ಗೆ ತಲೆನೋವಾಗಿವೆ.

ಧಾರವಾಡ ಮತ್ತು ಬೀದರ್

ಧಾರವಾಡ ಮತ್ತು ಬೀದರ್

ಧಾರವಾಡ ಮತ್ತು ಬೀದರ್ ಕ್ಷೇತ್ರಗಳನ್ನು ಮುಸ್ಲಿಂ ಸಮುದಾಯಕ್ಕೆ ಬಿಟ್ಟುಕೊಡಬೇಕು ಎಂದು ಹೈಕಮಾಂಡ್ ಹೇಳಿದೆ. ಆದರೆ ಈ ಕ್ಷೇತ್ರಗಳಿಗೆ ಅಭ್ಯರ್ಥಿಗಳು ಯಾರು ಎಂಬುದು ರಾಜ್ಯ ನಾಯಕರಿಗೆ ತಲೆ ನೋವಾಗಿದೆ. ಎರಡೂ ಕ್ಷೇತ್ರಗಳು ತಲೆನೋವಾಗಿವೆ.

ಕರ್ನಾಟಕದ ಯಾವ ಸಂಸದ ಎಷ್ಟು ವಿದ್ಯಾಭ್ಯಾಸ ಮಾಡಿದ್ದಾರೆ?

ಕೋಲಾರ ಕ್ಷೇತ್ರಕ್ಕೆ ಅಭ್ಯರ್ಥಿ ಬದಲಾವಣೆ?

ಕೋಲಾರ ಕ್ಷೇತ್ರಕ್ಕೆ ಅಭ್ಯರ್ಥಿ ಬದಲಾವಣೆ?

ಕೋಲಾರ ಕ್ಷೇತ್ರದಲ್ಲಿ ಕೆ.ಎಚ್.ಮುನಿಯಪ್ಪ ಅವರು ಸತತವಾಗಿ ಏಳು ಬಾರಿ ಗೆದ್ದಿದ್ದಾರೆ, ಆದರೆ ಈ ಬಾರಿ ಅವರಿಗೆ ಟಿಕೆಟ್ ನೀಡದಂತೆ ಕೋಲಾರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಶಾಸಕರು, ಸ್ಪೀಕರ್ ರಮೇಶ್ ಕುಮಾರ್ ನೇತೃತ್ವದಲ್ಲಿ ಹೈಕಮಾಂಡ್‌ಗೆ ಬೇಡಿಕೆ ಇಟ್ಟಿದ್ದಾರೆ. ಹಾಗಾಗಿ ಈ ಕ್ಷೇತ್ರದಲ್ಲಿ ಅಭ್ಯರ್ಥಿಯ ಆಯ್ಕೆ ಕಾಂಗ್ರೆಸ್‌ಗೆ ತಲೆನೋವು ಕೊಡುತ್ತಿದೆ.

ಬೆಂಗಳೂರು ದಕ್ಷಿಣಕ್ಕೆ ಅಭ್ಯರ್ಥಿಗಳಿಲ್ಲ?

ಬೆಂಗಳೂರು ದಕ್ಷಿಣಕ್ಕೆ ಅಭ್ಯರ್ಥಿಗಳಿಲ್ಲ?

ಬೆಂಗಳೂರು ದಕ್ಷಿಣ ಕ್ಷೇತ್ರಕ್ಕೆ ಕಾಂಗ್ರೆಸ್‌ಗೆ ಅಭ್ಯರ್ಥಿಗಳು ಸಿಗುತ್ತಿಲ್ಲ ಎನ್ನಲಾಗುತ್ತಿದೆ. ರಾಮಲಿಂಗಾ ರೆಡ್ಡಿ, ಸೌಮ್ಯಾ ರೆಡ್ಡಿ ಅವರ ಹೆಸರುಗಳು ಕೇಳಿಬಂತಾದರೂ, ಅವರು ಸ್ಪರ್ಧಿಸಲು ಒಲ್ಲೆ ಎಂದಿದ್ದಾರೆ. ಪ್ರಿಯಾ ಕೃಷ್ಣ ಅವರನ್ನೂ ಸಹ ಸ್ಪರ್ಧಿಸುವಂತೆ ಕೇಳಲಾಗಿದ್ದು, ಅವರೇ ಅಂತಿಮ ಅಭ್ಯರ್ಥಿ ಆಗುವ ಸಾಧ್ಯತೆ ಇದೆ. ಅವರು ಈಗಾಗಲೇ ವಿಧಾನಸಭೆ ಚುನಾವಣೆಯಲ್ಲಿ ಸೋಗತಿದ್ದಾರೆ.

ದಾವಣಗೆರೆ ಕ್ಷೇತ್ರದಲ್ಲಿ ಯಾರು ಅಭ್ಯರ್ಥಿ?

ದಾವಣಗೆರೆ ಕ್ಷೇತ್ರದಲ್ಲಿ ಯಾರು ಅಭ್ಯರ್ಥಿ?

ದಾವಣಗೆರೆ ಕ್ಷೇತ್ರದಲ್ಲಿ ಸಹ ಕಾಂಗ್ರೆಸ್‌ ಸೂಕ್ತ ಅಭ್ಯರ್ಥಿ ಸಿಗುತ್ತಿಲ್ಲ ಆದ್ದರಿಂದ ವಿಧಾನಸಭೆ ಚುನಾವಣೆಯಲ್ಲಿ ಸೋತ ಅಭ್ಯರ್ಥಿಯನ್ನೇ ಕಣಕ್ಕಿಳಿಸುವ ಒತ್ತಡದಲ್ಲಿ ಕಾಂಗ್ರೆಸ್ ಇದೆ. ಹಾಗಾಗಿ ಎಸ್‌.ಎಸ್.ಮಲ್ಲಿಕಾರ್ಜುನ್ ಅವರಿಗೆ ಟಿಕೆಟ್ ನೀಡುವ ಚಿಂತನೆ ಇದೆ. ಅವರ ತಂದೆ ಶಾಮನೂರು ಶಿವಶಂಕರಪ್ಪ ಅವರನ್ನೂ ಟಿಕೆಟ್‌ಗಾಗಿ ಪರಿಗಣಿಸಲಾಗಿದೆ. ಇಬ್ಬರಲ್ಲಿ ಒಬ್ಬರಿಗೆ ಟಿಕೆಟ್ ಪಕ್ಕಾ ಎನ್ನಲಾಗಿದೆ.

ಬೆಂಗಳೂರು ಕೇಂದ್ರ (ಸೆಂಟ್ರಲ್)

ಬೆಂಗಳೂರು ಕೇಂದ್ರ (ಸೆಂಟ್ರಲ್)

ಬೆಂಗಳೂರು ಸೆಂಟ್ರಲ್‌ನಲ್ಲಿ ಆಕಾಂಕ್ಷಿಗಳ ಪಟ್ಟಿ ದೊಡ್ಡದಿದೆ ಹಾಗಾಗಿ ಇಲ್ಲಿ ಅಭ್ಯರ್ಥಿಯ ಆಯ್ಕೆ ತಡವಾಗುತ್ತಿದೆ. ರಿಜ್ವಾನ್ ಅರ್ಷದ್, ಬಿ.ಕೆ.ಹರಿಪ್ರಸಾದ್ ಇನ್ನೂ ಕೆಲವು ಮುಖಂಡರು ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ. ರಿಜ್ವಾನ್ ಅರ್ಷದ್ ಅವರು ಅಂತಿಮ ಅಭ್ಯರ್ಥಿ ಆಗುವ ಸಾಧ್ಯತೆ ಇದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+