ರಾಜಭವನ ಚಲೋ: ಗವರ್ನರ್‌ ವಿರುದ್ಧ ಗುಡುಗಿದ ಕಾಂಗ್ರೆಸ್‌ ನಾಯಕರು

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣದ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲ ಥಾವರ್‌ಚಂದ್‌ ಗೆಹಲೋತ್‌ ಅವರು ಅನುಮತಿ ನೀಡಿರುವ ಕ್ರಮ ಖಂಡಿಸಿ ಕಾಂಗ್ರೆಸ್‌ ವತಿಯಿಂದ ಇಂದು ರಾಜಭವನ ಚಲೋ ಹಮ್ಮಿಕೊಂಡಿದ್ದು, ರಾಜ್ಯಪಾಲರ ವಿರುದ್ಧ ಕಾಂಗ್ರೆಸ್‌ ನಾಯಕರು ಘೋಷಣೆಗಳು ಕೂಗಿದ್ದಾರೆ.

ವಿಧಾನಸೌಧದ ಗಾಂಧಿ ಪ್ರತಿಮೆ ಬಳಿಯಿಂದ ರಾಜಭವನ ಚಲೋ ಹಮ್ಮಿಕೊಳ್ಳಲಾಗಿದೆ. ಕಾಂಗ್ರೆಸ್‌ ಶಾಸಕರು, ಸಚಿವರು, ಸಂಸದರು ಸೇರಿದಂತೆ ನೂರಾರು ನಾಯಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ. ಈ ವೇಳೆ ಮಾತನಾಡಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬಿಜೆಪಿ-ಜೆಡಿಎಸ್ ಷಡ್ಯಂತ್ರ ಹಾಗೂ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರ ನಡೆ ಖಂಡಿಸಿ ಇಂದು ವಿಧಾನಸೌಧದ ಗಾಂಧಿ ಪ್ರತಿಮೆಯಿಂದ ರಾಜಭವನದವರೆಗೆ ಹಮ್ಮಿಕೊಂಡಿದ್ದ "ರಾಜಭವನ ಚಲೋ ಹಮ್ಮಿಕೊಳ್ಳಲಾಗಿದೆ ಎಂದರು.

Congress Leaders Held Raj Bhavan Chalo Against Karnataka Governor Today

ʼರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಲು ರಾಜ್ಯಪಾಲರ ಕಚೇರಿಯನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ. ಈ ರೀತಿ ಮಾಡುವುದು ತಪ್ಪು. ಒಂದು ಕಣ್ಣಿಗೆ ಬೆಣ್ಣೆ, ಇನ್ನೊಂದು ಕಣ್ಣಿಗೆ ಸುಣ್ಣ. ಇದು ಯಾವ ರೀತಿಯ ನ್ಯಾಯ. ಕಾನೂನಿನ ವಿರುದ್ಧವಾಗಿ ರಾಜ್ಯಪಾಲರು ಕೆಲಸ ಮಾಡುವುದಲ್ಲ, ಕಾನೂನಿನ ಪರವಾಗಿ ಅವರು ಕೆಲಸ ಮಾಡಬೇಕು. ಅಲ್ಲದೆ ಸಂವಿಧಾನವನ್ನು ರಕ್ಷಣೆ ಮಾಡಬೇಕು. ರಾಜ್ಯಪಾಲರ ಕಚೇರಿ ಸಮಾನತೆಗೆ ಹೆಸರಾಗಿರಬೇಕು. ಹಾಗಾಗಿ ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಉಳಿವಿಗಾಗಿ ನಮ್ಮ ಈ ಹೋರಾಟ ನಿರಂತರ ಎಂದು ಡಿ.ಕೆ.ಶಿವಕುಮಾರ್‌ ಹೇಳಿದರು.

ಪ್ರಜಾತಾಂತ್ರಿಕವಾಗಿ ಚುನಾಯಿತ ಸರ್ಕಾರಗಳನ್ನು ಅಪ್ರಜಾತಾಂತ್ರಿಕ ಮಾರ್ಗದಲ್ಲಿ ಅಸ್ಥಿರಗೊಳಿಸುವ ಕೇಂದ್ರ ಸರ್ಕಾರ ಮತ್ತು ರಾಜಭವನದ ಷಡ್ಯಂತ್ರಗಳನ್ನು ವಿರೋಧಿಸಿ ಹಾಗೂ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಮಾಜಿ ಸಚಿವರಾದ ಮುರುಗೇಶ್ ನಿರಾಣಿ, ಶಶಿಕಲಾ ಜೊಲ್ಲೆ ಹಾಗೂ ಜನಾರ್ದನ ರೆಡ್ಡಿ ಅವರ ವಿರುದ್ಧ ತನಿಖೆಗೆ, ಕ್ರಮಕ್ಕೆ ರಾಜ್ಯಪಾಲರು ಅನುಮತಿ ನೀಡಿಲ್ಲ ಎಂದು ಕಾಂಗ್ರೆಸ್‌ ನಾಯಕರು ಖಂಡಿಸಿದರು.

Congress Leaders Held Raj Bhavan Chalo Against Karnataka Governor Today

ಈ ವೇಳೆ ಮಾತನಾಡಿದ ಕಂದಾಯ ಸಚಿವ ಕೃಷ್ಣಬೈರೇಗೌಡ, ರಾಜ್ಯಪಾಲರು ಸಂವಿಧಾನಕ್ಕೆ ನಿಷ್ಠರಾಗಿರುವ ಬದಲು ಬಿಜೆಪಿಗೆ ತಮ್ಮ ನಿಷ್ಠೆಯನ್ನು ಪ್ರದರ್ಶಿಸುತ್ತಿದ್ದಾರೆ. ದಾರಿಯಲ್ಲಿ ಹೋಗುವ ವ್ಯಕ್ತಿಯೊಬ್ಬ ನೀಡಿದ ದೂರಿನ ಆಧಾರದ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುತ್ತಾರೆ. ಮತ್ತೊಂದೆಡೆ, ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ವಿರುದ್ಧ ಲೋಕಾಯುಕ್ತ ನೀಡಿದ ವರದಿಯನ್ನು ಕಸದ ಬುಟ್ಟಿಗೆ ಎಸೆಯುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಳಿಕ ಕಾಂಗ್ರೆಸ್‌ ನಾಯಕರೆಲ್ಲ ಒಗ್ಗೂಡಿ ರಾಜಭವನಕ್ಕೆ ತೆರಳಿ, ರಾಜ್ಯಪಾಲ ಥಾವರ್‌ಚಂದ್‌ ಗೆಹಲೋತ್‌ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿ ಬಂದರು. ರಾಜಭವನ ಚಲೋದಲ್ಲಿ ಶಾಸಕರಾದ ಶಿವಲಿಂಗೇಗೌಡ, ಪ್ರದೀಪ್ ಈಶ್ವರ್, ನಯನ ಮೋಟಮ್ಮ, ಕಂಪ್ಲಿ ಗಣೇಶ್, ಬೇಳೂರು ಗೋಪಾಲಕೃಷ್ಣ, ವಿಧಾನ ಪರಿಷತ್ ಸದಸ್ಯರಾದ ಯು. ಬಿ ವೆಂಕಟೇಶ್, ಸುಧಾಮ್ ದಾಸ್, ಐವಾನ್ ಡಿಸೋಜ, ಸಂಸದರಾದ ಶ್ರೇಯಸ್ ಪಟೇಲ್, ಹಿರಿಯ ಮುಖಂಡರಾದ ವೀರಪ್ಪ ಮೊಯ್ಲಿ, ಎಂ.ಆರ್ ಸೀತಾರಾಮ್, ವಿ.ಎಸ್ ಉಗ್ರಪ್ಪ, ಆರ್.ವಿ ದೇಶಪಾಂಡೆ ಸೇರಿದಂತೆ ಹಲವು ನಾಯಕರು ಭಾಗವಹಿಸಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+