ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಿಧಾನಸೌಧದ ಮುಂದೆ ಚರ್ಚೆ, ದಿನಾಂಕ ನಿಗದಿ ಮಾಡಲಾ?; ಎಚ್‌ಡಿಕೆ

|
Google Oneindia Kannada News

ಬೆಂಗಳೂರು, ಜನವರಿ 23; ಹಾಸನದಲ್ಲಿ ನಡೆದ ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆಯಲ್ಲಿ ಪಕ್ಷದ ನಾಯಕರು ಜೆಡಿಎಸ್‌ ವಿರುದ್ಧ ವಾಗ್ದಾಳಿ ನಡೆಸಿದ್ದರು. ಜೆಡಿಎಸ್ ಪಕ್ಷ ಬಿಜೆಪಿಯ ಬಿ-ಟೀಮ್ ಎಂದು ಟೀಕಿಸಿದ್ದರು.

ಸೋಮವಾರ ಸರಣಿ ಟ್ವೀಟ್ ಮಾಡಿರುವ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಜೆಡಿಎಸ್‌ ಭದ್ರಕೋಟೆ ಹಾಸನದಲ್ಲಿ ಕಾಂಗ್ರೆಸ್ ನಾಯಕರು ನೀಡಿದ ಹೇಳಿಕೆಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Karnataka assembly elections: ಪಂಚರತ್ನ ಯಾತ್ರೆಯೆಡೆ ಎಚ್.ಡಿ. ಕುಮಾರಸ್ವಾಮಿ, ಕಾಂಗ್ರೆಸ್ ಕಡೆಗೆ ಜೆಡಿಎಸ್ ನಾಯಕರುKarnataka assembly elections: ಪಂಚರತ್ನ ಯಾತ್ರೆಯೆಡೆ ಎಚ್.ಡಿ. ಕುಮಾರಸ್ವಾಮಿ, ಕಾಂಗ್ರೆಸ್ ಕಡೆಗೆ ಜೆಡಿಎಸ್ ನಾಯಕರು

ತಮ್ಮ ಟ್ವೀಟ್‌ನಲ್ಲಿ ಕುಮಾರಸ್ವಾಮಿ, 'ಬಿ ಟೀಮ್ ಭಾಗವತಿಕೆ ಇಲ್ಲಿಗೇ ನಿಲ್ಲಿಸಿದರೆ ಉತ್ತಮ. ಇಲ್ಲವಾದರೆ ಮುಂದಿನ ಪರಿಣಾಮಗಳಿಗೆ ನೀವೇ ಹೊಣೆ. ರಾಜ್ಯದಲ್ಲಿ ಜಾತ್ಯತೀತ ಶಕ್ತಿಗಳು ದುರ್ಬಲವಾದರೆ ಆ ಪಾಪಕ್ಕೂ ನೀವೇ ಹೊಣೆ' ಎಂದು ಕಾಂಗ್ರೆಸ್‌ಗೆ ಎಚ್ಚರಿಕೆ ನೀಡಿದ್ದಾರೆ.

ಉತ್ತಮ ಕಾರ್ಯಕ್ರಮ ಕೊಡದಿದ್ದರೆ 2028ರಲ್ಲಿ ಜೆಡಿಎಸ್‌ ಪಕ್ಷ ವಿಸರ್ಜನೆ: ಕುಮಾರಸ್ವಾಮಿಉತ್ತಮ ಕಾರ್ಯಕ್ರಮ ಕೊಡದಿದ್ದರೆ 2028ರಲ್ಲಿ ಜೆಡಿಎಸ್‌ ಪಕ್ಷ ವಿಸರ್ಜನೆ: ಕುಮಾರಸ್ವಾಮಿ

'ಬಿ ಟೀಮ್ ಯಾವ ಪಕ್ಷ ಎಂಬ ಬಹಿರಂಗ ಚರ್ಚೆಗೆ ನಾನು ಸಿದ್ದ. ವಿಧಾನಸೌಧದ ಮುಂದೆಯೇ ಚರ್ಚೆ ನಡೆಯಲಿ. ನಿಮ್ಮ ಸಿದ್ದಪುರಷರ ಜತೆ ನೀವೂ ಬನ್ನಿ. ಸಮಯ, ದಿನಾಂಕ ನಾನು ನಿಗದಿ ಮಾಡಲಾ? ಅಥವಾ ನೀವು ಮಾಡುತ್ತೀರಾ? ಉತ್ತರಕ್ಕೆ ಕಾಯುತ್ತಿರುತ್ತೇನೆ' ಎಂದು ಎಚ್. ಡಿ. ಕುಮಾರಸ್ವಾಮಿ ಸವಾಲು ಹಾಕಿದ್ದಾರೆ.

ಮತ್ತೊಂದು ಟ್ವೀಟ್‌ನಲ್ಲಿ, 'ರಾಜ್ಯ ಕಾಂಗ್ರೆಸ್ ಉಸ್ತುವಾರಿ ಮಾನ್ಯ ಶ್ರೀ @rssurjewala ಅವರೇ ಹೊಸ ಬಾಟಲಿಗೆ ಹಳೆಯ ಮದ್ಯ ತುಂಬುವ ವ್ಯರ್ಥದ ಕೆಲಸ ಏಕೆ? ರಾಜ್ಯ @INCKarnataka ಪಕ್ಷದ ಸಿದ್ದಹಸ್ತರ ಪ್ರಭಾವಕ್ಕೆ ಒಳಗಾಗಿ ಸವಕಲು ಸುಳ್ಳುಗಳನ್ನೇ ಹೇಳುವ ಕರ್ಮ ನಿಮಗೇಕೆ ಬಂತು?' ಎಂದು ಪ್ರಶ್ನಿಸಿದ್ದಾರೆ.

ಸಿದ್ದರಾಮಯ್ಯ ಭಾಷಣ

ಸಿದ್ದರಾಮಯ್ಯ ಭಾಷಣ

ಕಾಂಗ್ರೆಸ್‌ ಪಕ್ಷದ ಪ್ರಜಾಧ್ವನಿ ಸಮಾವೇಶ ಶನಿವಾರ ಹಾಸನದಲ್ಲಿ ನಡೆಯಿತು. ಇದರಲ್ಲಿ ಪಾಲ್ಗೊಂಡು ಮಾತನಾಡಿದ ಸಿದ್ದರಾಮಯ್ಯ, "ಜೆಡಿಎಸ್‌ ಪಕ್ಷ ಇರುವುದೇ ಐದಾರು ಜಿಲ್ಲೆಗಳಲ್ಲಿ. ಕುಮಾರಸ್ವಾಮಿ ಅವರು ತಮಟೆ ಹೊಡೆದುಕೊಂಡು ಪಂಚರತ್ನ ಯಾತ್ರೆ ಎಂದು ಓಡಾಡುತ್ತಿದ್ದಾರೆ. ಕುಮಾರಸ್ವಾಮಿಯವರು ಅಧಿಕಾರದಲ್ಲಿದ್ದಾಗ ಯಾಕೆ ಪಂಚರತ್ನ ಯೋಜನೆ ಮಾಡಿಲ್ಲ?" ಎಂದು ಪ್ರಶ್ನಿಸಿದ್ದರು.

ಜೆಡಿಎಸ್‌ ನವರಿಂದ ರಾಜ್ಯ ಉದ್ಧಾರವಾಗಲ್ಲ

ಜೆಡಿಎಸ್‌ ನವರಿಂದ ರಾಜ್ಯ ಉದ್ಧಾರವಾಗಲ್ಲ

ಪ್ರಜಾಧ್ವನಿ ಸಮಾವೇಶದಲ್ಲಿ ಸಿದ್ದರಾಮಯ್ಯ ಮಾತನಾಡಿ, "ಈಗ ಕುಮಾರಸ್ವಾಮಿ ಅವರಿಗೆ ಮತ್ತೆ ಅಧಿಕಾರ ಕೊಡಬೇಕಂತೆ, ಇಲ್ಲದಿದ್ದರೆ ಜೆಡಿಎಸ್‌ ಪಕ್ಷವನ್ನು ವಿಸರ್ಜನೆ ಮಾಡುತ್ತಾರಂತೆ. ಜೆಡಿಎಸ್‌ನವರು ಗೆದ್ದ ಎತ್ತಿನ ಬಾಲ ಹಿಡಿಯುವವರು, ಅವರು ಯಾವತ್ತೂ ಸ್ವತಂತ್ರವಾಗಿ ಅಧಿಕಾರಕ್ಕೆ ಬರಲ್ಲ. ನಿಮ್ಮ ಮತಗಳನ್ನು ದಯವಿಟ್ಟು ವ್ಯರ್ಥ ಮಾಡಿಕೊಳ್ಳಬೇಡಿ. ಜೆಡಿಎಸ್‌ಗೆ ಮತ ಹಾಕಿದರೆ ಬಿಜೆಪಿಗೆ ಮತ ಹಾಕಿದಂತೆ. ದಯಮಾಡಿ ಜೆಡಿಎಸ್‌ ಪಕ್ಷಕ್ಕೆ ಮತ ನೀಡಬೇಡಿ. ಬಿಜೆಪಿ ಮತ್ತು ಜೆಡಿಎಸ್‌ ನವರಿಂದ ರಾಜ್ಯ ಉದ್ಧಾರವಾಗಲ್ಲ" ಎಂದು ಹೇಳಿದ್ದರು.

ರಾಜಕೀಯ ನಿವೃತ್ತಿ ಮಾತನಾಡಿದ್ದರು

ರಾಜಕೀಯ ನಿವೃತ್ತಿ ಮಾತನಾಡಿದ್ದರು

ಸಿದ್ದರಾಮಯ್ಯ ತಮ್ಮ ಭಾಷನದಲ್ಲಿ, "ಹಾಸನದಲ್ಲಿ 7ರಲ್ಲಿ ಕನಿಷ್ಠ 5 ಸ್ಥಾನಗಳಲ್ಲಿ ಕಾಂಗ್ರೆಸ್‌ ಪಕ್ಷವನ್ನು ಗೆಲ್ಲಿಸುವ ಪಣತೊಡಬೇಕು. ಜಿಲ್ಲೆಯ ಎಲ್ಲಾ ಮುಖಂಡರು ಒಂದಾಗಿ ಕೆಲಸ ಮಾಡಿ, ನಮ್ಮ ಅಭ್ಯರ್ಥಿಯನ್ನು ಗೆಲ್ಲಿಸುವ ಕೆಲಸ ಮಾಡಬೇಕು. ಮಧು ಮಾದೇಗೌಡ ಅವರು ಈ ಬಾರಿ ಮೇಲ್ಮನೆ ಸದಸ್ಯರಾಗಿದ್ದಾರೆ, ಇಲ್ಲಿ ಕಾಂಗ್ರೆಸ್‌ಗೆ ಶಕ್ತಿ ಇದೆ. ಜನ ಧೈರ್ಯವಾಗಿ ಕಾಂಗ್ರೆಸ್‌ ಪರ ಹೋರಾಟ ಮಾಡಿದರೆ ಖಂಡಿತಾ ನಾವು ಗೆಲ್ಲುತ್ತೇವೆ. ನಾವು ಅಧಿಕಾರಕ್ಕೆ ಬಂದರೆ ಉಚಿತವಾಗಿ 10 ಕೆಜಿ ಅಕ್ಕಿ, 200 ಯುನಿಟ್‌ ವಿದ್ಯುತ್‌ ಹಾಗೂ ಪ್ರತೀ ಮನೆಯ ಯಜಮಾನಿಗೆ ತಿಂಗಳಿಗೆ 2000 ರೂ. ನಂತೆ ನೀಡುತ್ತೇವೆ. ನಾವು ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತೇವೆ, ಇದಕ್ಕೆ ತಪ್ಪಿದಲ್ಲಿ ರಾಜಕೀಯ ನಿವೃತ್ತಿ ತೆಗೆದುಕೊಂಡು ಮನೆಗೆ ಹೋಗುತ್ತೇನೆ" ಎಂದು ಘೋಷಣೆ ಮಾಡಿದ್ದರು.

ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುತ್ತದೆ

ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುತ್ತದೆ

ಸಿದ್ದರಾಮಯ್ಯ ತಮ್ಮ ಭಾಷಣದಲ್ಲಿ "ನಾನು ಈ ಹಿಂದೆ ಅನೇಕ ಕಾರ್ಯಕ್ರಮಗಳಿಗೆ ಹಾಸನ ಜಿಲ್ಲೆಗೆ ಆಗಮಿಸಿದ್ದೆ, ಆದರೆ ಇಂದು ಜನರಲ್ಲಿರುವ ಉತ್ಸಾಹ ಈ ಹಿಂದೆ ಕಂಡಿರಲಿಲ್ಲ. ಇದನ್ನು ನೋಡಿದರೆ ಪೂರ್ವದಲ್ಲಿ ಸೂರ್ಯ ಉದಯಿಸುವುದು ಎಷ್ಟು ಸತ್ಯವೋ ಕರ್ನಾಟಕದಲ್ಲಿ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬರುವುದು ಅಷ್ಟೇ ಸತ್ಯ ಎಂದು ಗೊತ್ತಾಗುತ್ತದೆ" ಎಂದು ಹೇಳಿದ್ದರು.

"2018ರ ಪ್ರಣಾಳಿಕೆಯಲ್ಲಿ ಬಿಜೆಪಿ ತಾವು ಅಧಿಕಾರಕ್ಕೆ ಬಂದರೆ ಸಹಕಾರಿ ಸಂಘಗಳು ಮತ್ತು ಬ್ಯಾಂಕುಗಳಲ್ಲಿರುವ ರೈತರ 1 ಲಕ್ಷದ ವರೆಗಿನ ಸಾಲವನ್ನು ಮನ್ನಾ ಮಾಡುವುದಾಗಿ ಭರವಸೆ ನೀಡಿದ್ದರು. ಯಡಿಯೂರಪ್ಪ ಅಥವಾ ಬಸವರಾಜ ಬೊಮ್ಮಾಯಿ ಒಂದು ರೂಪಾಯಿ ಆದ್ರೂ ಸಾಲ ಮನ್ನಾ ಮಾಡಿದ್ದಾರ?" ಎಂದು ಸಿದ್ದರಾಮಯ್ಯ ಕೇಳಿದ್ದರು.

English summary
Leaders of the Congress called JD(S) B-team of BJP. In a tweet former chief minister H. D. Kumaraswamy called for open discussion.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X