ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಿದ್ದರಾಮಯ್ಯ ಸೂಚನೆ: ದೆಹಲಿಗೆ ತೆರಳಿದ ಕಾಂಗ್ರೆಸ್ ನಾಯಕರು

|
Google Oneindia Kannada News

Recommended Video

ಸಿದ್ದರಾಮಯ್ಯ ಸೂಚನೆಯಂತೆ ಕಾಂಗ್ರೆಸ್ ನಾಯಕರು ದೆಹಲಿಯತ್ತ | Oneindia Kannada

ಬೆಂಗಳೂರು, ನವೆಂಬರ್ 29: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಕಾಂಗ್ರೆಸ್ ನಾಯಕರು ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.

ಈಗಾಗಲೇ ನವೆಂಬರ್ ಅಂತ್ಯಕ್ಕೆ ಸಂಪುಟ ವಿಸ್ತರಣೆ ಮಾಡುವುದಾಗಿ ಜೆಡಿಎಸ್ ವರಿಷ್ಠ ಎಚ್‌ಡಿ ದೇವೇಗೌಡ ಇನ್ನಿತರೆ ಕಾಂಗ್ರೆಸ್ ಮುಖಂಡರು ತಿಳಿಸಿದ್ದರು ಆದರೆ ನವೆಂಬರ್ ತಿಂಗಳು ಕಳೆಯಲು ಇನ್ನೊಂದೇ ದಿನ ಬಾಕಿ ಉಳಿದಿದೆ.

ಸಂಪುಟ ವಿಸ್ತರಣೆ ವಿಳಂಬ ಆಗುವುದಿಲ್ಲ: ದೇವೇಗೌಡರ ಭರವಸೆ ಸಂಪುಟ ವಿಸ್ತರಣೆ ವಿಳಂಬ ಆಗುವುದಿಲ್ಲ: ದೇವೇಗೌಡರ ಭರವಸೆ

ಹತ್ತಕ್ಕೂ ಹೆಚ್ಚು ಕಾಂಗ್ರೆಸ್ ನಾಯಕರು ದೆಹಲಿಯೆಡೆಗೆ ತೆರಳಿದರೆ ಜಿ ಪರಮೇಶ್ವರ ಆರು ದಿನಗಳ ಫ್ರಾನ್ಸ್ ಪ್ರವಾಸದಲ್ಲಿದ್ದಾರೆ ಹಾಗಾಗಿ ಡಿಸೆಂಬರ್ ಮೊದಲ ವಾರವೂ ಸಂಪುಟ ವಿಸ್ತರಣೆ ನಡೆಯುವುದು ಅನುಮಾನವಾಗಿದೆ.

ಹತ್ತು ಹಲವು ಕಾರಣಗಳಿಂದ ಸಂಪುಟ ವಿಸ್ತರಣೆ ಮುಂದಕ್ಕೆ ಹೋಗಿದೆ. ದೋಸ್ತಿ ಸರ್ಕಾರದಲ್ಲಿ ಅಧಿಕಾರ ಅನುಭವಿಸುತ್ತಿರುವ ಕಾಂಗ್ರೆಸ್ ಪ್ರಮುಖರಿಗೆ ಈ ಪ್ರಕ್ರಿಯೆ ನಡೆಯುವುದು ಬೇಕಿಲ್ಲ. ಆದರೆ ತಮ್ಮ ಬೆಂಬಲಿಗರ ಒತ್ತಡದ ಹಿನ್ನೆಲೆಯಲ್ಲಿ ಸಂಪುಟದಲ್ಲಿ ಖಾಲಿಯಿರುವ ಸ್ಥಾನಗಳನ್ನು ಭರ್ತಿ ಮಾಡಿಸುವ ಅಪೇಕ್ಷೆಯನ್ನು ಸಿದ್ದರಾಮಯ್ಯ ಹೊಂದಿದ್ದಾರೆ.

Congress leaders leave for Delhi for talks on state Cabinet expansion

ಸಂಪುಟ ವಿಸ್ತರಣೆಗೆ ಇದೇ ಒಳ್ಳೆಯ ಕಾಲ ಇಲ್ಲದಿದ್ದರೆ ಅತೃಪ್ತ ಶಾಸಕರನ್ನು ಹಿಡಿದಿಟ್ಟುಕೊಳ್ಳುವುದು ಕಷ್ಟ, ಮಂತ್ರಿ ಸ್ಥಾನ ಸಿಗದವರಿಗೆ ನಿಗಮ ಮಂಡಳಿ ಅಧ್ಯಕ್ಷ ಹುದ್ದೆ ನೀಡಿ ಸಮಾಧಾನಪಡಿಸಬಹುದು ಎನ್ನುವುದು ಸಿದ್ದರಾಮಯ್ಯ ಸೂತ್ರವಾಗಿದೆ.

ಸಂಪುಟ ವಿಸ್ತರಣೆ: ಸಿದ್ದರಾಮಯ್ಯ-ಪರಮೇಶ್ವರ್‌ ನಡುವೆ ಮಹತ್ವದ ಮಾತುಕತೆ ಸಂಪುಟ ವಿಸ್ತರಣೆ: ಸಿದ್ದರಾಮಯ್ಯ-ಪರಮೇಶ್ವರ್‌ ನಡುವೆ ಮಹತ್ವದ ಮಾತುಕತೆ

ಈ ಮಧ್ಯೆ ಜೆಡಿಎಸ್ ವರಿಷ್ಠ ಎಚ್‌ಡಿ ದೇವೇಗೌಡ ಹಾಗೂ ಸಿಎಂ ಎಚ್‌ಡಿ ಕುಮಾರಸ್ವಾಮಿ ಸಂಪುಟ ವಿಸ್ತರಣೆಯ ಜೇನುಗೂಡಿಗೆ ಕೈಹಾಕುವ ಬದಲು ಸಾಧ್ಯವಾದಷ್ಟು ದಿನ ಇದನ್ನೇ ಮುಂದುವರೆಸಿಕೊಂಡು ಹೋಗುವುದು ಉತ್ತಮ ಎಂಬ ಆಲೋಚನೆಯಲ್ಲಿದ್ದಾರೆ.

ಆಷಾಢ ಮಾಸ ಕಳೆಯುವವರೆಗೂ ಸಂಪುಟ ವಿಸ್ತರಣೆ ಇಲ್ಲ ಆಷಾಢ ಮಾಸ ಕಳೆಯುವವರೆಗೂ ಸಂಪುಟ ವಿಸ್ತರಣೆ ಇಲ್ಲ

ಪಂಚರಾಜ್ಯ ಚುನಾವಣಾ ಪ್ರಛಾರದಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ನಿರತರಾಗಿದ್ದಾರೆ, ಸದ್ಯಕ್ಕೆ ಮಾತುಕತೆ ಸಾಧ್ಯವಿಲ್ಲ ಎಂದು ವೇಣುಗೋಪಾಲ್ ಜವಾಬು ಕೊಟ್ಟಿದ್ದಾರೆ, ಸಂಪುಟ ವಿಸ್ತರಣೆ ಇಷ್ಟವಿಲ್ಲದ ಕಾರಣ ಕಾಂಗ್ರೆಸ್ ಹೈಕಮಾಂಡ್ ನಾನಾ ಕಾರಣಗಳನ್ನು ನೀಡುತ್ತಿದೆ ಎನ್ನುವುದು ಮೇಲ್ನೋಟಕ್ಕೆ ಗೋಚರವಾಗುತ್ತಿದೆ.

English summary
Karnataka congress leaders on Wednesday night left for Delhi to discuss with the party high command the issue of cabinet expansion and allocation of portfolios.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X