ಹಳೇ ಮೈಸೂರು ಭಾಗದ ಕ್ಷೇತ್ರ ಜೆಡಿಎಸ್‌ಗೆ ಬಿಟ್ಟುಕೊಡಲು ವಿರೋಧ
ಬೆಂಗಳೂರು, ಜನವರಿ 24 : ಹಳೇ ಮೈಸೂರು ಭಾಗದ ಲೋಕಸಭಾ ಕ್ಷೇತ್ರಗಳನ್ನು ಜೆಡಿಎಸ್‌ಗೆ ಬಿಟ್ಟುಕೊಡಲು ಕಾಂಗ್ರೆಸ್ ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ನಾಯಕರ ಜೊತೆ ಸರಣಿ ಸಭೆಗಳನ್ನು ನಡೆಸುತ್ತಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಗುರುವಾರ ಕೆ.ಸಿ.ವೇಣುಗೋಪಾಲ್ ಅವರು ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳ ಮುಖಂಡರ ಸಭೆ ನಡೆಸಿದರು. ಸಭೆಯಲ್ಲಿ ಜೆಡಿಸ್ ಜೊತೆ ಮೈತ್ರಿ ಮಾಡಿಕೊಳ್ಳುವ ಕುರಿತು ಚರ್ಚೆ ನಡೆಯಿತು.

ಈ ವೇಳೆ ಕಾಂಗ್ರೆಸ್ ಸಂಸದರು ಇರುವ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಡುವುದು ಬೇಡ ಎಂದು ನಾಯಕರ ಒತ್ತಾಯಿಸಿದರು. ಈ ಕುರಿತು ಹೈಕಮಾಂಡ್ ನಾಯಕರಿಗೂ ಮಾಹಿತಿ ನೀಡುವಂತೆ ತಿಳಿಸಿದರು. ನಿಯೋಗದ ಮೂಲಕ ಹೈಕಮಾಂಡ್ ನಾಯಕರನ್ನು ಭೇಟಿ ಮಾಡುತ್ತೇವೆ ಎಂದರು.
ಕೆ.ಸಿ.ವೇಣುಗೋಪಾಲ್ ಅವರು ಪ್ರತಿ ಜಿಲ್ಲೆಯ ನಾಯಕರ ಜೊತೆ ಪ್ರತ್ಯೇಕವಾಗಿ ಸಭೆ ನಡೆಸಿ ಅಭಿಪ್ರಾಯ ಸಂಗ್ರಹಿಸಿದರು. ಈ ವೇಳೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರನ್ನು ಸಭೆಯಿಂದ ಹೊರಗಿಡಲಾಗಿತ್ತು.
ಶುಕ್ರವಾರವೂ ಕೆ.ಸಿ.ವೇಣುಗೋಪಾಲ್ ಅವರು ಬೆಂಗಳೂರು ಉತ್ತರ, ದಕ್ಷಿಣ, ಕೇಂದ್ರ ಮತ್ತು ಗ್ರಾಮಾಂತರ ಲೋಕಸಭಾ ಕ್ಷೇತ್ರಗಳ ಮುಖಂಡರ ಜೊತೆ ಪ್ರತ್ಯೇಕವಾಗಿ ಸಭೆ ನಡೆಸಲಿದ್ದಾರೆ.












Click it and Unblock the Notifications