ಬೆಂಗಳೂರು 'ಜಲಕಂಟಕ' ನಿವಾರಣೆಗೆ ಕಾಂಗ್ರೆಸ್ ನಾಯಕರ ಟಿಪ್ಸ್!
ಬೆಂಗಳೂರು, ಸೆಪ್ಟೆಂಬರ್ 09: ''ಬೆಂಗಳೂರಿನ ಇತಿಹಾಸದಲ್ಲೇ ಯಾವತ್ತೂ ಜನರನ್ನು ಬೋಟ್ ಮೂಲಕ ಸ್ಥಳಾಂತರಿಸಿದ ಪರಿಸ್ಥಿತಿಯು ಎದುರಾಗಿರಲಿಲ್ಲ. ಆದರೆ ಇಂದಿನ ಸಿಲಿಕಾನ್ ಸಿಟಿಯ ದುಸ್ಥಿತಿಗೆ ಬಿಜೆಪಿ ಸರ್ಕಾರವೇ ಮುಖ್ಯ ಕಾರಣ'' ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲಾ ದೂಷಿಸಿದ್ದಾರೆ.
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ನಾಯಕರು ಜಂಟಿ ಸುದ್ದಿಗೋಷ್ಠಿ ನಡೆಸಿದರು. ಇದೇ ವೇಳೆ ರಣದೀಪ್ ಸುರ್ಜೆವಾಲಾ, ಮಾಜಿ ಸಿಎಂ ಸಿದ್ದರಾಮಯ್ಯ, ಮಾಜಿ ಸಚಿವ ಜಿ ಪರಮೇಶ್ವರ್, ಮಾಜಿ ಸಚಿವ ರಾಮಲಿಂಗಾರೆಡ್ಡಿ, ಮಾಜಿ ಸಚಿವ ಕೆಜೆ ಜಾರ್ಜ್ ಸೇರಿದಂತೆ ಹಲವು ನಾಯಕರು ಬಿಜೆಪಿ ಸರ್ಕಾರದ ವಿರುದ್ಧ ಕೆಂಡ ಕಾರಿದರು.
ಸಿಲಿಕಾನ್ ಸಿಟಿ, ಐಟಿ ಹಬ್ ಎಂದು ಹೆಸರುವಾಸಿ ಆಗಿದ್ದ ಬೆಂಗಳೂರಿಗೆ ಇಂಥಾ ದುಸ್ಥಿತಿ ಎದುರಾಗಲು ಕಾರಣಗಳೇನು?, ಜಲ ಪ್ರಳಯ ಎದುರಿಸುತ್ತಿರುವ ಪ್ರದೇಶಗಳಿಗೆ ಪರಿಹಾರ ಯಾವ ರೀತಿ ಇರಬೇಕು?, ಬಿಜೆಪಿ ಸರ್ಕಾರವು ಯಾವ ರೀತಿ ಕ್ರಮಗಳನ್ನು ತೆಗೆದುಕೊಳ್ಳಬೇಕು?, ಸರ್ಕಾರದ ಎದುರು ಕಾಂಗ್ರೆಸ್ ನಾಯಕರ ಇಡುವ ಬೇಡಿಕೆಗಳೇನು? ಹೀಗೆ ಹಲವು ವಿಷಯಗಳ ಬಗ್ಗೆ ಕಾಂಗ್ರೆಸ್ ನಾಯಕರು ತಮ್ಮ ಮಾತುಗಳಲ್ಲಿ ಉಲ್ಲೇಖಿಸಿದರು. ಬೆಂಗಳೂರಿನ ಬಗ್ಗೆ ಯಾವ ನಾಯಕರು ಏನು ಹೇಳಿದರು ಎಂಬುದನ್ನು ಈ ವರದಿಯಲ್ಲಿ ತಿಳಿದುಕೊಳ್ಳೋಣ.

ಬೆಂಗಳೂರಿಗೆ ನಮ್ಮ ಕಾಲದಲ್ಲಿ ಈ ಗತಿ ಇರಲಿಲ್ಲ
ಈ ಹಿಂದೆ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಬೆಂಗಳೂರಿನ ಸ್ವರೂಪವನ್ನು ಬದಲಿಸಲು ಅಂದಿನ ಸಚಿವರಾಗಿದ್ದ ಡಾ. ಜಿ. ಪರಮೇಶ್ವರ್, ರಾಮಲಿಂಗಾ ರೆಡ್ಡಿ, ಕೆ.ಜೆ ಜಾರ್ಜ್ ಸಾಕಷ್ಟು ಶ್ರಮ ವಹಿಸಿದ್ದರು. ಒಂದು ಕಾಲದಲ್ಲಿ ಐಟಿ ರಾಜಧಾನಿ ಹಾಗೂ ಹಸಿರು ನಗರ ಎಂದು ಖ್ಯಾತಿ ಪಡೆದಿದ್ದ ಬೆಂಗಳೂರು, ಇಂದು ಪ್ರವಾಹ ಪೀಡಿತ ನಗರವಾಗಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲಾ ಕಿಡಿ ಕಾರಿದರು.
ಕಳೆದ 16 ವರ್ಷಗಳ ಅವಧಿಯಲ್ಲಿ 11 ವರ್ಷಗಳ ಕಾಲ ಬಿಜೆಪಿ ಆಡಳಿತ ನಡೆಸಿದೆ. ಬೆಂಗಳೂರಿನಲ್ಲಿ 3 ಬಿಜೆಪಿಯ ಸಂಸದರಿದ್ದು, ಈ ಕ್ಷೇತ್ರಗಳ 4 ವಿಧಾನಸಭಾ ಕ್ಷೇತ್ರಗಳು ಸಂಪೂರ್ಣವಾಗಿ ಪ್ರವಾಹ ಸ್ಥಿತಿ ಎದುರಿಸಿವೆ. ಬೆಂಗಳೂರಿನ ಇತಿಹಾಸದಲ್ಲಿ ಬೋಟ್ ಮೂಲಕ ಜನರನ್ನು ಸಾಗಿಸಿದ ಇತಿಹಾಸವೇ ಇರಲಿಲ್ಲ, ಆದರೆ ಇಂದಿನ ಸ್ಥಿತಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಶೇ.40 ಪರ್ಸೆಂಟ್ ಕಮಿಷನ್ ಸರ್ಕಾರವೇ ಕಾರಣ ಎಂದು ಅವರು ದೂಷಿಸಿದರು.

ಬೆಂಗಳೂರು ಉದ್ಧಾರಕ್ಕೆ ಕಾಂಗ್ರೆಸ್ಸಿನ 7 ಪ್ರಮುಖ ಬೇಡಿಕೆ
ಸಿಲಿಕಾನ್ ಸಿಟಿಯಲ್ಲಿ ರಾಜ ಕಾಲುವೆಗಳಲ್ಲಿ ಕಸ ಎತ್ತದಿರುವುದು, ಅನಧಿಕೃತ ಒತ್ತುವರಿ ತೆರವು ಮಾಡದಿರುವುದು, ಕೆರೆಗಳ ನಡುವೆ ಸಂಪರ್ಕ ಸಾಧಿಸದೇ ಇರುವುದೇ ಈ ಪ್ರವಾಹ ಪರಿಸ್ಥಿತಿಗೆ ಕಾರಣವಾಗಿದೆ. ಹೀಗಾಗಿ ಕಾಂಗ್ರೆಸ್ ಪಕ್ಷ ವಿಷನ್ ಬೆಂಗಳೂರು ಹಾಗೂ ಉತ್ತಮ ಬೆಂಗಳೂರಿಗೆ ಒಂದು ಯೋಜನೆಯನ್ನು ಹೊಂದಿದೆ. ಅದಕ್ಕಾಗಿ ಒಂದು ಸಮಿತಿ ರಚಿಸಲಾಗಿದ್ದು, ಈ ಸಮಿತಿ 20 ದಿನಗಳ ಒಳಗಾಗಿ ವರದಿ ಸಲ್ಲಿಸಬೇಕು. ಈ ಸಮಿತಿ ನಾಗರೀಕ ಸಮಾಜದ ಪ್ರತಿನಿಧಿಗಳು ಸೇರಿದಂತೆ ಎಲ್ಲ ವರ್ಗದ ಜನರಿಂದ ಅಭಿಪ್ರಾಯ ಸಂಗ್ರಹಿಸಲಿದೆ ಎಂದು ಕಾಂಗ್ರೆಸ್ ಹೇಳಿದೆ. ಇದರ ಜೊತೆ ಸರ್ಕಾರದ ಮುಂದೆ ಕಾಂಗ್ರೆಸ್ 7 ಪ್ರಮುಖ ಬೇಡಿಕೆಗಳನ್ನು ಇಟ್ಟಿದೆ.ಸಿಲಿಕಾನ್ ಸಿಟಿಯಲ್ಲಿ ರಾಜ ಕಾಲುವೆಗಳಲ್ಲಿ ಕಸ ಎತ್ತದಿರುವುದು, ಅನಧಿಕೃತ ಒತ್ತುವರಿ ತೆರವು ಮಾಡದಿರುವುದು, ಕೆರೆಗಳ ನಡುವೆ ಸಂಪರ್ಕ ಸಾಧಿಸದೇ ಇರುವುದೇ ಈ ಪ್ರವಾಹ ಪರಿಸ್ಥಿತಿಗೆ ಕಾರಣವಾಗಿದೆ. ಹೀಗಾಗಿ ಕಾಂಗ್ರೆಸ್ ಪಕ್ಷ ವಿಷನ್ ಬೆಂಗಳೂರು ಹಾಗೂ ಉತ್ತಮ ಬೆಂಗಳೂರಿಗೆ ಒಂದು ಯೋಜನೆಯನ್ನು ಹೊಂದಿದೆ. ಅದಕ್ಕಾಗಿ ಒಂದು ಸಮಿತಿ ರಚಿಸಲಾಗಿದ್ದು, ಈ ಸಮಿತಿ 20 ದಿನಗಳ ಒಳಗಾಗಿ ವರದಿ ಸಲ್ಲಿಸಬೇಕು. ಈ ಸಮಿತಿ ನಾಗರೀಕ ಸಮಾಜದ ಪ್ರತಿನಿಧಿಗಳು ಸೇರಿದಂತೆ ಎಲ್ಲ ವರ್ಗದ ಜನರಿಂದ ಅಭಿಪ್ರಾಯ ಸಂಗ್ರಹಿಸಲಿದೆ ಎಂದು ಕಾಂಗ್ರೆಸ್ ಹೇಳಿದೆ. ಇದರ ಜೊತೆ ಸರ್ಕಾರದ ಮುಂದೆ ಕಾಂಗ್ರೆಸ್ 7 ಪ್ರಮುಖ ಬೇಡಿಕೆಗಳನ್ನು ಇಟ್ಟಿದೆ.
ಕಾಂಗ್ರೆಸ್ ಇಟ್ಟಿರುವ 7 ಬೇಡಿಕೆಗಳು:
* ಸರ್ಕಾರ ಪ್ರವಾಹ ಹಾಗೂ ರಸ್ತೆಗುಂಡಿ ವಿಚಾರವಾಗಿ ಒಂದು ವಾರದ ಒಳಗಾಗಿ ಶ್ವೇತಪತ್ರ ಹೊರಡಿಸುವುದು. ಇದರಿಂದ ದುರಾಡಳಿತ, ಭ್ರಷ್ಟಾಚಾರ, ಮೂಲಸೌಕರ್ಯಗಳ ದುಸ್ಥಿತಿಯನ್ನು ಜನರ ಮುಂದೆ ಇಡಬಹುದು.
* ಸರ್ವಪಕ್ಷ ಸಭೆ ಕರೆದು, ಎಲ್ಲ ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ನಾಗರೀಕ ಸಮಾಜ, ವಿವಿಧ ವರ್ಗಗಳ ಜನರ ಅಭಿಪ್ರಾಯ ಪಡೆಯಬೇಕು.
* ಸರ್ವಪಕ್ಷ ಪ್ರವಾಹ ಸಮಿತಿ ರಚಿಸಿ, ಮನೆ ಹಾನಿಯಾಗಿದ್ದರೆ 5 ಲಕ್ಷದಿಂದ 25 ಲಕ್ಷದವರೆಗೂ ಪರಿಹಾರ, ವಾಹನ ಹಾನಿಗೆ ಪ್ರತ್ಯೇಕ ಪರಿಹಾರ ನೀಡಬೇಕು. ನಗರದ ಮೂಲಭೂತ ಸೌಕರ್ಯ ಮರು ಸ್ಥಾಪಿಸಬೇಕು.
* ಪ್ರವಾಹ ಸಂದರ್ಭದಲ್ಲಿ ಜನರನ್ನು ಸ್ಥಳಾಂತರಿಸಲು ರಾಷ್ಟ್ರೀಯ ವಿಪತ್ತು ನಿರ್ವಹಣೆ ಪಡೆ ಸಹಾಯ ಪಡೆಯಲಿಲ್ಲ ಏಕೆ? ಇನ್ನಾದರೂ ಜನರನ್ನು ಸುರಕ್ಷಿತ ಕ್ಷೇತ್ರಗಳಿಗೆ ಸ್ಥಳಾಂತರಿಸಬೇಕು.
* ಆರೋಗ್ಯ ಶಿಬಿರ ಮಾಡಿ ಅನಾರೋಗ್ಯ ಹರಡುವುದನ್ನು ತಡೆಯಿರಿ
* ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸ್ವಚ್ಛ ಕಾರ್ಯ ಮಾಡಬೇಕು
* ಕೂಡಲೇ ಸಹಾಯವಾಣಿ ಸ್ಥಾಪಿಸಿ ಪ್ರವಾಹ ಪೀಡಿತ ಜನರ ಸಮಸ್ಯೆ ಆಲಿಸಬೇಕು

ಈಗಿನ ಮಳೆ ದುರಂತಗಳಿಗೆ ಹಿಂದಿನ ಕಾಂಗ್ರೆಸ್ ಸರ್ಕಾರ ಹೇಗೆ ಕಾರಣ?
ಬೆಂಗಳೂರಿನಲ್ಲಿ ಆಗಿರುವ ಅನಾಹುತಕ್ಕೆ ಹಿಂದಿನ ಕಾಂಗ್ರೆಸ್ ಸರ್ಕಾರವೇ ಕಾರಣ ಎಂದಿದ್ದಾರೆ. ಇದಕ್ಕೆ ನಾವು ಹೇಗೆ ಕಾರಣ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ. ಪ್ರವಾಹ ಬಂದರೆ ಅದರಿಂದ ಆಗುವ ದುಷ್ಪರಿಣಾಮಗಳನ್ನು ಎದುರಿಸಲು ಕಳೆದ 3 ವರ್ಷಗಳಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರವು ಯಾವ ರೀತಿ ಕ್ರಮಗಳನ್ನು ತೆಗೆದುಕೊಂಡಿದೆ ಎಂದು ಸಿದ್ದರಾಮಯ್ಯ ಕೇಳಿದ್ದಾರೆ. ಗುರುವಾರ ನಾನು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಿದೆ. ಅನೇಕ ಬಡವಾಣೆಗಳಲ್ಲಿ ನೀರು ಮನೆಗೆ ನುಗ್ಗಿದ್ದು ಜನ ಕಷ್ಟಕ್ಕೆ ಸಿಲುಕಿದ್ದಾರೆ. ಈ ಪ್ರದೇಶಗಳಲ್ಲಿ ಒಬ್ಬರೂ ವಾಸಿಸುತ್ತಿಲ್ಲ. 5-6 ಅಡಿ ನಿಂತಿದೆ. ಬೆಂಗಳೂರಿನ ಇತಿಹಾಸದಲ್ಲೇ ಯಾವತ್ತೂ ಜನರನ್ನು ದೋಣಿಯಲ್ಲಿ ಸಾಗಿಸುವ ಪರಿಸ್ಥಿತಿ ಎದುರಾಗಿರಲಿಲ್ಲ, ಆದರೆ ಈಗ ಏಕೆ ಅಂಥ ಪರಿಸ್ಥಿತಿ ಸೃಷ್ಟಿ ಆಯಿತು ಎಂದರು.
ಕಳೆದ 2006 ರಿಂದ 2022ರವರೆಗೆ 16 ವರ್ಷಗಳ ಅವಧಿಯಲ್ಲಿ ಬಿಜೆಪಿ ಹೆಚ್ಚು ಆಡಳಿತ ನಡೆಸಿದೆ. ಕೆರೆಗಳ ಹೂಳು ಎತ್ತದೇ ಇರುವುದು, ಕೆರೆಗಳ ಸಂಪರ್ಕ ಇಲ್ಲದಿರುವುದು, ರಾಜಕಾಲುವೆ ಒತ್ತುವರಿ ತೆರವು ಹಾಗೂ ಸ್ವಚ್ಛಗೊಳಿಸದೇ ಇರುವುದು ಈ ಪ್ರವಾಹಕ್ಕೆ ಪ್ರಮುಖ ಕಾರಣವಾಗಿದೆ. ನಮ್ಮ ಸರ್ಕಾರ ಇದ್ದಾಗ ಸಮೀಕ್ಷೆ ನಡೆಸಿ, ಒತ್ತುವರಿ ಪ್ರದೇಶ ಗುರುತಿಸಲಾಗಿತ್ತು. ಆಗ ಒಟ್ಟು 1953 ಒತ್ತುವರಿ ಪ್ರದೇಶಗಳಿದ್ದವು. ಅದರಲ್ಲಿ 1300 ಒತ್ತುವರಿ ತೆರವುಗೊಳಿಸಿದ್ದೆವು. ಇನ್ನು 653 ಒತ್ತುವರಿ ತೆರೆವಾಗಿರಲಿಲ್ಲ. ಅಷ್ಟರಲ್ಲಿ ಸರ್ಕಾರ ಪತನವಾಯಿತು. ನಂತರ ಕುಮಾರಸ್ವಾಮಿ ಹಾಗೂ ಬಿಜೆಪಿ ಸರ್ಕಾರ ಬಂದಿತ್ತು. ಇವರು ಒತ್ತುವರಿ ತೆರವು ಕಾರ್ಯ, ಕೆರೆ ಹೂಳು ಎತ್ತುವ ಕೆಲಸ ಮಾಡಲಿಲ್ಲ ಯಾಕೆ? ಈ ಕಾರಣಕ್ಕೆ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸಿದ್ದರಾಮಯ್ಯ ಆರೋಪಿಸಿದರು.

ಬಿಜೆಪಿ ಶಾಸಕರಿಗೆ ಮತ್ತು ಸರ್ಕಾರಕ್ಕೆ ಸಿದ್ದರಾಮಯ್ಯ ಸವಾಲು
ಬೆಂಗಳೂರಿನಲ್ಲಿ ಇಂದಿನ ಪರಿಸ್ಥಿತಿಗೆ ಕಾರಣ ಯಾರು? ರಾಜ್ಯದಲ್ಲಿ ಹೆಚ್ಚು ಆಡಳಿತ ನಡೆಸಿದವರು ಬಿಜೆಪಿಯವರೇ. ಪ್ರವಾಹ ಪೀಡಿತ ಕ್ಷೇತ್ರಗಳಲ್ಲಿ ಇರುವ ಶಾಸಕರೂ ಬಿಜೆಪಿಯವರೇ. ಇವರೆಲ್ಲ ಎಷ್ಟು ವರ್ಷಗಳಿಂದ ಶಾಸಕರಾಗಿದ್ದಾರೆ? ಇವರೆಲ್ಲ ಏನು ಮಾಡುತ್ತಿದ್ದಾರೆ? ಈಗ ಇವರು ಜವಾಬ್ದಾರಿಯಿಂದ ನುಣುಚಿಕೊಳ್ಳಲು ಕಾಂಗ್ರೆಸ್ ಕಡೆಗೆ ಬೊಟ್ಟು ಮಾಡುತ್ತಿದ್ದಾರೆ. ಇವರು ಹಣ ಬಿಡುಗಡೆ ಮಾಡಿರುವುದಾಗಿ ಹೇಳುತ್ತಾರೆ. ಆದರೆ ಕಾರ್ಯ ಯೋಜನೆ ಅನುಷ್ಠಾನ ಮಾಡಿಲ್ಲ. ಇಂತಹ ಕೆಟ್ಟ ಪರಿಸ್ಥಿತಿಗೆ ಬಿಜೆಪಿ ಕಾರಣ. ಬಿಜೆಪಿಯ 3 ಸಂಸದರಿದ್ದಾರೆ. ಅವರ ಕೆಲಸ ಏನು? ಶಾಸಕರ ಕೆಲಸ ಏನು? ಕಳೆದ ಬಾರಿ 100 ಪಾಲಿಕೆ ಸದಸ್ಯರಿದ್ದರು ಅವರ ಕೆಲಸ ಏನು? ನಮ್ಮ ಮೇಲೆ ಆರೋಪ ಹೊರಿಸಿ ನಿಮ್ಮ ಲೋಪ ಮುಚ್ಚಿಕೊಳ್ಳುತ್ತಿರುವುದನ್ನು ಬೆಂಗಳೂರಿನ ಜನ ಕ್ಷಮಿಸುವುದಿಲ್ಲ ಎಂದು ಸಿದ್ದರಾಮಯ್ಯ ಸಿಡಿಮಿಡಿಗೊಂಡರು.
ಈ ಸರ್ಕಾರಕ್ಕೆ ಯಾವುದೇ ದೂರದೃಷ್ಟಿ ಇಲ್ಲ. ಹೀಗಾಗಿ ನಮ್ಮ ಪಕ್ಷ ಒಂದು ಸಮಿತಿ ಮಾಡಿದೆ. ಪ್ರವಾಹದಿಂದ ಆಗಿರುವ ನಷ್ಟಗಳಿಗೆ ಪರಿಹಾರ ನೀಡುವವರು ಯಾರು? ಪ್ರವಾಹದಿಂದ ಒಂದು ಹುಡುಗಿ ಸತ್ತಿದ್ದರೂ ಇದುವರೆಗೂ ಪರಿಹಾರ ನೀಡಿಲ್ಲ. ನಾನು ಕಮಿಷನರ್ ಕರೆ ಮಾಡಿದಾಗ ವಿದ್ಯುತ್ ಸಂಸ್ಥೆ ನೀಡಬೇಕು ಎಂದು ಸಬೂಬು ಹೇಳುತ್ತಾರೆ. ಸರ್ಕಾರದ ನಿರ್ಲಕ್ಷ್ಯ ಬೇಜವಾಬ್ದಾರಿತನ, ಭ್ರಷ್ಟಾಚಾರದಿಂದ ನಗರದಲ್ಲಿ ನರಕದ ಪರಿಸ್ಥಿತಿ ಸೃಷ್ಟಿಯಾಗಿದೆ. ಜನ ಹೊಟೇಲುಗಳಲ್ಲಿ ವಾಸ ಮಾಡುತ್ತಿದ್ದಾರೆ. ಅನೇಕರಿಗೆ ಆಹಾರ ಇಲ್ಲವಾಗಿದೆ. ಇದಕ್ಕೆಲ್ಲ ಬಿಜೆಪಿ ನೇರ ಹೊಣೆ. ಪ್ರವಾಹ ಪರಿಸ್ಥಿತಿ ಕುರಿತು ಸರ್ಕಾರ ಶ್ವೇತಪತ್ರ ಹೊರಡಿಸಲಿ. ಅಧಿವೇಶನದಲ್ಲಿ ನಾನು ಈ ವಿಚಾರ ಪ್ರಸ್ತಾಪಿಸುತ್ತೇನೆ, ಸರ್ಕಾರದ ಗಮನ ಸೆಳೆಯುತ್ತೇನೆ.
ಜನರ ರಕ್ಷಿಸದಿದ್ದರೆ ಅಧಿಕಾರದಲ್ಲಿ ಯಾಕೆ ಇರಬೇಕು? ನಾವು ವಿಧಾನಸೌಧದ ಒಳಗೆ ಹಾಗೂ ಹೊರಗೆ ಇವರ ಭ್ರಷ್ಟಾಚಾರ ಹಾಗೂ ವೈಫಲ್ಯದ ವಿರುದ್ಧ ಹೋರಾಡುತ್ತೇವೆ. ಸರ್ಕಾರ ಕೂಡಲೇ ಜನರ ಕಷ್ಟಗಳಿಗೆ ಸ್ಪಂದಿಸಬೇಕು. ಇಲ್ಲದಿದ್ದರೆ ನಾವು ಹೋರಾಟ ಮಾಡಬೇಕಾಗುತ್ತದೆ ಎಂದು ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು.

ಸಿಲಿಕಾನ್ ಸಿಟಿ ಜಲಪ್ರಳಯಕ್ಕೆ ಹೊಸ ಕಾರಣ ಬೇಕೇ?
ನಾನೂ ಸಹ ಬೆಂಗಳೂರು ಉಸ್ತುವಾರಿ ಸಚಿವನಾಗಿ ಕೆಲಸ ಮಾಡಿದ್ದೇನೆ. ಈ ಪ್ರವಾಹ ಯಾಕೆ ಆಗಿದೆ ಎಂಬ ಕಾರಣ ಹೊಸದಾಗಿ ಕಂಡು ಹಿಡಿಯಬೇಕಿಲ್ಲ. ಈ ಸಮಸ್ಯೆಗೆ ಕಾರಣ ಏನು ಎಂಬುದು ತಿಳಿದಿದೆ. ಪ್ರತಿ ವರ್ಷ ಹೆಚ್ಚು ಮಳೆ ಬಂದಾಗ ಯಾವ ಭಾಗದಲ್ಲಿ ಪ್ರವಾಹ ಆಗುತ್ತೆ ಎಂಬುದು ತಿಳಿಯುತ್ತದೆ ಎಂದು ಮಾಜಿ ಸಚಿವ ಡಾ. ಜಿ ಪರಮೇಶ್ವರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ 350ಕ್ಕೂ ಹೆಚ್ಚು ಕೆರೆಗಳಿದ್ದವು. ಈಗ 44 ಕೆರೆ ಉಳಿದಿವೆ. ಕೆರೆಯಿಂದ ಕೆರೆಗೆ ಹರಿಯುವ ನೀರು ಕಾಲುವೆಗೆ ಚರಂಡಿ ನೀರು ಬಿಡುತ್ತಿದ್ದೆವೆ. ಇದರಿಂದ ಕಸ ಕಟ್ಟಿ ಸೇರಿಕೊಂಡಿವೆ. ನಂತರ ಈ ಮಾರ್ಗದಲ್ಲಿ ಕಟ್ಟಡ ನಿರ್ಮಾಣವಾಗಿದೆ. ನಂತರ ಇದನ್ನು ನಾವು ತೆರವುಗೊಳಿಸಲು ಮುಂದಾಗಿದ್ದೇವೆ. ನಮ್ಮ ಸರ್ಕಾರವಿದ್ದ ಸಮಯದಲ್ಲಿ ನಾವು ಒತ್ತುವರಿ ತೆರವು ಮಾಡಲು ಪ್ರಯತ್ನಿಸಿದ್ದೇವೆ. ಆದರೆ ನಂತರದ ಸರ್ಕಾರಗಳು ಇದನ್ನು ಮುಂದುವರಿಸಬೇಕಿತ್ತು. ನಾವು ಸಚಿವರಾಗಿದ್ದಾಗ ಮಳೆ ಬರುವ ಮುನ್ನ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲು ಸಭೆ ಮಾಡುತ್ತಿದ್ದೆವು. ಅಧಿಕಾರಿಗಳಿಗೆ ಸೂಚನೆ ನೀಡುತ್ತಿದ್ದೆವು. ಈ ಸರ್ಕಾರ ಯಾವುದೇ ಪ್ರಯತ್ನ ಮಾಡಿಲ್ಲ ಎಂದು ದೂಷಿಸಿದರು.
ಕಾಲುವೆಯಲ್ಲಿ ಸರಾಗವಾಗಿ ನೀರು ಹರಿದಿದ್ದರೆ ಪ್ರವಾಹ ಆಗುತ್ತಿರಲಿಲ್ಲ. ಈ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ. ಇನ್ನು ಪರಿಹಾರ ನೀಡುವ ವಿಚಾರದಲ್ಲಿ ಸರ್ಕಾರಕ್ಕೆ ಒಂದು ಪ್ರಶ್ನೆ ಕೇಳುತ್ತೇನೆ. ಸರ್ಕಾರ ಸರ್ವಪಕ್ಷ ಸಭೆ ಕರೆಯುತ್ತಿಲ್ಲ ಯಾಕೆ? ಬೇರೆ ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡಿದ್ದರೆ ನಾವು ಜವಾಬ್ದಾರಿ ಹಂಚಿಕೊಂಡು ಸಲಹೆ ನೀಡುತ್ತಿದ್ದೆವು. ಇನ್ನು ಹೊಸದಾಗಿ 110 ಹಳ್ಳಿಗಳನ್ನು ಸೇರಿಸಿಕೊಂಡಿದ್ದರು. ಇಲ್ಲಿಯವರೆಗೂ ಸರಿಯಾದ ಚರಂಡಿ, ರಸ್ತೆ ಇಲ್ಲವಾಗಿದೆ. ಅಲ್ಲಿನ ನೀರು ಹೇಗೆ ಹೋಗಬೇಕು ಎಂಬುದರ ಬಗ್ಗೆ ಸರಿಯಾದ ಯೋಜನೆ ರೂಪಿಸಿಲ್ಲ ಎಂದು ಆರೋಪಿಸಿದರು.
ಸರ್ಕಾರ ಕೂಡಲೇ ಎಲ್ಲೆಲ್ಲಿ ರಾಜಕಾಲುವೆ ಒತ್ತುವರಿಯಾಗಿದೆ. ಅಲ್ಲಿ ತೆರವುಗೊಳಿಸಬೇಕು. ಕಾಲುವೆಗಳ ಪುನರ್ ವಿನ್ಯಾಸ ಆಗಬೇಕು. ನೈಸರ್ಗಿಕ ಕಾಲುವೆ ಈಗ ಮಾಯವಾಗಿದ್ದು, ವೈಜ್ಞಾನಿಕ ರೀತಿಯಲ್ಲಿ ಕಾಲುವೆ ನಿರ್ಮಾಣ. ಕಾಲುವೆಗಳ ವ್ಯವಸ್ಥಿತ ಡೀಸಿಂಟಿಂಗ್ ಆಗಬೇಕು. ವಾರ್ಷಿಕ ನಿರ್ವಹಣೆಗೆ ಸಂಸ್ಥೆ ನಿರ್ಮಾಣ ಮಾಡಬೇಕು. ಬೆಂಗಳೂರಿಗೆ ಬರುತ್ತಿರುವ ಕೆಟ್ಟ ಹೆಸರು ತಪ್ಪಿಸಬೇಕು. ಐಟಿ ಕಂಪನಿಗಳು ಈ ಸಮಸ್ಯೆ ಬಗ್ಗೆ ಎಚ್ಚರಿಕೆ ನೀಡುತ್ತಿದ್ದಾರೆ. ಬೆಂಗಳೂರಿಗೆ ಬರುತ್ತಿದ್ದ ಬಂಡವಾಳ ನಿಂತಿದೆ. ಬ್ರ್ಯಾಂಡ್ ಬೆಂಗಳೂರು ಹಾಳಾಗುತ್ತಿದೆ. ಇದಕ್ಕೆಲ್ಲ ಸರ್ಕಾರ ಹೊಣೆಯಾಗಿದೆ ಎಂದು ಹೇಳಿದರು.

ಶ್ವೇತಪತ್ರ ಹೊರಡಿಸುವಂತೆ ಬಿಜೆಪಿ ಸರ್ಕಾರಕ್ಕೆ ಜಾರ್ಜ್ ಆಗ್ರಹ
ಬೆಂಗಳೂರು ಕೆರೆಗಳ ನಗರ, ಈ ಹಿಂದೆ ಅವುಗಳ ನಡುವೆ ಒಂದಕ್ಕೊಂದು ಸಂಪರ್ಕ ಇತ್ತು. ನಮ್ಮ ಸರ್ಕಾರ 400 ಕಿ.ಮೀ ಸ್ಟ್ರೋಂ ವಾಟರ್ ಡ್ರೈನ್ ನಿರ್ಮಾಣ ಮಾಡಿದ್ದು, ಬಿಜೆಪಿ ಸರ್ಕಾರ ಯಾವುದೇ ರೀತಿ ಕ್ರಮ ತೆಗೆದುಕೊಂಡಿಲ್ಲ ಎಂದು ಮಾಜಿ ಸಚಿವ ಕೆಜೆ ಜಾರ್ಜ್ ಆರೋಪಿಸಿದ್ದಾರೆ. ಕೇವಲ ಅನುದಾನ ನೀಡಿದ್ದೇವೆ ಎಂದು ಹೇಳುತ್ತಾರೆ. ಆದರೆ ಕೆಲಸ ಮಾಡಿಲ್ಲ. ರಾಜಕಾಲುವೆ ಒತ್ತುವರಿ ತೆರವುಗೊಳಿಸಲು ನಾವು ಸರ್ವ ಪ್ರಯತ್ನ ಮಾಡಿದ್ದೆವು. ನಾವು ಬಡವರ ಮನೆ ಹೊಡೆದು ಹಾಕಿದಾಗ ಪರ್ಯಾಯ ವ್ಯವವಸ್ಥೆಗೆ ಮುಂದಾಗಿದ್ದೆವು. ಆದರೆ ಬಿಜೆಪಿ ಸರ್ಕಾರಕ್ಕೆ ಈ ಬಗ್ಗೆ ಆಸಕ್ತಿ ತೋರಲಿಲ್ಲ. ಬೆಂಗಳೂರಿಗೆ ಉಸ್ತುವಾರಿ ಸಚಿವರು ಇರಬೇಕು. ಈ ಹಿಂದೆ ಪ್ರವಾಹ ಎದುರಾದಾಗ ನಮ್ಮ ಸಚಿವರು, ಮೇಯರ್, ಸಹಾಯವಾಣಿಯ ಮುಂದೆ ನಿಂತಿರುತ್ತಿದ್ದರು.
ಸಿದ್ದರಾಮಯ್ಯ ಸರ್ಕಾರವಿದ್ದಾಗ 2300 ಕೋಟಿ ನೀಡಿ ಮೂಲಸೌಕರ್ಯ ವ್ಯವಸ್ಥೆ ಕಲ್ಪಿಸಲಾಗಿದ್ದು. ಕೊಳಚೆ ನೀರು ಹಾಗೂ ಮಳೆ ನೀರು ಪ್ರತ್ಯೇಕವಾಗಿ ಹೋಗಲು ಕಾಂಗ್ರೆಸ್ ಸರ್ಕಾರ ಶೇ.75ರಷ್ಟು ಕೆಲಸ ಮಾಡಿತ್ತು. ಕಳೆದ ಮೂರು ವರ್ಷದಲ್ಲಿ ಕೋವಿಡ್ ಹೆಸರಲ್ಲಿ ನಿರ್ಲಕ್ಷ್ಯ ಮಾಡಿದೆ. ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದ್ದು, ನಮ್ಮ ಮೇಲೆ ಆರೋಪ ಮಾಡುತ್ತಿದೆ. ಈ ವಿಚಾರವಾಗಿ ಶ್ವೇತಪತ್ರ ಹೊರಡಿಸಬೇಕು ಎಂದು ಜಾರ್ಜ್ ಆಗ್ರಹಿಸಿದ್ದಾರೆ.

ಬೆಂಗಳೂರಿನ ಬಗ್ಗೆ ಸರ್ಕಾರಕ್ಕೆ ಮನವರಿಕೆ ಮಾಡಿದ ರಾಮಲಿಂಗಾ ರೆಡ್ಡಿ
ದೇಶದ ಪ್ರಮುಖ ನಗರಗಳ ಪೈಕಿ ಬೆಂಗಳೂರು ಕೂಡ ಒಂದಾಗಿದೆ ಎಂದು ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ. ಈ ಹಿಂದೆ ಬೇರೆ ದೇಶದಿಂದ ಬರುವ ನಾಯಕರು ಮೊದಲು ದೆಹಲಿಗೆ ಹೋಗಿ ನಂತರ ಬೇರೆ ನಗರಗಳಿಗೆ ಹೋಗುತ್ತಿದ್ದರು. ಆದರೆ ಕಳೆದ 15-20 ವರ್ಷಗಳಿಂದ ಮೊದಲು ಬೆಂಗಳೂರಿಗೆ ಬಂದು ನಂತರ ಬೇರೆ ನಗರಗಳಿಗೆ ಹೋಗುತ್ತಿದ್ದಾರೆ. ಆ ಮಟ್ಟಿಗೆ ಬೆಂಗಳೂರಿನ ಖ್ಯಾತಿ ವಿಶ್ವ ಮಟ್ಟದಲ್ಲಿ ಹಬ್ಬಿದೆ. ನಮ್ಮ ನಗರಕ್ಕೆ ಸಿಲಿಕಾನ್ ಸಿಟಿ, ಗ್ರೀನ್ ಸಿಟಿ, ಗಾರ್ಡನ್ ಸಿಟಿ, ಐಟಿ ಸಿಟಿ, ಎಜುಕೇಶನ್ ಹಬ್ ಸೇರಿದಂತೆ ಅನೇಕ ಬಿರುದುಗಳಿವೆ ಎಂದು ರಾಮಲಿಂಗಾ ರೆಡ್ಡಿ ಉಲ್ಲೇಖಿಸಿದರು.
ಕಳೆದ 1947 ರಿಂದ ಕಾಂಗ್ರೆಸ್ ಸರ್ಕಾರಗಳು ನಿರಂತರ ಪರಿಶ್ರಮದಿಂದ ಬೆಂಗಳೂರನ್ನು ಈ ಮಟ್ಟಕ್ಕೆ ಬೆಳೆಸಿತ್ತು. ಕುಡಿಯುವ ನೀರಿಗಾಗಿ ಹಲವು ಹಂತದ ಕಾವೇರಿ ಯೋಜನೆ, ರಾಜಕಾಲುವೆಗಳ ನಿರ್ಮಾಣ, ಮೇಲ್ಸೇತುವೆಗಳು, ರಿಂಗ್ ರಸ್ತೆಗಳು, ಟೆಂಡರ್ ಶ್ಯೂರ್ ಸೇರಿದಂತೆ ಹತ್ತು ಹಲವು ಯೋಜನೆಗಳ ಮೂಲಕ ಬೆಂಗಳೂರು ನಗರ ನಿರ್ಮಾಣ ಮಾಡಿದ್ದೆವು. ಇದರಿಂದ ಬ್ರ್ಯಾಂಡ್ ಬೆಂಗಳೂರು ಎಂಬ ಹೆಗ್ಗಳಿಕೆ ಬಂದಿತ್ತು. ಬಿಜೆಪಿ ಸರ್ಕಾರ ಬಂದ ನಂತರ ಅವೈಜ್ಞಾನಿಕ ರೀತಿಯಲ್ಲಿ ಬೆಂಗಳೂರು ಸುತ್ತಮುತ್ತಲ ಪ್ರದೇಶವನ್ನು ಪಾಲಿಕೆ ವ್ಯಾಪ್ತಿಗೆ ಸೇರಿಸಿದರು. ಯಾವುದೇ ಅಭಿವೃದ್ಧಿ ಮಾಡಲಿಲ್ಲ. ನಮ್ಮ ಸರ್ಕಾರ ಬಂದ ನಂತರ ಅಭಿವೃದ್ಧಿ ಯೋಜನೆ ಕಾಮಗಾರಿ ಮಾಡಿದೆವು. ನಂತರ ಬಂದ ಸರ್ಕಾರ ಏನೂ ಮಾಡಲಿಲ್ಲ ಎಂದು ರಾಮಲಿಂಗಾ ರೆಡ್ಡಿ ಆರೋಪಿಸಿದರು.












Click it and Unblock the Notifications