ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜಾತಿ ಗಣತಿ ವರದಿ ಸೋರಿಕೆಯಲ್ಲಿ ಕಾಂಗ್ರೆಸ್‌ ನಾಯಕರು ಎಷ್ಟು ಬಾರಿ ರಾಜೀನಾಮೆ ನೀಡಬೇಕಿತ್ತು: ಡಾ.ಕೆ.ಸುಧಾಕರ್‌

|
Google Oneindia Kannada News

ಬೆಂಗಳೂರು, ನವೆಂಬರ್‌ 18 : ಜಾತಿ ಗಣತಿ ವರದಿಯನ್ನು ಸೋರಿಕೆ ಮಾಡಿರುವ ಕಾಂಗ್ರೆಸ್‌ ನಾಯಕರು ಎಷ್ಟು ಬಾರಿ ರಾಜೀನಾಮೆ ನೀಡಬೇಕಿತ್ತು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಪ್ರಶ್ನಿಸಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆಗೆ ಮಾತನಾಡಿದ ಅವರು, ಜಾತಿ ಗಣತಿಯ ವರದಿಯನ್ನು ಅಧಿಕೃತವಾಗಿ ಬಿಡುಗಡೆ ಮಾಡದ ಕಾಂಗ್ರೆಸ್‌ ನಾಯಕರು, ಪ್ರತಿ ಜಿಲ್ಲೆಗಳಲ್ಲಿ ಅವರ ಪಕ್ಷದ ಅಭ್ಯರ್ಥಿಗಳಿಗೆ ಮಾತ್ರ ವರದಿಯನ್ನು ಸೋರಿಕೆ ಮಾಡಿದ್ದರು ಎಂದು ಹೇಳಿದರು.

'ಜಾತಿ, ಮತ, ಪಂಥ, ಪಕ್ಷಗಳ ಭೇದ ಬಿಟ್ಟು ಹೆಜ್ಜೆ ಹಾಕಿದ ನಾಡಿಗೆ ಧನ್ಯವಾದ''ಜಾತಿ, ಮತ, ಪಂಥ, ಪಕ್ಷಗಳ ಭೇದ ಬಿಟ್ಟು ಹೆಜ್ಜೆ ಹಾಕಿದ ನಾಡಿಗೆ ಧನ್ಯವಾದ'

ಚುನಾವಣೆ ಹತ್ತಿರವಾದಂತೆ ಕ್ಷುಲ್ಲಕ ವಿಚಾರಗಳನ್ನೆತ್ತಿ ಆರೋಪ ಮಾಡುವುದನ್ನು, ಸುಳ್ಳು ಆಪಾದನೆ ಮಾಡುವುದನ್ನು ಕಾಂಗ್ರೆಸ್‌ ನಾಯಕರು ಕರಗತ ಮಾಡಿಕೊಂಡಿದ್ದಾರೆ. ಕಾಂಗ್ರೆಸ್‌ ಸರ್ಕಾರ ಇದ್ದಾಗ ಕಾಂತರಾಜು ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ, 130 ಕೋಟಿ ರೂ. ಖರ್ಚು ಮಾಡಿ ಜಾತಿ ಗಣತಿ ಮಾಡಲಾಗಿತ್ತು. ಆ ವರದಿಯನ್ನು ಅಧಿಕೃತವಾಗಿ ಬಿಡುಗಡೆ ಮಾಡದೆ ಕಾಂಗ್ರೆಸ್‌ ಅಭ್ಯರ್ಥಿಗಳ ಬಳಿ ಮಾತ್ರ ಹಂಚಿಕೊಳ್ಳಲಾಗಿತ್ತು. ಇದನ್ನು ನಾನು ಬೇಕಿದ್ದರೆ ಶೇರ್‌ ಮಾಡುತ್ತೇನೆ. ಜಾತಿ ಗಣತಿಯನ್ನು ಗೌಪ್ಯವಾಗಿ ಎಲ್ಲಾ ಜಿಲ್ಲೆಗಳಲ್ಲಿ ಅವರಿಗೆ ಬೇಕಾದವರಿಗೆ ಸೋರಿಕೆ ಮಾಡಲಾಗಿದೆ. ಇದರ ಹೊಣೆಗಾರಿಕೆಯನ್ನು ಕಾಂಗ್ರೆಸ್‌ ನಾಯಕರು ಹೊರುತ್ತಾರೆಯೇ ಎಂದು ಪ್ರಶ್ನಿಸಿದರು.

Congress leaked Kantaraju Commissions caste-census report for political gains says Dr. K. Sudhakar

ಚುನಾವಣಾ ಆಯೋಗದ ಮೂಲಕ ನಗರ ಪಾಲಿಕೆಗಳು ಎನ್‌ಜಿಒಗೆ ಕೆಲವು ಕೆಲಸಗಳನ್ನು ನೀಡುವುದು ನಿರಂತರವಾಗಿ ನಡೆದುಕೊಂಡೇ ಬಂದಿದೆ. ಕಾನೂನಿನ ಪರಿಮಿತಿಯಲ್ಲೇ ಈ ಕೆಲಸ ನಡೆಯುತ್ತದೆ. ನಿಯಮ ಪಾಲಿಸದೇ ಇದ್ದಲ್ಲಿ ಆ ಸಂಸ್ಥೆ ಮೇಲೆ ಕಾನೂನು ಕ್ರಮ ಜರುಗಿಸಲಾಗುತ್ತದೆ. ಇದನ್ನೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸ್ಪಷ್ಟವಾಗಿ ತಿಳಿಸಿದ್ದಾರೆ. ಅಷ್ಟಕ್ಕೇ ಮುಖ್ಯಮಂತ್ರಿಗಳ ರಾಜೀನಾಮೆ ಕೇಳಲಾಗುತ್ತಿದೆ. ಹಾಗಾದರೆ ಜಾತಿ ಗಣತಿ ವರದಿಯ ಸೋರಿಕೆಗಾಗಿ ವಿರೋಧ ಪಕ್ಷಗಳ ನಾಯಕರು ಎಷ್ಟು ಬಾರಿ ರಾಜೀನಾಮೆ ನೀಡಬೇಕಾಗುತ್ತದೆ ಎಂದು ಪ್ರಶ್ನೆ ಮಾಡಿದರು.

ಯಾವುದಾದರೂ ತಾರ್ಕಿಕವಾದ ವಿಷಯಗಳನ್ನು ಇಟ್ಟುಕೊಂಡು ಮಾತನಾಡಬೇಕು. ಆದರೆ ಕಾಂಗ್ರೆಸ್‌ ನಾಯಕರು ಕ್ಷುಲ್ಲಕ ವಿಷಯಗಳನ್ನು ಇಟ್ಟುಕೊಂಡು ಮಾತನಾಡಿ ಜನರ ಮುಂದೆ ಬೆತ್ತಲಾಗುತ್ತಿದ್ದಾರೆ. ಅವರು ಉತ್ಪ್ರೇಕ್ಷೆ ಮಾಡಿ ಮಾತನಾಡಿದ್ದಾರೆ. ಆದರೆ ಮುಖ್ಯಮಂತ್ರಿಗಳು ಈಗಾಗಲೇ ತನಿಖೆಗಾಗಿ ಕಾನೂನಿನ ಸಲಹೆ ಪಡೆಯಲು ಸೂಚಿಸಿದ್ದಾರೆ.

Congress leaked Kantaraju Commissions caste-census report for political gains says Dr. K. Sudhakar

ಕಾನೂನು ಸಲಹೆಯಂತೆ ಸರ್ಕಾರ ಕ್ರಮ ವಹಿಸಲಿದೆ. ಈ ರೀತಿಯ ರಾಜಕೀಯ ಹುನ್ನಾರ ಮಾಡುವುದು ಬಿಜೆಪಿಯ ಇತಿಹಾಸದಲ್ಲೇ ಇಲ್ಲ. ಶಿಕ್ಷಣ, ಆರೋಗ್ಯ, ನೀರಾವರಿ, ಕೈಗಾರಿಕೆ ಹೀಗೆ ಎಲ್ಲ ಕ್ಷೇತ್ರಗಳಲ್ಲಿ ಅಭಿವೃದ್ಧಿ ನಡೆಯುತ್ತಿರುವುದರಿಂದ ಇಂತಹ ವಿಷಯಗಳನ್ನು ಇಟ್ಟುಕೊಂಡು ಕಾಂಗ್ರೆಸ್‌ ಜನರ ಮುಂದೆ ಹೋಗುತ್ತಿದೆ ಎಂದರು.

English summary
Congress leaked Kantaraju Commission's caste-census report for political gains says Dr. K. Sudhakar,A survey commissioned spending Rs.130 crore public money has been misused by Congress.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X