DCM DK Shivakumar: ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಪತನ: ಮಹಾ ಸಿಎಂ ಹೇಳಿಕೆ ಕುರಿತು ಡಿ ಕೆ ಶಿವಕುಮಾರ್‌ ಏನಂದ್ರು?

ಬೆಂಗಳೂರು, ಮೇ 14: ಲೋಕಸಭೆ ಚುನಾವಣೆ ನಂತರ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಹೇಳಿಕೆ ಕುರಿತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಕಿಡಿಕಾರಿದ್ದಾರೆ.

ಈ ಕುರಿತು ಮಾಧ್ಯಮಗಳ ಜೊತೆಗೆ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌ ಮಾತನಾಡಿ, ಮಹಾರಾಷ್ಟ್ರ ಸರ್ಕಾರ ಉಳಿಯೋದೆ ಡೌಟ್‌ ಇದೆ. ಅಲ್ಲಿ ಶಾಸಕರು ಯೂಟರ್ನ್ ಹೊಡೆಯುತ್ತಿದ್ದಾರೆ. ಲೋಕಸಭಾ ಚುನಾವಣೆ ಬಳಿಕ ಅಲ್ಲಿ ನಮ್ಮ ಪಕ್ಷದ ಸರ್ಕಾರ ಬರಲಿದೆ. ಅಲ್ಲಿ ಮೈತ್ರಿ ಸರ್ಕಾರ ಬರಲಿದೆ ಎಂದು ಭವಿಷ್ಯ ನುಡಿದರು. ಎನ್‌ಸಿಪಿ, ಶಿವಸೇನೆಯ ಶಾಸಕರು ವಾಪಸ್ ಆಗ್ತಾ ಇದ್ದಾರೆ. ಅದಕ್ಕೆ ಅಲ್ಲಿ ಸರ್ಕಾರ ಬದಲಾವಣೆ ಆಗಲಿದೆ. ನಮ್ಮ ಸರ್ಕಾರದಲ್ಲಿ ಯಾವುದೇ ಶಿಂಧೆ ಇಲ್ಲ. ಅವರಲ್ಲೇ ಶಿಂಧೆ ಇದ್ದಾರೆ ಎಂದಿದ್ದಾರೆ.

Congress-led coalition government in Maharashtra after general elections Says DK Shivakumar

ಇಡೀ ದೇಶದಲ್ಲಿ ಇಂಡಿಯಾ ಒಕ್ಕೂಟದ ಪರವಾದ ಅಲೆಯಿದೆ. ಒಳ್ಳೆಯ ವಾತಾವರಣ ಕಾಣುತ್ತಿದ್ದು, ನಮ್ಮ ಒಕ್ಕೂಟ ಸರ್ಕಾರ ರಚನೆ ಮಾಡುತ್ತದೆ. ಮಹಾರಾಷ್ಟ್ರ ಮುಖ್ಯಮಂತ್ರಿ ಕರ್ನಾಟಕದಲ್ಲಿ ಆಪರೇಷನ್ ಮಾಡುವ ಬಗ್ಗೆ ಮಾತನಾಡಿದ್ದಾರೆ. ಅವರ ಸರ್ಕಾರವೇ ಬಿದ್ದು ಹೋಗುವ ಸ್ಥಿತಿಯಲ್ಲಿದೆ. ಎಲ್ಲಾ ರಿವರ್ಸ್ ಆಗಬಹುದು ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ವಿಶ್ವಾಸ ವ್ಯಕ್ತ ಪಡಿಸಿದರು.

ಅಪಹರಣಕ್ಕೆ ಒಳಗಾದ ಮಹಿಳೆಯ ಆಡಿಯೋ ವಿಡಿಯೋ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ, ಇದಕ್ಕೆ ಎಸ್ ಐಟಿ ಉತ್ತರ ನೀಡುತ್ತದೆ. ಇದರ ಬಗ್ಗೆ ನನಗೆ ಏನು ಗೊತ್ತಿಲ್ಲ. ನನ್ನ ಹೆಸರು ಬಳಸಿಕೊಂಡರೆ ಮಾಧ್ಯಮಗಳು ಹಾಕುತ್ತಾರೆ ಎಂದು ಉಪಯೋಗಿಸಿಕೊಳ್ಳುತ್ತಿದ್ದಾರೆ ಎಂದರು.

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಎಲ್ಲಾ ಆರು ಸ್ಥಾನಗಳನ್ನು ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಶಿವಕುಮಾರ್, "ಕಾಂಗ್ರೆಸ್ ಸರ್ಕಾರವು ಶಿಕ್ಷಕರ ಮತ್ತು ಪದವೀಧರರ ಸಮಸ್ಯೆಗಳ ಬಗ್ಗೆ ತಿಳಿದಿರುತ್ತದೆ ಮತ್ತು ನಾವು ಅಧಿಕಾರಕ್ಕೆ ಬಂದಾಗಲೆಲ್ಲಾ ಅವರ ಸಮಸ್ಯೆಗಳನ್ನು ಪರಿಹರಿಸಲು ಪ್ರಯತ್ನಿಸಿದ್ದೇವೆ. ."

"ನಾವು ಎನ್‌ಇಪಿ ಸೇರಿದಂತೆ ಹಲವು ವಿಷಯಗಳನ್ನು ಪ್ರಣಾಳಿಕೆಯಲ್ಲಿ ಉಲ್ಲೇಖಿಸಿದ್ದೇವೆ. ನಿರುದ್ಯೋಗಿ ಪದವೀಧರರಿಗೆ ನಮ್ಮಲ್ಲಿ ಖಾತರಿ ಯೋಜನೆ ಇದೆ. ಹಿಂದಿನ ಸರ್ಕಾರ ಪದವೀಧರರಿಗೆ ಮತ್ತು ಶಿಕ್ಷಕರಿಗೆ ಏನೂ ಮಾಡಿಲ್ಲ. ಪದವೀಧರರು ಮತ್ತು ಶಿಕ್ಷಕರು ಈ ಬಾರಿ ಕಾಂಗ್ರೆಸ್‌ಗೆ ಬೆಂಬಲ ನೀಡುತ್ತಾರೆ ಎಂಬ ವಿಶ್ವಾಸವಿದೆ ಎಂದರು.

ಹುಟ್ಟುಹಬ್ಬದ ಆಚರಣೆ ಬೇಡ

"ಚುನಾವಣೆ ಪ್ರಚಾರದ ನಿಮಿತ್ತ ನಾನು ಬೇರೆ ಊರಿಗೆ ತೆರಳುತ್ತಿದ್ದು ನನ್ನ ಹುಟ್ಟುಹಬ್ಬದ ಆಚರಣೆ ಬೇಡ ಎಂದು ಕಾರ್ಯಕರ್ತರು, ಮುಖಂಡರಿಗೆ ಮಾಧ್ಯಮಗಳ ಮೂಲಕ ಮನವಿ ಮಾಡಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+