ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಾಂಗ್ರೆಸ್ ಅಭ್ಯರ್ಥಿ ಕಗ್ಗಂಟಾಗಿರುವ 3 ಕ್ಷೇತ್ರಗಳು

|
Google Oneindia Kannada News

ಬೆಂಗಳೂರು, ಮಾ.13 : ಕರ್ನಾಟಕದಲ್ಲಿ ಎಲ್ಲ ಪಕ್ಷಗಳಿಗಿಂತ ಮೊದಲು ಅಭ್ಯರ್ಥಿಗಳನ್ನು ಆಯ್ಕೆ ಪ್ರಕಿಯೆಗೆ ಚಾಲನೆ ನೀಡಿದ್ದ ಕಾಂಗ್ರೆಸ್ ಪಕ್ಷ 14 ಕ್ಷೇತ್ರಗಳ ಅಭ್ಯರ್ಥಿಗಳನ್ನು ಬಿಡುಗಡೆ ಮಾಡಿದೆ. ಉಳಿದ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಸಿದ್ಧಗೊಂಡಿದೆ. ಆದರೆ, 3 ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಕಗ್ಗಂಟಾಗಿದ್ದು, ಪಟ್ಟಿ ಬಿಡುಗಡೆ ಮಾಡಲು ತೊಡಕಾಗಿದೆ.

ಕೆಪಿಸಿಸಿ ಅಧ್ಯಕ್ಷರು ನೀಡಿದ್ದ ಮಾಹಿತಿಯಂತೆ ಬುಧವಾರ ರಾತ್ರಿ ಕಾಂಗ್ರೆಸ್‌ ಎರಡನೇ ಪಟ್ಟಿ ಪ್ರಕಟವಾಗಬೇಕಾಗಿತ್ತು. ಆದರೆ, ಉತ್ತರಕನ್ನಡ, ಶಿವಮೊಗ್ಗ ಹಾಗೂ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಯಾರಾಗಬೇಕೆಂಬ ವಿಚಾರದಲ್ಲಿ ಬಿಕ್ಕಟ್ಟು ಸೃಷ್ಟಿಯಾಗಿದ್ದು, ಪಟ್ಟಿ ಬಿಡುಗಡೆ ವಿಳಂಬವಾಗಲು ಕಾರಣವಾಗಿದೆ.

siddu parameshwar

ಬೆಂಗಳೂರು ಸೆಂಟ್ರಲ್ ಕ್ಷೇತ್ರದಲ್ಲಿ ಪಕ್ಷದ ಹಿರಿಯ ಮುಖಂಡ ಸಿ.ಕೆ.ಜಾಫರ್ ಷರೀಫ್ ಟಿಕೆಟ್ ಗಾಗಿ ಪಟ್ಟು ಹಿಡಿದಿದ್ದಾರೆ. ಅವರಿಗೆ ಟಿಕೆಟ್ ನೀಡದಿದ್ದರೆ, ಅಲ್ಪಸಂಖ್ಯಾತ ಸಮುದಾಯ ಮುನಿಸಿಕೊಳ್ಳುವ ಸಾಧ್ಯತೆ ಇದೆ. ಆದ್ದರಿಂದ ಸೆಂಟ್ರಲ್ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಬಗ್ಗೆ ಮತ್ತೊಮ್ಮೆ ಸಭೆ ನಡೆಸಿ ನಿರ್ಧಾರ ಕೈಗೊಳ್ಳಲು ತೀರ್ಮಾನಿಸಲಾಗಿದೆ. [ಗೀತಾ ಸ್ಪರ್ಧೆ ಬಗ್ಗೆ ಶಿವಣ್ಣ ಹೇಳಿದ್ದೇನು?]

ಉತ್ತರ ಕನ್ನಡ ಜಿಲ್ಲೆಯಲ್ಲಿ ರಾಜ್ಯಸಭಾಸದಸ್ಯ ಬಿ.ಕೆ.ಹರಿಪ್ರಸಾದ್ ಮತ್ತು ಸಚಿವ ದೇಶಪಾಂಡೆ ಪುತ್ರ ಪ್ರಶಾಂತ್ ದೇಶಪಾಂಡೆ ಅವರ ಹೆಸರು ಕೇಳಿಬರುತ್ತಿದೆ. ರಾಜಸ್ತಾನ ರಾಜ್ಯಪಾಲೆ ಮಾರ್ಗರೆಟ್ ಆಳ್ವ ಅವರ ಪುತ್ರ ನಿವೇದಿತ್ ಆಳ್ವ ಅವರಿಗೆ ಟಿಕೆಟ್ ನೀಡಿಬೇಕು ಎಂಬ ಪ್ರಸ್ತಾಪವೂ ಇದೆ. ಆದ್ದರಿಂದ ಅಭ್ಯರ್ಥಿ ಆಯ್ಕೆ ಕಗ್ಗಂಟಾಗಿದೆ.[ಬಿಜೆಪಿ ಪಾಲಿಗೆ ಕಗ್ಗಂಟಾಗಿರುವ 8 ಕ್ಷೇತ್ರಗಳು]

ಇನ್ನೂ ಶಿವಮೊಗ್ಗ ಕ್ಷೇತ್ರದಲ್ಲಿ ಈಡಿಗ ಸಮುದಾಯಕ್ಕೆ ಸೇರಿದ ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರ ಪುತ್ರ ಕುಮಾರ್ ಬಂಗಾರಪ್ಪ ಅವರಿಗೆ ಟಿಕೆಟ್ ನೀಡುವುದು ಸೂಕ್ತ ಎಂದು ಸ್ಥಳೀಯ ನಾಯಕರು ಒತ್ತಾಯಿಸುತ್ತಿದ್ದಾರೆ. ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದು, ಅವರಿಗೆ ಪ್ರತಿಸ್ಪರ್ಧೆ ನೀಡುವ ಅಭ್ಯರ್ಥಿಗಾಗಿ ಹುಡುಕಾಟ ಮುಂದುವರೆದಿದೆ. [ಕಾಂಗ್ರೆಸ್ ಮೊದಲ ಪಟ್ಟಿ]

ಜೆಡಿಎಸ್ ಪಕ್ಷದಿಂದ ಬಂಗಾರಪ್ಪ ಕುಟುಂಬದ ಗೀತಾ ಶಿವರಾಜ್ ಕುಮಾರ್ ಅಥವ ಮಧು ಬಂಗಾರಪ್ಪ ಅವರಿಗೆ ಟಿಕೆಟ್ ನೀಡಲಾಗುತ್ತದೆ. ಆದ್ದರಿಂದ ಕುಮಾರ್ ಬಂಗಾರಪ್ಪ ಅವರಿಗೆ ಟಿಕೆಟ್ ನೀಡಿದರೆ, ಮತ ವಿಭಜನೆಯಾಗುವ ಭೀತಿ ಕಾಂಗ್ರೆಸ್ ನಾಯಕರಲ್ಲಿದೆ. ಆದ್ದರಿಂದ ಅಭ್ಯರ್ಥಿ ಆಯ್ಕೆ ಬಗ್ಗೆ ಇನ್ನೂ ಅಂತಿಮ ನಿರ್ಧಾರ ಕೈಗೊಂಡಿಲ್ಲ.

English summary
The Karnataka Congress yet to announce candidates for 14 constituencies. The party has failed to final candidates name for 3 Constituencies because of differences among the party leaders.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X