ಅನಂತ್‌ ಕುಮಾರ್‌ ಹೆಗಡೆಗೆ ಠಕ್ಕರ್‌ ಕೊಡಲು ' ಕೈ' ತೀರ್ಮಾನ- ಇವರೇ ಕಾಂಗ್ರೆಸ್‌ ಅಭ್ಯರ್ಥಿ?

ಬೆಂಗಳೂರು, ಮಾರ್ಚ್‌ 02: ಲೋಕಸಭಾ ಚುನಾವಣೆಗೆ ಎರಡು ತಿಂಗಳು ಮಾತ್ರ ಬಾಕಿ ಉಳಿದಿದೆ. ಇತ್ತ ಮತ್ತೊಮ್ಮೆ ಅಧಿಕಾರಕ್ಕೆರುವ ನಿಟ್ಟಿನಲ್ಲಿ ಬಿಜೆಪಿ ಭರ್ಜರಿ ಮಾಸ್ಟರ್‌ ಪ್ಲಾನ್‌ ನಡೆಸಿದ್ದು, ಅಳೆದು ತೂಗಿ ಬಿಜೆಪಿ ಹೈಕಮಾಂಡ್‌ ಟಿಕೆಟ್‌ ನೀಡಲಿದೆ.

ಹೌದು, ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಟಿಕೆಟ್‌ ಕೊಟ್ಟ ಮಾದರಿಯಲ್ಲಿಯೇ ಲೋಕಸಭಾ ಚುನಾವಣೆಯಲ್ಲೂ ಅದೇ ಮಾದರಿಯನ್ನ ಅನುಸರಿಸಲು ಬಿಜೆಪಿ ಹೈಕಮಾಂಡ್‌ ಪ್ಲಾನ್‌ ಹಾಕಿಕೊಂಡಿದೆ. 2019 ರ ಲೋಕಸಭಾ ಚುನಾವಣೆಯಲ್ಲಿ 28 ಕ್ಷೇತ್ರಗಳ ಪೈಕಿ ಬಿಜೆಪಿ 25 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು.

Congress Masterstroke: Considers Fielding Senior BJP Leader Against BJP: Find Out Who?

ಆದರೆ ಈ ಬಾರೀ ರಾಜ್ಯದಲ್ಲಿ ಬಿಜೆಪಿ ವಿರುದ್ಧ ವಿರೋಧಿ ಅಲೆ ಸೃಷ್ಟಿಯಾಗಿದೆ ಎನ್ನವ ಮಾತುಗಳು ಕೇಳಿ ಬಂದಿವೆ. ಹೀಗಾಗಿ ಬಿಜೆಪಿ ಹೈಕಮಾಂಡ್ ಈಗಾಗಲೇ ಕರ್ನಾಟಕದಲ್ಲಿರುವ ತನ್ನ ಹಾಲಿ ಸಂಸದರಲ್ಲಿ ಕೆಲವರಿಗೆ ಟಿಕೆಟ್ ನೀಡದೇ ಹೊಸ ಮುಖಗಳಿಗೆ ಗಾಳ ಹಾಕುವ ಲೆಕ್ಕಾಚಾರವನ್ನ ಹಾಕಿಕೊಂಡಿದೆ.

ವಿಧಾನಸಭಾ ಚುನಾವಣೆಯ ಟಿಕೆಟ್‌ ನೀಡಿದ ಮಾದರಿಯಲ್ಲೇ ವಯೋಮಿತಿಯ ಆಧಾರದ ಮೇಲೆ ಹಾಗೂ ಮುಂದಿನ ತಲೆಮಾರಿನ ನಾಯಕರನ್ನು ಬೆಳೆಸುವ ಅನಿವಾರ್ಯತೆ ದೃಷ್ಟಿಯಿಂದ ಕೆಲವು ಹಾಲಿ ಸಂಸದರಿಗೆ ಟಿಕೆಟ್ ನಿರಾಕರಿಸಲಿದೆ ಎನ್ನಲಾಗಿದೆ.

ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಹಾಗೂ ಹಿಂದೂ ಫೈರ್ ಬ್ರಾಂಡ್ ಅನಂತ್ ಕುಮಾರ್ ಹೆಗಡೆ ಅವರಿಗೆ ಈ ಬಾರಿ ಟಿಕೆಟ್‌ ಕೈ ತಪ್ಪಲಿದೆ ಎನ್ನುವ ಮಾತುಗಳು ಕೇಳಿ ಬಂದಿವೆ. ಒಂದು ವೇಳೆ ಕೊನೆ ಕಣದಲ್ಲಿ ಅನಂತ್‌ ಕುಮಾರ್‌ ಹೆಗಡೆ ಅವರಿಗೆ ಹೈಕಮಾಂಡ್‌ ಮಣೆ ಹಾಕುವ ಸಾಧ್ಯತೆ ಇದೆ ಎಂದು ಕೆಲವು ಮೂಲಗಳು ತಿಳಿಸಿವೆ.

ಇನ್ನೂ ಹಿಂದೂ ಫೈರ್ ಬ್ರಾಂಡ್ ಅನಂತ್ ಕುಮಾರ್ ಹೆಗಡೆಗೆ ಠಕ್ಕರ್‌ ಕೊಟ್ಟು ಹಿಂದುತ್ವದ ಭದ್ರಕೋಟೆಯಾದ ಉತ್ತರ ಕನ್ನಡ ಲೋಕಸಭಾ ಕ್ಷೇತ್ರವನ್ನ ವಶಪಡಿಸಿಕೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಪ್ಲಾನ್‌ ನಡೆಸಿದ್ದು, ಬಿಜೆಪಿ ಶಾಸಕ ಯಲ್ಲಾಪುರ ಶಾಸಕ ಶಿವರಾಮ್‌ ಹೆಬ್ಬಾರ್‌ ಅವರನ್ನ ಕಣಕ್ಕಿಳಿಸಲು ಕಾಂಗ್ರೆಸ್‌ ಪ್ಲಾನ್‌ ನಡೆಸಿದೆ. ಶಾಸಕ ಹೆಬ್ಬಾರ್ ಈಗಾಗಲೇ ಬಿಜೆಪಿಯಿಂದ ಮಾನಸಿಕವಾಗಿ ದೂರ ಆಗಿದ್ದರು. ಈಗ ರಾಜ್ಯಸಭಾ ಚುನಾವಣೆಯಲ್ಲಿ‌ ಮತ ಚಲಾಯಿಸದೇ ದೂರ ಉಳಿದಿದ್ದು, ಕಾಂಗ್ರೆಸ್‌ ನಾಯಕರ ಜೊತೆಗೆ ನಿರಂತರ ಸಂಪರ್ಕದಲ್ಲಿದ್ದಾರೆ.

ಶಿವರಾಮ್‌ ಹೆಬ್ಬಾರ್‌ ಈಗಾಗಲೇ ಬಿಜೆಪಿಯಿಂದ ಒಂದು ಕಾಲು ಹೊರಗಿಟ್ಟು, ಪಕ್ಷದ ಚಟುವಟಿಕೆಗಳಿಂದ ಅಂತರ ಕಾಯ್ದುಕೊಂಡಿದ್ದರು. ಬಹಿರಂಗವಾಗಿಯೇ ಕಾಂಗ್ರೆಸ್‌ ನಾಯಕರ ಜೊತೆ ನಿರಂತರವಾಗಿ ಕಾಣಿಸಿಕೊಂಡಿದ್ದರು. ಪಕ್ಷದ ಶಾಸಕಾಂಗ ಸಭೆಗೂ ಗೈರಾಗಿ ಕಾಂಗ್ರೆಸ್‌ ನಾಯಕರ ಜೊತೆ ಕಾಣಿಸಿಕೊಂಡಿದ್ದರು. ಶಿವರಾಮ್‌ ಹೆಬ್ಬಾರ್‌ ಅವರು ಸದನದಲ್ಲಿಯೇ ಕಾಂಗ್ರೆಸ್‌ ಅನ್ನು ವಹಿಸಿಕೊಂಡು ಮಾತಾಡಿದ್ದು ಎಲ್ಲರ ಗಮನ ಸೆಳೆದಿತ್ತು. ಈಗ ಚುನಾವಣೆ ಹತ್ತಿರವಾಗುತ್ತಿದ್ದಂತೆ ಕಾಂಗ್ರೆಸ್‌ ಸೇರಲು ಸಿದ್ದತೆ ನಡೆಸಿದ್ದಾರೆ ಎನ್ನಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+