ಕಾಂಗ್ರೆಸ್ ಸರ್ಕಾರಕ್ಕೆ 2 ವರ್ಷ, ದಾವಣಗೆರೆಯಲ್ಲಿ ಸಮಾವೇಶ

ದಾವಣಗೆರೆ, ಮೇ 7 : ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದು ಎರಡು ವರ್ಷಗಳು ಪೂರ್ಣಗೊಳ್ಳುತ್ತಿದ್ದು ದಾವಣಗೆರೆಯಲ್ಲಿ ಬೃಹತ್ ಸಮಾವೇಶ ಆಯೋಜಿಸಲಾಗಿದೆ. ಮೇ 16ರಂದು ನಡೆಯುವ ಸಮಾವೇಶದಲ್ಲಿ ಪಕ್ಷದ ನಾಯಕರು, ಶಾಸಕರು, ಸಂಸದರು ಪಾಲ್ಗೊಳ್ಳಲಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಸಭೆ ನಡೆಸಿರುವ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರು, ದಾವಣಗೆರೆಯಲ್ಲಿ ಸಮಾವೇಶ ನಡೆಸುವ ಕುರಿತು ಅಂತಿಮ ಸುತ್ತಿನ ಚರ್ಚೆ ನಡೆಸಿದ್ದಾರೆ. ಮೇ 13ರಂದು ಸರ್ಕಾರಕ್ಕೆ ಎರಡು ವರ್ಷಗಳು ಪೂರ್ಣಗೊಳ್ಳಲಿದ್ದು, ಮೇ 16ರ ಶನಿವಾರ ಸಮಾವೇಶ ನಡೆಸಲು ಸಿದ್ದರಾಮಯ್ಯ ಅವರು ಒಪ್ಪಿಗೆ ನೀಡಿದ್ದಾರೆ. [ಗ್ರಾಮ ಪಂಚಾಯಿತಿ ಚುನಾವಣೆ ಘೋಷಣೆ]

Siddaramaiah

ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ಸೇರಿದಂತೆ ಹಲವು ನಾಯಕರು ದಾವಣಗೆರೆಯಲ್ಲಿ ನಡೆಯಲಿರುವ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಗ್ರಾಮ ಪಂಚಾಯಿತಿ ಚುನಾವಣೆ ನೀತಿ ಸಂಹಿತೆ ಜಾರಿಗೆ ಬರುವ ಹಿನ್ನಲೆಯಲ್ಲಿ ಯಾವುದೇ ಆಶ್ವಾಸನೆಗಳನ್ನು ನೀಡದೆ ಸಮಾವೇಶ ನಡೆಸಲು ಉದ್ದೇಶಿಸಲಾಗಿದೆ. [ಅಶೋಕ್ ಬಿಚ್ಚಿಟ್ಟ ಸಿದ್ದರಾಮಯ್ಯ ಸರ್ಕಾರದ ಸಾಧನೆ]

ಅಕ್ಕಿಭಾಗ್ಯ ನೀಡಲಾಗಿದೆ : ಸರ್ಕಾರಕ್ಕೆ ಎರಡು ವರ್ಷಗಳು ಪೂರ್ಣಗೊಳ್ಳವ ಹಿನ್ನೆಲೆಯಲ್ಲಿ ರಾಜ್ಯದ ಜನರಿಗೆ ಉಚಿತ ಅಕ್ಕಿ ಭಾಗ್ಯವನ್ನು ಸರ್ಕಾರ ನೀಡಿದೆ. ಅನ್ನಭಾಗ್ಯ ಯೋಜನೆಯಡಿ 1 ರೂ.ಗೆ ನೀಡುತ್ತಿದ್ದ ಅಕ್ಕಿಯನ್ನು ಉಚಿತವಾಗಿ ವಿತರಣೆ ಮಾಡುವ ಯೋಜನೆಗೆ ಸರ್ಕಾರ ಮೇ 1ರಂದು ಚಾಲನೆ ನೀಡಿದೆ.

ಸಂಪುಟ ವಿಸ್ತರಣೆ ಆಗುತ್ತದೆಯೇ? : ಸಿದ್ದರಾಮಯ್ಯ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವುದು ಮತ್ತು ಸಂಪುಟ ವಿಸ್ತರಣೆ ಮಾಡುವ ಕುರಿತ ಚರ್ಚೆ ನಡೆಯುತ್ತಲೇ ಇದೆ. ಸರ್ಕಾರಕ್ಕೆ ಎರಡು ವರ್ಷಗಳು ಪೂರ್ಣಗೊಳ್ಳುವ ಹಿನ್ನಲೆಯಲ್ಲಿ ಸಿದ್ದರಾಮಯ್ಯ ಅವರು ಸಂಪುಟ ವಿಸ್ತರಣೆ ಬಗ್ಗೆ ನಿರ್ಧಾರ ಕೈಗೊಳ್ಳಲಿದ್ದಾರೆಯೇ? ಎಂದು ಕಾದು ನೋಡಬೇಕು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+