ಈಗಿರುವ ಬಿಜೆಪಿ ಸಂಸದರು ಯಾರು ಗಂಡಸರಲ್ಲ: ಬಾಲಕೃಷ್ಣ
ರಾಮನಗರ, ಫೆಬ್ರವರಿ 05: ರಾಜ್ಯಕ್ಕೆ ನಿರಂತರವಾಗಿ ಕೇಂದ್ರ ಸರ್ಕಾರದಿಂದ ಅನುದಾನ ವಿಚಾರದಲ್ಲಿ ತಾರತಮ್ಯವನ್ನ ಖಂಡಿಸಿ ದೆಹಲಿಯಲ್ಲಿ ಹೋರಾಟಕ್ಕೆ ಕಾಂಗ್ರೆಸ್ ಮುಂದಾಗಿದೆ. ಈ ನಡುವೆ ಬಿಜೆಪಿ ಸಂಸದರ ವಿರುದ್ಧ ಮಾಗಡಿ ಶಾಸಕ ಹೆಚ್.ಸಿ.ಬಾಲಕೃಷ್ಣ ವಾಗ್ದಾಳಿ ನಡೆಸಿದ್ದಾರೆ.
ಹೌದು, ಈ ಕುರಿತು ಸೋಮವಾರ ಮಾಧ್ಯಮಗಳ ಜೊತೆಗೆ ಮಾತನಾಡಿದ ಮಾಗಡಿ ಶಾಸಕ ಹೆಚ್.ಸಿ.ಬಾಲಕೃಷ್ಣ ಅವರು, ಬಿಜೆಪಿಯ ಸಂಸದರು ನರೇಂದ್ರ ಮೋದಿ ಮುಂದೆ ಕೂರೋದು ಇಲ್ಲ, ಏಳೋದು ಇಲ್ಲ. ಕೇವಲ ಮೋದಿ ಹೆಸರಲ್ಲಿ ಗೆಲ್ತಾರೆ, ಆದರೆ ವೈಯಕ್ತಿಕ ವರ್ಚಸ್ಸು ಇಲ್ಲ ಎಂದು ಕಿಡಿಕಾರಿದ್ದಾರೆ.

ಬಿಜೆಪಿ ಎಂಪಿಗಳು, ಮಂತ್ರಿಗಳು ರಾಜ್ಯದ ಧ್ವನಿ ಎತ್ತಿಲ್ಲ. ಹಾಗಾಗಿ ನಾವು ಹೋರಾಟ ಮಾಡುತ್ತಿದ್ದೇವೆ. ಪಾಪ ನಮ್ಮ ಹೋರಾಟ ನೋಡಿ ಬಿಜೆಪಿಯ ಗಂಡಸರು ಹೋರಾಟ ಮಾಡ್ತಾರಾ ನೋಡೊಣ. ಇದರ ಅರ್ಥ ಬಿಜೆಪಿಯಲ್ಲಿ ಯಾರು ಗಂಡಸರು ಇಲ್ಲ ಅಂತ ಎಂದು ಬಿಜೆಪಿ ಸಂಸದರ ವಿರುದ್ದ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಹೆಚ್ಚು ಟ್ಯಾಕ್ಸ್ ಕಟ್ಟುವ ಎರಡನೇ ರಾಜ್ಯ ನಮ್ಮದು. ನಮಗೆ ಕೊಡಬೇಕಾದ ಅನಯದಾನವನ್ನ ನಮಗೆ ಕೊಡ್ತಿಲ್ಲ.ಬಿಜೆಪಿಯ ಸಂಸದರು ನರೇಂದ್ರ ಮೋದಿ ಮುಂದೆ ಕೂರೋದು ಇಲ್ಲ, ಏಳೋದು ಇಲ್ಲ, ಕೇವಲ ಮೋದಿ ಹೆಸರಲ್ಲಿ ಗೆಲ್ತಾರೆ, ಆದರೆ ವೈಯಕ್ತಿಕ ವರ್ಚಸ್ಸು ಇಲ್ಲ.
ಪಕ್ಕದ ತಮಿಳುನಾಡು ತನ್ನ ಹಕ್ಕಿಗಾಗಿ ಮಾಡುವ ಹೋರಾಟವನ್ನ ನೋಡಿ ಕಲಿಯಲಿ. ಬಿಜೆಪಿ ಸಂಸದರೆಲ್ಲಾ ಶೋ ಪೀಸ್ ಗಳು, ಕೇವಲ ದೆಹಲಿಗೆ ಹೋಗೋದು ಟಿಎ-ಡಿಎ ತಕೊಂಡು ಬರೋದು ಅಷ್ಟೇ ಇವರ ಕೆಲಸ ಎಂದು ಬಿಜೆಪಿ ಸಂಸದರ ವಿರುದ್ಧ ಮಾಗಡಿ ಶಾಸಕ ಹೆಚ್.ಸಿ.ಬಾಲಕೃಷ್ಣ ಕುಡುಕಿದರು.
ಬಾಲಕೃಷ್ಣ ಅವರ ಅಪ್ಪನ ಮನೆಯಿಂದ ಅನ್ನಭಾಗ್ಯ ತಂದು ಕೊಡಲ್ಲ ಎಂಬ ಹೆಚ್‌ಡಿ ಕುಮಾರಸ್ವಾಮಿ ಹೇಳಿಕೆ ವಿಚಾರವಾಗಿ ಮಾತನಾಡಿ, ಯಾವ ಭಾಗ್ಯವನ್ನು ಯಾರಪ್ಪನ ಮನೆಯಿಂದನೂ ತಂದು ಕೊಡಲ್ಲ.ಎಲ್ಲಾ ಕೊಡುವುದು ಸರ್ಕಾರದಿಂದಲೇ. ಸರ್ಕಾರ ಒಂದೊಂದು ರೀತಿ ಕಾರ್ಯಕ್ರಮ ಕೊಡುತ್ತದೆ, ಅದಕ್ಕೆ ಅವರಪ್ಪನ ಮನೆಯಿಂದ ಇವರಪ್ಪನ ಮನೆಯಿಂದ ಅಂತ ಮಾತನಾಡಬಾರದು.ಈ ಮಾತು ಅವರ ಘನತೆಗೆ ತಕ್ಕದಲ್ಲ.
ಕುಮಾರಸ್ವಾಮಿ ಅವರು ಈಗಾಗಲೇ ಸ್ಥೀಮಿತ ಕಳೆದುಕೊಂಡಿದ್ದಾರೆ.
ಡಿ.ಕೆ. ಸುರೇಶ್ ಎದುರಿಸುವ ಅಭ್ಯರ್ಥಿ ಇಲ್ಲ. ಲೋಕ ಸಭಾ ಸದಸ್ಯರು ಜನ ಸಾಮಾನ್ಯರ ಜೊತೆ ಬೆರೆತು ಕೆಲಸ ಮಾಡಬಹುದು ಅಂತ ತೋರಿಸಿಕೊಟ್ಟಿರೋದು ಸುರೇಶ್ ಮಾತ್ರ. ಇದರ ಬಗ್ಗೆ ಚರ್ಚೆ ಮಾಡುವುದಾದರೆ ಯಾರು ಬೇಕಾದ್ರೂ ಚರ್ಚೆ ಮಾಡಲಿ. ಡಿ.ಕೆ. ಸುರೇಶ್ ಎದುರು ಸ್ಪರ್ಧೆ ಮಾಡೋಕೆ ಇಲ್ಲಿ ಮೈತ್ರಿ ಅಭ್ಯರ್ಥಿನೇ ಇಲ್ಲ.ಯೋಗೇಶ್ವರ್, ಕುಮಾರಸ್ವಾಮಿ ಮೊದಲು ಬಂದು ಚುನಾವಣೆಯಲ್ಲಿ ಸ್ಪರ್ಧೆ ಮಾಡಲಿ, ನಂತರ ಅವರ ಬಗ್ಗೆ ಮಾತನಾಡೋಣ ಎಂದು ಹೇಳಿದರು.












Click it and Unblock the Notifications