ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮತದಾರರ ಪಟ್ಟಿಗೆ ಕಾಂಗ್ರೆಸ್ ಶಾಸಕರಿಂದ ಅಕ್ರಮ ಹೆಸರು ಸೇರ್ಪಡೆ: ಬಿಜೆಪಿ

|
Google Oneindia Kannada News

ಮಂಗಳೂರು, ಜನವರಿ 23: ನಗರದ ಹಾಸ್ಟೆಲ್ ಗಳಲ್ಲಿ ವಾಸ್ತವ್ಯ ಹೊಂದಿರುವ ಕೇರಳ ಮೂಲದ ವಿದ್ಯಾರ್ಥಿಗಳ ಹೆಸರನ್ನು ಕಾಂಗ್ರೆಸ್ ಕಾರ್ಯಕರ್ತರು ಸ್ಥಳೀಯ ಮತದಾರರ ಪಟ್ಟಿಗೆ ಅಕ್ರಮವಾಗಿ ಸೇರ್ಪಡೆಗೊಳಿಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ನಗರದ ಬಿಜೆಪಿ ಮುಖಂಡರು ಮಹಾನಗರ ಪಾಲಿಕೆಯ ಚುನಾವಣಾ ಶಾಖೆಗೆ ಮುತ್ತಿಗೆ ಹಾಕಿದ ಘಟನೆ ನಡೆದಿದೆ.

ಮುಂದಿನ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳ ಚಟುವಟಿಕೆ ಬಿರುಸಿನಿಂದ ಸಾಗಿದೆ. ಈ ನಡುವೆ ನಕಲಿ ಮತದಾನಕ್ಕಾಗಿ ಕೇರಳ ಮೂಲದ ಹಾಸ್ಟೆಲ್ ವಿದ್ಯಾರ್ಥಿಗಳನ್ನು ಮತದಾರರ ಪಟ್ಟಿಯಲ್ಲಿ ಅಕ್ರಮವಾಗಿ ಸೇರಿಸಲು ಶಾಸಕ ಜೆ. ಆರ್. ಲೋಬೋ ಮುಂದಾಗಿದ್ದಾರೆ ಎಂದು ಬಿಜೆಪಿ ಮುಖಂಡರು ಆರೋಪಿಸಿದ್ದಾರೆ.

ವೋಟರ್ ಐಡಿ ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿವೋಟರ್ ಐಡಿ ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ

ಸೋಮವಾರ ಮಂಗಳೂರು ಮಹಾನಗರ ಪಾಲಿಕೆಯ ಚುನಾವಣಾ ಕಚೇರಿಗೆ ಬಿಜೆಪಿ ಮುಖಂಡ ಬದರೀನಾಥ ಕಾಮತ್ ನೇತೃತ್ವದಲ್ಲಿ ಮುತ್ತಿಗೆ ಹಾಕಿದ ಬಿಜೆಪಿ ಮುಖಂಡರು ಸಹಾಯಕ ಚುನಾವಣಾಧಿಕಾರಿಯನ್ನು ತೀವ್ರ ತರಾಟೆಗೆ ತೆಗೆದುಕೊಂಡರು. ಈ ಬಗ್ಗೆ ಕೂಲಂಕಷ ತನಿಖೆ ನಡೆಸಬೇಕು. ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

Congress MLA JR Lobo involved in creating fake voter ID : BJP

ಕಳೆದ 15 ದಿನಗಳಲ್ಲಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಸುಮಾರು ಸುಮಾರು 7 ಸಾವಿರದಷ್ಟು ಕೇರಳ ವಿದ್ಯಾರ್ಥಿಗಳ ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಆದರೆ ಅರ್ಜಿಯನ್ನು ಸ್ವೀಕರಿಸುವ ವೇಳೆ ಕೇರಳ ಮತದಾರರ ಪಟ್ಟಿಯಿಂದ ಹೆಸರನ್ನು ತೆಗೆದು ಹಾಕಿದ ಬಗ್ಗೆ ಸ್ವೀಕೃತಿ ಪತ್ರವನ್ನು ಪಡೆಯುತ್ತಿಲ್ಲ ಎಂದು ಬಿಜೆಪಿ ಮುಖಂಡರು ಆರೋಪಿಸಿದರು.

ಎಸ್‌ಎಂಎಸ್‌ ಮಾಡಿ ಮತದಾರರ ಪಟ್ಟಿಯಲ್ಲಿ ಹೆಸರು ಹುಡುಕಿಎಸ್‌ಎಂಎಸ್‌ ಮಾಡಿ ಮತದಾರರ ಪಟ್ಟಿಯಲ್ಲಿ ಹೆಸರು ಹುಡುಕಿ

ಕಳೆದ 15 ದಿನಗಳಿಂದ ಮತದಾರರ ಪಟ್ಟಿಗೆ ನೋಂದಣಿ ಮಾಡಿಕೊಂಡಿರುವ ಅರ್ಜಿಗಳನ್ನು ಪುನರ್ ಪರಿಶೀಲನೆ ಮಾಡಬೇಕು ಎಂದು ಬಿಜೆಪಿ ಮುಖಂಡರು ಆಯುಕ್ತರನ್ನು ಒತ್ತಾಯಿಸಿದರು.

Congress MLA JR Lobo involved in creating fake voter ID : BJP

ಇನ್ನು ಚುನಾವಣಾ ಕಚೇರಿಗೆ ಸೋಮವಾರ ಮುತ್ತಿಗೆ ಹಾಕಿದ ಸಂದರ್ಭದಲ್ಲಿ ಚುನಾವಣಾಧಿಕಾರಿಯ ಎದುರು ಒಂದೇ ಹಾಸ್ಟೇಲ್‍ಗೆ ಸೇರಿದ ವಿದ್ಯಾರ್ಥಿಗಳ ನೂರಾರು ಅರ್ಜಿಗಳು ಕಂಡು ಬಂದಿತ್ತು. ಈ ಬಗ್ಗೆ ಪ್ರಶ್ನಿಸಿದಾಗ ಸಹಾಯಕ ಚುನಾವಣಾಧಿಕಾರಿ ಮೊಹಮ್ಮದ್ ಸೂಕ್ತ ಉತ್ತರ ನೀಡಲಿಲ್ಲ. ಇದರಿಂದಾಗಿ ಕೆಲವು ಹೊತ್ತು ಕಚೇರಿಯಲ್ಲಿ ಗೊಂದಲದ ಸ್ಥಿತಿ ನಿರ್ಮಾಣವಾಗಿತ್ತು.

English summary
MLA of Mangalore South constituency is directly involved in enrolling the name of outer state students, who reside in hostels by creating fake IDs alleged BJP leaders. BJP leaders demanded to take strict action against those who are involved in illegal work here in Mangaluru on January 22.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X