ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್​ ಬಿಗ್​ ಬಾಸ್​ಗೆ ಹೋಗಿದ್ದು ಸರಿಯೋ ? ತಪ್ಪೋ?

ಬೆಂಗಳೂರು, ಅಕ್ಟೋಬರ್‌ 09: ಕರ್ನಾಟಕದಲ್ಲಿ ಜನಪ್ರತಿಯೊಬ್ಬರು ಇದೇ ಮೊದಲ ಬಾರಿಗೆ ರಿಯಾಲಿಟಿ ಶೋ ಬಿಗ್‌ ಬಾಸ್‌ 10 ಸೀಸನ್‌ ಕಾಣಿಸಿಕೊಂಡಿದ್ದಾರೆ. ಆದರೆ, ರಾಜ್ಯದಲ್ಲಿ ಮಳೆ ಅಭಾವದಿಂದಾಗಿ ರಾಜ್ಯದ ರೈತ ಕಂಗಾಲಾಗಿದ್ದಾರೆ. ಇತ್ತ ಕ್ಷೇತ್ರದ ಗತಿ ಏನು ಎಂದು ಚರ್ಚೆಗಳು ಶುರುವಾಗಿವೆ. ಹಾಗಾದ್ರೆ ಕಾಂಗ್ರೆಸ್‌ ಚಿಕ್ಕಬಳ್ಳಾಪುರ ಕ್ಷೇತ್ರದಶಾಸಕ ಪ್ರದೀಪ್ ಈಶ್ವರ್​ ಬಿಗ್​ ಬಾಸ್​ಗೆ ಹೋಗಿರುವುದು ಸರಿಯೇ ಅಥವಾ ತಪ್ಪೋ ಎಂಬ ಪ್ರಶ್ನೆ ಉದ್ಭವಿಸಿದೆ.

ಹೌದು, ಬಿಗ್‌ ಬಾಸ್‌ ಸೀಸನ್‌ 10 ಭಾನುವಾರ ಆರಂಭವಾಗಿದ್ದು, ಸದಾ ಟ್ರೋಲ್‌ ಹಾಗೂ ಸುದ್ದಿಯಲ್ಲಿರುವ ಶಾಸಕ ಪ್ರದೀಪ್‌ ಈಶ್ವರ್‌, ಈಗ ಕನ್ನಡ ಬಿಗ್​ ಬಾಸ್ ಸೀಸನ್ 10ರಲ್ಲಿ ಬಂಧಿಯಾಗಿದ್ದಾರೆ. 2023 ರ ವಿಧಾನಸಭಾ ಚುನಾವಣೆಯಲ್ಲಿ ಡಾ ಸುಧಾಕರ್ ಅವರನ್ನು ಸೋಲಿಸಿದ್ರು, ನಂತರ ಪ್ರದೀಶ್ ಈಶ್ವರಪ್ಪ ಚಿಕ್ಕಬಳ್ಳಾಪುರದಲ್ಲಿ ಮನೆ-ಮನೆ ತೆರಳಿ ಜನರ ಕಷ್ಟ, ಸಮಸ್ಯೆಗಳನ್ನು ಆಲಿಸಿದ್ದರು. ಆದ್ರೆ, ಇದೀಗ ಅವರು ಬಿಗ್​ ಬಾಸ್ ರಿಯಾಲಿಟಿ ಶೋಗೆ ಹೋಗಿದ್ದಾರೆ. ಜನಪ್ರತಿನಿಧಿಯೊಬ್ಬರು ರಿಯಾಲಿಟಿ ಶೋಗೆ ಹೋಗಿರುವುದು ಕರ್ನಾಟಕದಲ್ಲಿ ಇವರೇ ಮೊದಲಿಗರು.

Congress MLA Pradeep Eshwar Bigg Boss Kannada House Visit: Is It Appropriate for a politician?

ಬಿಗ್‌ ಬಾಸ್‌ ರಿಯಾಲಿಟಿ ಶೋ ಅಂದ್ರೆ ತಿಂಗಳಾನುಗಟ್ಟಲೇ ಬಿಗ್‌ ಬಾಸ್‌ ಮನೆಯಲ್ಲಿಯೇ ಇರಬೇಕಾಗುತ್ತದೆ. ಇತ್ತ ಬರದ ಸಂಕಷ್ಟಗಳನ್ನ ಎದುರಿಸುತ್ತಿರುವ ಚಿಕ್ಕಬಳ್ಳಾಪುರ ಕ್ಷೇತ್ರದ ಜನರ ಗತಿ ಏನು? ಕ್ಷೇತ್ರದ ಸಮಸ್ಯೆಯನ್ನ ಆಲಿಸುವವರು ಯಾರು ಎನ್ನುವ ಹಲವು ಚರ್ಚೆಗಳು ಹುಟ್ಟಿಕೊಂಡಿವೆ.

ಬಿಗ್‌ ಬಾಸ್‌ ಗೆ ಪ್ರದೀಪ್‌ ಈಶ್ವರ್‌; ಸುಧಾಕರ್‌ ಹೇಳಿದ್ದೇನು?

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್‌ ಈಶ್ವರ್‌ ಬಿಗ್‌ ಬಾಸ್‌ ಮನೆಗೆ ಎಂಟ್ರಿಯಾಗಿದ್ದು, ಒಬ್ಬ ರಾಜಕಾರಣಿ ಈ ರೀತಿಯ ಶೋಗೆ ಹೋಗಿದ್ದು ಇದೆ ಮೊದಲು, ಬಿಗ್ ಬಾಸ್‌ಗೆ ಹೋಗುವ ಮೂಲಕ ನಗೆಪಾಟೀಲಿಗೆ ಈಡಾಗಿದ್ದಾರೆ ಎಂದು ಮಾಜಿ ಸಚಿವ ಕೆ ಸುಧಾಕರ್‌ ಲೇವಡಿ ಮಾಡಿದ್ದಾರೆ.

ಇಡೀ ರಾಜ್ಯದಲ್ಲಿ ಎಲ್ಲೂ ಇಲ್ಲ ಒಬ್ಬ ಎಂಎಲ್‌ಎ ಬಿಗ್ ಬಾಸ್ ಗೆ ಹೋಗಿ ಕುಣಿದಾಡಿರುವುದು ಇದೇ ಮೊದಲು. ಇದೊಂದು ನಾಚಿಕೆಗೇಡಿನ ಸಂಗತಿ. ಬಿಗ್ ಬಾಸ್‌ನಲ್ಲಿ ಭಾಗಿಯಾಗುವ ಮೂಲಕ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಮಾನ ಮರ್ಯಾದೆ ಕಳೆದಿದ್ದಾರೆ. ಚಿಕ್ಕಬಳ್ಳಾಪುರ ಕ್ಷೇತ್ರದ ಹೆಸರನ್ನ ಹಾಳು ಮಾಡಿದ್ದಾರೆ. ಇಂತಹ ವ್ಯಕ್ತಿಯನ್ನು ಆಯ್ಕೆ‌ ಮಾಡಿದ ಜನರಿಗೆ ಆಗಲೇ ಮನವರಿಕೆಯಾಗಿದೆ.‌ ನಾವು ತಪ್ಪು ಮಾಡಿದ್ದೇವೆ ಎಂದು ಅರಿವಾಗಿದೆ. ಮುಂದಿನ ದಿನಗಳಲ್ಲಿ ಅವರಿಗೆ ತಕ್ಕಪಾಠ ಕಲಿಸಲಿದ್ದಾರೆ ಎಂದರು ಹೇಳಿದರು.

ಬಿಗ್‌ ಬಾಸ್‌ ಗೆ ಪ್ರದೀಪ್‌ ಈಶ್ವರ್‌;ಬಿಜೆಪಿ ಹೇಳಿದ್ದೇನು?

ರಾಜ್ಯದ ಅಭಿವೃದ್ಧಿ ಸಂಪೂರ್ಣ ನಿಂತು ವಿಧಾನಸೌಧವೇ ಮನರಂಜನೆಗಷ್ಟೇ ಮೀಸಲಾದ ಬಿಗ್‌‌ ಬಾಸ್‌ ಮನೆಯಂತಾಗಿದೆ. ಅದಕ್ಕೆ ಸಂಪೂರ್ಣ ನ್ಯಾಯ ಒದಗಿಸುವ ಸಲುವಾಗಿ ಈಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅವರ ಸಂಪುಟ ಸಹೋದ್ಯೋಗಿಗಳನ್ನು ಬಿಗ್‌‌ ಬಾಸ್‌ ಮನೆಗೇ ಕಳಿಸಿಕೊಟ್ಟು ಕೃತಾರ್ಥರಾಗಿದ್ದಾರೆ ಎಂದು ರಾಜ್ಯ ಬಿಜೆಪಿ ಹೇಳಿದೆ.

ಚಿಕ್ಕಬಳ್ಳಾಪುರಕ್ಕೆ ಕೇಂದ್ರ ತಂಡ

ಚಿಕ್ಕಬಳ್ಳಾಪುರ ಜಿಲ್ಲೆಯು ಸಂಪೂರ್ಣ ಬರ ಪೀಡಿತ ಜಿಲ್ಲೆಯೆಂದು ಘೋಷಿಸಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಬರಪೀಡಿತ ತಾಲ್ಲೂಕುಗಳ ಪರಿಸ್ಥಿತಿಯನ್ನು ಪರಿಶೀಲಿಸಲು ಕೇಂದ್ರ ಬರ ಅಧ್ಯಯನ ತಂಡ ಶುಕ್ರವಾರ ಜಿಲ್ಲೆಗೆ ಆಗಮಿಸಿದೆ.

ಕೇಂದ್ರೀಯ ಜಲ ಆಯುಕ್ತಾಲಯದ ನಿರ್ದೇಶಕರಾದ ವಿ.ಅಶೋಕ್ ಕುಮಾರ್, ಎಂ.ಎನ್.ಸಿ.ಎಫ್.ಸಿ ಕೇಂದ್ರ ಹಾಗೂ ಕೃಷಿ ಮತ್ತು ರೈತ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಕಿರಣ್ ಚೌದರಿ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧೀನ ಕಾರ್ಯದರ್ಶಿ ಸಂಗೀತ್ ಕುಮಾರ್ ಹಾಗೂ ರಾಜ್ಯದ ಕಂದಾಯ ಇಲಾಖೆಯ ವಿಪತ್ತು ನಿರ್ವಾಹಣೆಯ ಹಿರಿಯ ಸಮಾಲೋಚಕರಾದ ಡಾ|| ಜಿ.ಎಸ್.ಶ್ರೀನಿವಾಸರೆಡ್ಡಿ ರವರ ನೇತೃತ್ವದಲ್ಲಿ ಕೇಂದ್ರ ಬರ ಅಧ್ಯಯನ ತಂಡವು ಮೊದಲಿಗೆ ಜಿಲ್ಲಾಡಳಿತ ಭವನಕ್ಕೆ ಭೇಟಿ ನೀಡಿ ಜಿಲ್ಲೆಯ ಬರ ಪರಿಸ್ಥಿತಿ ಛಾಯಾಚಿತ್ರಗಳನ್ನು ವೀಕ್ಷಿಸಿ ಬಳಿಕ ಜಿಲ್ಲಾಡಳಿತದಿಂದ ಮಾಹಿತಿ ಸಂಗ್ರಹಿಸಿ ಬರ ಪರಿಸ್ಥಿತಿಯನ್ನು ಅವಲೋಕಿಸಿತು.

2023-24 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ 06 ತಾಲ್ಲೂಕುಗಳಿಗೆ ಶೇ.50% ಹೆಚ್ಚು ಬೆಳೆ ನಷ್ಟವಾಗಿದ್ದು, ಈ ಹಿನ್ನೆಲೆಯಲ್ಲಿ ಮುಂದಿನ 06 ತಿಂಗಳ ಅವಧಿಗೆ ಜಿಲ್ಲೆಯ 06 ತಾಲ್ಲೂಕುಗಳನ್ನು ತೀವ್ರ ಬರಪೀಡಿತ ತಾಲ್ಲೂಕುಗಳೆಂದು ಸರ್ಕಾರ ಘೋಷಿಸಿದೆ.

ಇನ್ನೂ ಮಳೆ ಇಲ್ಲದೇ ರೈತರು ಸಂಕಷ್ಟ ಸಿಲುಕಿದ್ದು, ಮತ್ತೊಂದೆಡೆ ಬರ ವೀಕ್ಷಣೆಗೆಂದು ಕೇಂದ್ರ ತಂಡ ಪರಿಶೀಲನೆಗೆಂದು ರಾಜ್ಯಕ್ಕೆ ಆಗಮಿಸಿದೆ. ಇವೆಲ್ಲವುಗಳ ಮಧ್ಯೆ ಪ್ರದೀಪ್ ಈಶ್ವರ್​ ಬಿಗ್​ ಬಾಸ್​ ರಿಯಾಲಿಟಿ ಶೋಗೆ ಹೋಗಿರುವುದು ಎಷ್ಟು ಸರಿಯೇ? ತಪ್ಪೋ ಎನ್ನುವ ಪ್ರಶ್ನೆ ಹುಟ್ಟಿಕೊಂಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+