ಸುರಪುರದ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ನಿಧನ
ಬೆಂಗಳೂರು, ಫೆಬ್ರವರಿ 25; ಯಾದಗಿರಿ ಜಿಲ್ಲೆ ಸುರಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ನಿಧನ ಹೊಂದಿದರು. 2023ರ ವಿಧಾನಸಭೆ ಚುನಾವಣೆಯಲ್ಲಿ ಅವರು 1,13,559 ಮತಗಳನ್ನು ಪಡೆದು ಜಯಗಳಿಸಿದ್ದರು.
67 ವರ್ಷದ ರಾಜಾ ವೆಂಕಟಪ್ಪ ನಾಯಕ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಭಾನುವಾರ ಸಾವನ್ನಪ್ಪಿದ್ದಾರೆ. ಅನಾರೋಗ್ಯದ ಕಾರಣ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ನಿಧನ ಹೊಂದಿದ್ದಾರೆ.

3 ಬಾರಿ ಶಾಸಕಾರಿಗಿದ್ದ ರಾಜಾ ವೆಂಕಟಪ್ಪ ನಾಯಕ 2023ರ ಚುನಾವಣೆಯಲ್ಲಿಯೂ ಗೆಲ್ಲುವ ಮೂಲಕ 4ನೇ ಬಾರಿಗೆ ವಿಧಾನಸಭೆ ಪ್ರವೇಶಿಸಿದ್ದರು. ಕಳೆದ ವರ್ಷ ನಡೆದ ಚುನಾವಣೆಯಲ್ಲಿ ಗೆದ್ದ ಬಳಿಕ ರಾಜಾ ವೆಂಕಟಪ್ಪ ನಾಯಕ ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದರು.
ಆದರೆ ಸಚಿವ ಸ್ಥಾನ ಕೈ ತಪ್ಪಿತ್ತು. ಕೆಲವು ದಿನಗಳ ಹಿಂದೆ ಅವರನ್ನು ರಾಜ್ಯ ಉಗ್ರಾಣ ನಿಮಗದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿತ್ತು. ಅಧ್ಯಕ್ಷರಾಗಿ ಅಧಿಕಾರವನ್ನು ಸಹ ಸ್ವೀಕಾರ ಮಾಡಿದ್ದರು.
2023ರ ಚುನಾವಣೆಯಲ್ಲಿ ಸುರಪುರ ಕ್ಷೇತ್ರದಲ್ಲಿ 1,13,559 ಮತಗಳನ್ನು ಪಡೆದು ರಾಜಾ ವೆಂಕಟಪ್ಪ ನಾಯಕ ಬಿಜೆಪಿಯ ರಾಜೂ ಗೌಡ (88,336 ಮತ) ಸೋಲಿಸಿದ್ದರು.
ಕಾಂಗ್ರೆಸ್ ಪಕ್ಷದಿಂದಲೇ ರಾಜಕೀಯ ಜೀವನ ಆರಂಭಿಸಿದ್ದ ರಾಜಾ ವೆಂಕಟಪ್ಪ ನಾಯಕ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು 10 ದಿನದ ಹಿಂದೆ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ಮೊದಲು ಲಿವರ್ ಸಮಸ್ಯೆಯಿಂದ ಅವರು ಅನಾರೋಗ್ಯಕ್ಕೆ ತುತ್ತಾಗಿದ್ದರು. ಆಸ್ಪತ್ರೆಗೆ ದಾಖಲಾದ ಬಳಿಕ ಹೃದಯದ ತೊಂದರೆ ಸಹ ಕಾಣಿಸಿಕೊಂಡಿತ್ತು. 4 ದಿನದ ಹಿಂದೆ ವಾರ್ಡ್‌ನಿಂದ ಅವರನ್ನು ಐಸಿಯುಗೆ ದಾಖಲು ಮಾಡಲಾಗಿತ್ತು.
ಮಂಗಳವಾರ ನಡೆಯುವ ರಾಜ್ಯಸಭಾ ಚುನಾವಣೆಗೆ ಮತದಾನ ಮಾಡಲು ರಾಜಾ ವೆಂಕಟಪ್ಪ ನಾಯಕ ಅವರ ಪ್ರೊಸಿಡಿಂಗ್ ಮಾಡಲಾಗಿತ್ತು. ಅಂಬ್ಯುಲೆನ್ಸ್‌ನಲ್ಲಿ ಕರೆತಂದು ಪುತ್ರನ ಜೊತೆ ಬಂದು ಮತದಾನ ಮಾಡಲು ಅನುಮತಿ ಪಡೆಯಲಾಗಿತ್ತು.
ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ
ಸುರಪುರದ ಶಾಸಕರು, ಬಹುಕಾಲದ ನನ್ನ ರಾಜಕೀಯ ಒಡನಾಡಿ ರಾಜ ವೆಂಕಟಪ್ಪ ನಾಯಕ ಅವರ ನಿಧನದ ಸುದ್ದಿ ಅತೀವ ನೋವುಂಟುಮಾಡಿದೆ. ಮೂರು ದಿನದ ಹಿಂದೆಯಷ್ಟೇ ಅವರನ್ನು ಭೇಟಿಮಾಡಿ ಆರೋಗ್ಯ ವಿಚಾರಿಸಿದ್ದೆ.
— Siddaramaiah (@siddaramaiah) February 25, 2024
ಜನಾನುರಾಗಿ ವ್ಯಕ್ತಿತ್ವದ ರಾಜಾ ವೆಂಕಟಪ್ಪ ನಾಯಕ ಅವರ ಅಗಲಿಕೆ ವೈಯಕ್ತಿಕವಾಗಿ ಮತ್ತು ರಾಜ್ಯ ರಾಜಕಾರಣಕ್ಕೆ ತುಂಬಿಬಾರದ ನಷ್ಟ. ಮೃತರ ಆತ್ಮಕ್ಕೆ… pic.twitter.com/Fls5GfaRGs
ಎಐಸಿಸಿ ಅಧ್ಯಕ್ಷರಾಗಿರುವ ಮಲ್ಲಿಕಾರ್ಜುನ ಖರ್ಗೆ ಕುಟುಂಬಕ್ಕೆ ರಾಜಾ ವೆಂಕಟಪ್ಪ ನಾಯಕ ಆಪ್ತರು. ಸುರಪುರ ಎಸ್‌ಟಿ ಮೀಸಲು ಕ್ಷೇತ್ರದಿಂದ ಅವರು 1994, 1999, 2013 ಮತ್ತು 2023ರ ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದರು.
ರಾಜಾ ವೆಂಕಟಪ್ಪ ನಾಯಕ ಅವರು ಒಟ್ಟು 7 ಬಾರಿ ಚುನಾವಣೆಗೆ ಸ್ಪರ್ಧೆ ಮಾಡಿದ್ದರು. 2004, 2008 ಮತ್ತು 2018ರ ಚುನಾವಣೆಯಲ್ಲಿ ಸೋಲು ಕಂಡಿದ್ದರು. 2018ರ ಚುನಾವಣೆಯಲ್ಲಿ ಗೆಲುವು ಕಂಡು ಹಾಲಿ ಶಾಸಕರಾಗಿದ್ದ ಬಿಜೆಪಿಯ ರಾಜೂ ಗೌಡರನ್ನು 2023ರ ಚುನಾವಣೆಯಲ್ಲಿ ಸೋಲಿಸಿ ಶಾಸಕರಾಗಿದ್ದರು.
ಮಲ್ಲಿಕಾರ್ಜುನ ಖರ್ಗೆ ಸಂತಾಪ: ಸುರಪುರ ಶಾಸಕ ರಾಜಾ ವೆಂಕಟಪ್ಪ ನಾಯಕ ನಿಧನಕ್ಕೆ ಎಐಸಿಸಿ ಅಧ್ಯಕ್ಷ, ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಸಂತಾಪ ಸೂಚಿಸಿದ್ದಾರೆ.
ಸಂತಾಪ ಸೂಚಕ ನಿರ್ಣಯ ಎಂದು ಅವರು ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಶ್ರೀಯುತ ರಾಜ ವೆಂಕಟಪ್ಪ ನಾಯಕ್ ರವರು ಸುರಪುರದ ಜನಪ್ರಿಯ ಶಾಸಕರಾಗಿ ಚುನಾಯಿತರಾಗಿದ್ದವರು. ಜೊತೆಗೆ ಕರ್ನಾಟಕ ರಾಜ್ಯದ ಉಗ್ರಾಣನಿಗಮದ ಅಧ್ಯಕ್ಷರಾಗಿ ಇತ್ತೀಚೆಗೆ ನೇಮಕವಾಗಿದ್ದವರು' ಎಂದು ಹೇಳಿದ್ದಾರೆ.
'ಅವರು ನನಗೆ ಚಿರಪರಿಚಿತರು. ಸದಾ ಹಸನ್ಮುಖಿಯಾಗಿ ಎಲ್ಲರ ಜೊತೆ ಬೆರೆತು ಕೆಲಸ ಮಾಡುತ್ತಿದ್ದವರು. ಇವರು ಇಂದು ನಿಧನರಾದ ವಿಷಯ ತಿಳಿದು ಮನಸ್ಸಿಗೆ ಅತೀವ ನೋವಾಗಿದೆ. ಶ್ರೀಯುತರ ನಿಧನದಿಂದ ಕಲಬುರಗಿ ವಿಭಾಗದ ಪಕ್ಷದ ಎಲ್ಲ ಕಾರ್ಯಕರ್ತರಿಗೆ ತುಂಬಲಾರದ ನಷ್ಟ ಉಂಟಾಗಿದೆ. ಶ್ರೀಯುತರ ನಿಧನದಿಂದುಂಟಾದ ದು:ಖವನ್ನು ಸಹಿಸುವ ಶಕ್ತಿಯನ್ನು ಅವರ ಕುಟುಂಬ ವರ್ಗದವರಿಗೆ ನೀಡಲೆಂದು ಪ್ರಾರ್ಥಿಸುತ್ತೇನೆ. ಮೃತರ ಆತ್ಮಕ್ಕೆ ಚಿರ ಶಾಂತಿಯನ್ನು ನೀಡಲೆಂದು ವಿನಂತಿಸುತ್ತೇನೆ" ಎಂದು ಸಂತಾಪ ಸೂಚಿಸಿದ್ದಾರೆ.
-
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ












Click it and Unblock the Notifications