ಮತ್ತೆ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕೆ ಬೇಡಿಕೆ ಇಟ್ಟು ರಾಷ್ಟ್ರಪತಿ, ಪ್ರಧಾನಿಗೆ ಪತ್ರ : ಈಡೇರುತ್ತಾ ಬಹುದಿನದ ಕನಸು?
ಬೆಳಗಾವಿ, ನವೆಂಬರ್ 13: ಬಹುದಿನಗಳಿಂದ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಕೂಗು ಕೇಳಿ ಬರುತ್ತಿತ್ತು, ಇದೀಗ ಮತ್ತೆ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಬೇಡಿಕೆ ಕೂಗು ಜೋರಾಗಿದೆ. ಆಡಳಿತಾತ್ಮಕ ಅನುಕೂಲಕ್ಕಾಗಿ ಮತ್ತು ಸಮಗ್ರ ಅಭಿವೃದ್ಧಿಗಾಗಿ ಉತ್ತರ ಕರ್ನಾಟಕದ 15 ಜಿಲ್ಲೆಗಳಾದ- ಬೀದರ, ಕಲಬುರ್ಗಿ, ವಿಜಯಪುರ, ವಿಜಯನಗರ, ಬಳ್ಳಾರಿ, ದಾವಣಗರೆ ಜಿಲ್ಲೆಗಳ ಒಳಗೊಂಡ ಪ್ರತ್ಯೇಕ ರಾಜ್ಯ ರಚನೆಗೆ ಆಗ್ರಹಿಸಿ ಕಾಂಗ್ರೆಸ್ ಶಾಸಕ ರಾಜು ಕಾಗೆ ಪತ್ರ ಬರೆದಿದ್ದಾರೆ.
ಉತ್ತರ ಕರ್ನಾಟಕ ಭಾಗವು ಪ್ರತಿಯೊಂದು ವಲಯದಲ್ಲೂ ನಿರಂತರವಾಗಿ ಅನ್ಯಾಯ, ತಾರತಮ್ಯ ಮತ್ತು ನಿರ್ಲಕ್ಷ್ಯವನ್ನು ಎದುರಿಸುತ್ತಿದೆ. ಈ ಭಾಗದ 15 ಜಿಲ್ಲೆಗಳನ್ನು ಒಳಗೊಂಡ ಪ್ರತ್ಯೇಕ ರಾಜ್ಯ ರಚಿಸಬೇಕು ಎಂದು ಕಾಂಗ್ರೆಸ್ ಶಾಸಕ ಭರಮಗೌಡ (ರಾಜು) ಕಾಗೆ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಪ್ರಧಾನಿ ನರೇಂದ್ರ ಮೋದಿ, ರಾಜ್ಯಪಾಲರು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರ ಬರೆದಿದ್ದಾರೆ.

ಈ ಹಿಂದೆ ಮಾಜಿ ಸಚಿವರಾದ ಉಮೇಶ್ ಕತ್ತಿ ಅವರು ಪ್ರತ್ಯೇಕ ರಾಜ್ಯದ ಕುರಿತು ಧ್ವನಿ ಎತ್ತಿದ್ದರು. ಇದೀಗ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಬೇಕು ಎನ್ನುವ ಬೇಡಿಕೆಯನ್ನು ಮತ್ತೆ ರಾಜು ಕಾಗೆಯವರು ಮುನ್ನೆಲೆಗೆ ತಂದಿದ್ದಾರೆ. ಆ ಬೆನ್ನೆಲ್ಲೇ ರೊಚ್ಚಿಗೆದ್ದ ಉತ್ತರ ಕರ್ನಾಟಕ ಹೋರಾಟ ಸಮಿತಿ, ಉತ್ತರ ಕರ್ನಾಟಕ ವಿಕಾಸ ವೇದಿಕೆಯು ಚಳಿಗಾಲದ ಅಧಿವೇಶನದಲ್ಲಿ ಬೇಡಿಕೆಗಳನ್ನು ಈಡೇರಿಸದಿದ್ದರೆ ಸುವರ್ಣ ವಿಧಾನಸೌಧದ ಮೇಲೆ ಪ್ರತ್ಯೇಕ ರಾಜ್ಯದ ಧ್ವಜಾರೋಹಣದ ಎಚ್ಚರಿಕೆಯನ್ನು ಕೊಟ್ಟಿದ್ದಾರೆ.
ಇನ್ನೂ ಕಾಂಗ್ರೆಸ್ ಶಾಸಕರಾ ರಾಜು ಕಾಗೆ ಅವರು, ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ಉತ್ತರ ಕನ್ನಡ, ಹಾವೇರಿ, ವಿಜಯನಗರ, ಬಳ್ಳಾರಿ ಮತ್ತು ದಾವಣಗೆರೆಯನ್ನು ಒಳಗೊಂಡ 15 ಜಿಲ್ಲೆಗಳನ್ನು ಉತ್ತರ ಕರ್ನಾಟಕ ರಾಜ್ಯವನ್ನಾಗಿಸಲು ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಪ್ರಧಾನಿ ನರೇಂದ್ರ ಮೋದಿ, ರಾಜ್ಯಪಾಲರು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ನವೆಂಬರ್ 4 ರಂದು ಪತ್ರ ಬರೆದಿದ್ದಾರೆ.
ಅನೇಕ ಬಾರಿ ಅಭಿವೃದ್ಧಿ ವಿಚಾರದಲ್ಲಿ ಉತ್ತರ ಕರ್ನಾಟಕ ನಿರ್ಲಕ್ಷ್ಯಕ್ಕೆ ಒಳಗಾಗಿದೆ. ಹೀಗಾಗಿ ಈ ಭಾಗದ 15 ಜಿಲ್ಲೆಗಳನ್ನು ಒಳಗೊಂಡ ಪ್ರತ್ಯೇಕ ರಾಜ್ಯ ರಚಿಸಬೇಕು ಎಂದು ಉಲ್ಲೇಖಿಸಿ ಕಾಂಗ್ರೆಸ್ ಶಾಸಕ ಭರಮಗೌಡ (ರಾಜು) ಕಾಗೆ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಪ್ರಧಾನಿ ನರೇಂದ್ರ ಮೋದಿ, ರಾಜ್ಯಪಾಲರು ಹಾಗೂ ಸಿಎಂ ಸಿದ್ದರಾಮಯ್ಯನವರಿಗೆ ಪತ್ರ ಬರೆದಿದ್ದಾರೆ. ಕರ್ನಾಟಕ ಏಕೀಕರಣ ಆದಾಗಿನಿಂದ ಇಲ್ಲಿಯವರೆಗೂ ಎಲ್ಲ ಕ್ಷೇತ್ರಗಳಲ್ಲಿಯೂ ಈ ಭಾಗಕ್ಕೆ ನಿರಂತರವಾಗಿ ಅನ್ಯಾಯ. ತಾರತಮ್ಯ, ಮಲತಾಯಿ ಧೋರಣೆ ಆಗುತ್ತಲೆ ಬಂದಿದೆ.
ಪ್ರತ್ಯೇಕ ರಾಜ್ಯ ರಚನೆಯಿಂದ ಮತ್ತೊಂದು ಕನ್ನಡ ನಾಡು ನಿರ್ಮಾಣವಾಗುವುದು ನಮಗೆ ಹೆಮ್ಮೆಯ ವಿಷಯ. ಉತ್ತರ ಕರ್ನಾಟಕವು ಸರ್ವ ಸಂಪನ್ಮೂಲಗಳನ್ನು ಹೊಂದಿರುವ ಸದ್ಭುದ್ಧ ನಾಡಾಗಿದೆ. ಕನ್ನಡ ಭಾಷೆಯ ಉಳಿವಿಗೆ ಮತ್ತು ಕರ್ನಾಟಕ ಏರ್ಸೀಕರಣಕ್ಕೆ ವಿಶೇಷ ಕೊಡುಗೆಯನ್ನು ಕೊಟ್ಟ ನಾಡು ನಮ್ಮದು. ಉತ್ತರ ಕರ್ನಾಟಕ ಹೋರಾಟ ಸಮಿತಿ(ರಿ)ಯ ಜನಪ್ರತಿನಿದಿಗಳ ಸಹಿ ಸಂಗ್ರಹಣಾ ಅಭಿಯಾನಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ ಎಂದು ಪತ್ರದಲ್ಲಿ ರಾಜು ಕಾಗೆ ಅವರು ಬರೆದಿದ್ದಾರೆ.












Click it and Unblock the Notifications