ಎರಡು ದಿನಗಳಲ್ಲಿ ರಾಜೀನಾಮೆ ಎಂದ ಕಾಂಗ್ರೆಸ್ ಹಿರಿಯ ಶಾಸಕ
Raju Kage: ರಾಜ್ಯ ಕಾಂಗ್ರೆಸ್‌ನಲ್ಲಿ ಶಾಸಕರ ಅಸಮಧಾನ ಜೋರಾಗುತ್ತಿದೆ. ವಸತಿ ಯೋಜನೆಯಡಿ ಮನೆ ಹಂಚಿಕೆಯಲ್ಲಿ ಲಂಚ ಪಡೆದಿರುವ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶಾಸಕರು ಸರ್ಕಾರದ ವಿರುದ್ಧವೇ ಅಸಮಾಧಾನ ವ್ಯಕ್ತಪಡಿಸುತ್ತಿದ್ದು, ರಾಜೀನಾಮೆಯ ಅಸ್ತ್ರ ಪ್ರಯೋಗ ಮಾಡುತ್ತಿದ್ದಾರೆ. ಈ ನಡುವೆಯೇ ಇದೀಗ ರಾಜು ಕಾಗೆ ಅವರು ಇದೆ ಹಾದಿ ಹಿಡಿದು ಅಚ್ಚರಿ ಮೂಡಿಸಿದ್ದಾರೆ.
ಬೆಳಗಾವಿ ಜಿಲ್ಲೆ ಕಾಗವಾಡ ತಾಲೂಕಿನ ಐನಾಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಕಾಗವಾಡ ವಿಧಾನಸಭಾ ಕ್ಷೇತ್ರದ ಶಾಸಕ ರಾಜು ಕಾಗೆ ಅವರು, ನಮ್ಮ ಸರ್ಕಾರದಲ್ಲಿ ಯಾವುದೇ ಅಧಿಕಾರಿಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ. ಆಡಳಿತ ವ್ಯವಸ್ಥೆ ಸಂಪೂರ್ಣವಾಗಿ ಹಾಳಾಗಿದೆ. ಎರಡು ದಿನದಲ್ಲಿ ನಾನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ರಾಜೀನಾಮೆ ಕೊಟ್ಟರೂ ಯಾವುದೇ ಆಶ್ಚರ್ಯವಿಲ್ಲ ಎಂದು ಸ್ಪೋಟಕ ಹೇಳಿಕೆ ನೀಡಿದ್ದಾರೆ.

ರಾಜು ಕಾಗೆ ಅಸಮಧಾನ: ಹಣ ಕೊಟ್ಟವರಿಗೆ ಅಷ್ಟೇ ವಸತಿ ನಿಗಮದಲ್ಲಿ ಮನೆಗಳನ್ನು ಮಂಜೂರು ಮಾಡಲಾಗುತ್ತಿದೆ ಎಂದು ಹೇಳಿರುವ ಕಾಂಗ್ರೆಸ್ ಶಾಸಕ ಬಿ.ಆರ್ ಪಾಟೀಲ್ ಆಡಿಯೋ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಇದೀಗ ಮತ್ತೊಬ್ಬ ಕಾಂಗ್ರೆಸ್ ಶಾಸಕ ರಾಜು ಕಾಗೆ ಬಿ.ಆರ್.ಪಾಟೀಲ್ ಹೇಳಿದ್ದು ಸುಳ್ಳಲ್ಲ, ಅದು ನಿಜ ಎಂದು ಸರ್ಕಾರದ ವಿರುದ್ಧ ಅಸಮಾಧಾಣ ವ್ಯಕ್ತಪಡಿಸಿದ್ದಾರೆ.
25 ಕೋಟಿ ರೂಪಾಯಿ ಅನುದಾನ ನೀಡಿ 2 ವರ್ಷ ಕಳೆದರೂ ವರ್ಕ್ ಆರ್ಡರ್ ಇಲ್ಲ. ಎರಡು ವರ್ಷ ಕಳೆದರೂ ವರ್ಕ್ ಆರ್ಡರ್ ನೀಡುತ್ತಿಲ್ಲ ಅಂದರೆ ಏನು ಅರ್ಥ? ಇದರಿಂದ ನನ್ನ ಮನಸ್ಸಿಗೆ ತುಂಬಾ ನೋವಾಗಿದೆ. ನಾನು ಸಹ ಎರಡು ದಿನದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ರಾಜೀನಾಮೆ ನೀಡಿದರೂ ಆಶ್ಚರ್ಯ ಇಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಶಾಸಕ ರಾಜು ಕಾಗೆ ಅಸಮಾಧಾನ ವಿಚಾರಕ್ಕೆ ಬೆಳಗಾವಿಯಲ್ಲಿ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಪ್ರತಿಕ್ರಿಯಿಸಿ, ರಾಜೀನಾಮೆ ಕೊಡಬೇಕು ಎಂದು ಹೇಳಿದ್ದಾರೆ. ನೀವು ರಾಜೀನಾಮೆ ಕೊಡುವುದರಿಂದ ಈ ಸಮಸ್ಯೆ ಬಗೆಹರಿಯುವುದಿಲ್ಲ. ನಿಮ್ಮ ಮುಖ್ಯಮಂತ್ರಿ ಅವರನ್ನು ರಾಜೀನಾಮೆ ಕೊಡಿಸಿ. ಜನರ ಬಳಿ ಹೋಗೋಣ ಏನು ತೀರ್ಮಾನ ಆಗುತ್ತದೆಯೋ ನೋಡೋಣ. ಬಿಜೆಪಿಗೆ ಯಾರು ಬಂದರೂ ಸ್ವಾಗತ ಮಾಡುತ್ತೇವೆ ಎಂದು ಹೇಳಿದರು.
ಇನ್ನೂ ವಸತಿ ಸಚಿವರ ರಾಜೀನಾಮೆಗೆ ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ ಆಗ್ರಹ ವಿಚಾರಕ್ಕೆ ಪ್ರತಿಕ್ರಿಯಿಸಿ, ಅದು ನನಗೆ ಗೊತ್ತಿಲ್ಲ. ಯಾವ ಸನ್ನಿವೇಶದಲ್ಲಿ ಹೇಳಿದ್ದಾರೆಯೋ ಗೊತ್ತಿಲ್ಲ. ಅದರ ಬಗ್ಗೆ ತಿಳಿದುಕೊಂಡು ಮಾತನಾಡುತ್ತೇನೆ ಎಂದು ಹೇಳಿದರು.
ಇದೇ ವೇಳೆ ರಾಯಚೂರಿನಲ್ಲಿ ಆಯೋಜಿಸಿರುವ ಕಾರ್ಯಕ್ರಮಕ್ಕೆ ಬಿ.ಆರ್ ಪಾಟೀಲ್ ಅವರನ್ನ ಸಿಎಂ ಕರೆದರೂ ಬಂದಿಲ್ಲ ಎನ್ನುವ ವಿಚಾರದ ಬಗ್ಗೆ ಮಾತನಾಡಿ, ನಾನು ಅವರನ್ನು ಇಲ್ಲಿಗೆ ಕರೆದಿದ್ದೆ. ಆದರೆ ಅವರು ಆಯೋಜಕರು ನನ್ನನ್ನು ಕರೆದಿಲ್ಲ ಬರಲ್ಲ ಎಂದರು. ಜೂನ್ 25ಕ್ಕೆ ಭೇಟಿ ಮಾಡುತ್ತೇನೆ ಎಂದಿದ್ದಾರೆ ಎಂದು ಹೇಳಿದರು.
ಸಚಿವ ಹೆಚ್‌ಕೆ ಪಾಟೀಲ್ ಪತ್ರ ಬರೆದ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಅದು ನಮ್ಮ ಕಾಲದಲ್ಲಿ ನಡೆದಿಲ್ಲ. ವಿಶೇಷ ಕೋರ್ಟ್ ಮಾಡಿ ತ್ವರಿತಗತಿಯಲ್ಲಿ ಇತ್ಯರ್ಥ ಮಾಡಿ ಎಂದಿದ್ದಾರೆ. ಅಕ್ರಮ ಗಣಿಗಾರಿಗೆ ನಡೆಯುತ್ತಿರುವುದಕ್ಕಾಗಿ ಪಾದಯಾತ್ರೆ ಮಾಡಿದ್ದಾರೆ. ಲೋಕಾಯುಕ್ತ ಸಂತೋಷ್ ಹೆಗಡೆ ವರದಿ ಆಧರಿಸಿ ನಾನು ಅಸೆಂಬ್ಲಿ ಅಲ್ಲಿ ಪ್ರಸ್ತಾಪ ಮಾಡಿದ್ದೆ. ಆದರೆ ಅಂದಿನ ಸರ್ಕಾರದಿಂದ ಸರಿಯಾದ ಉತ್ತರ ಬರಲಿಲ್ಲ. ಆದ್ದರಿಂದ ನಡೆದುಕೊಂಡೇ ಬರುತ್ತೇನೆ ಎಂದು ಬಳ್ಳಾರಿಗೆ ಪಾದಯಾತ್ರೆ ಮಾಡಿದ್ದೆವು ಎಂದರು.












Click it and Unblock the Notifications