ಕಾಂಗ್ರೆಸ್ ಶಾಸಕ ವೈ.ಎನ್.ರುದ್ರೇಶ್‌ಗೌಡ ಅನಾರೋಗ್ಯದಿಂದ ವಿಧಿವಶ
ಬೆಂಗಳೂರು, ಮಾರ್ಚ್ 24: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಹಾನಸ ಜಿಲ್ಲೆ ಬೇಲೂರು ಕ್ಷೇತ್ರದ ಕಾಂಗ್ರೆಸ್ ಶಾಸಕ ವೈ.ಎನ್.ರುದ್ರೇಶ್‌ಗೌಡ ಅವರು ಇಂದು ವಿಧಿವಶರಾಗಿದ್ದಾರೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ
ಅನಾರೋಗ್ಯದ ಕಾರಣದಿಂದ ನಗರದ ವಿಕ್ರಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೈ.ಎನ್.ರುದ್ರೇಶ್‌ಗೌಡ ಅವರು ಚಿಕಿತ್ಸೆ ಫಲಕಾರಿಯಾಗದೆ ವಿಧಿವಶರಾಗಿದ್ದಾರೆ. ಈ ಹಿಂದೆಯೂ ಅವರು ಸಾಕಷ್ಟು ಬಾರಿ ಚಿಕಿತ್ಸೆಗೆ ಒಳಗಾಗಿದ್ದರು ಆದರೆ ಚಿಕಿತ್ಸೆ ಫಲಕಾರಿಯಾಗಲಿಲ್ಲ.
ಅನಾರೋಗ್ಯದ ನಿಮಿತ್ತ ನಿನ್ನೆ ನಡೆದ ರಾಜ್ಯಸಭಾ ಚುನಾವಣೆಯಲ್ಲೂ ಅವರು ಭಾಗವಹಿಸಿರಲಿಲ್ಲ, ನಿನ್ನೆ ಸಂಜೆ ಕೂಡಾ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ವಿಕ್ರಂ ಆಸ್ಪತ್ರೆಗೆ ಭೇಟಿ ನೀಡಿ ರುದ್ರೇಶ್‌ಗೌಡ ಅವರ ಆರೋಗ್ಯದ ಬಗ್ಗೆ ಮಾಹಿತಿ ಪಡೆದಿದ್ದರು.

30 ವರ್ಷಗಳಿಂದಲೂ ರಾಜಕೀಯ ಕ್ಷೇತ್ರದಲ್ಲಿದ್ದ ರುದ್ರೇಶ್‌ಗೌಡ ಅವರು ಜಿಲ್ಲಾ ಪಂಚಾಯಿತಿ ಸ್ಥಾನದಿಂದ ಪ್ರಥಮವಾಗಿ ಆಯ್ಕೆಯಾಗಿ ನಂತರ ಎರಡು ಬಾರಿ ವಿಧಾನಸಭೆ ಮತ್ತು ಒಂದು ಬಾರಿ ಲೋಕಸಭೆಗಳಿಗೂ ಚುನಾಯಿತರಾಗಿದ್ದರು. ಕಳೆದ ಚುನಾವಣೆಯಲ್ಲಿ ಜೆಡಿಎಸ್‌ನ ತಮ್ಮ ಸಮೀಪ ಪ್ರತಿಸ್ಪರ್ಧಿಯನ್ನು ಸೋಲಿಸಿ ಶಾಸಕರಾಗಿ ಗೆದ್ದು ಬಂದಿದ್ದರು.
ಜೆಡಿಎಸ್‌ನಿಂದ ರಾಜಕೀಯ ಪ್ರಾರಂಭಿಸಿದ ಅವರು ಜೆಡಿಎಸ್ ಪಕ್ಷದ ಮೂಲಕ ಲೋಕಸಭೆಗೆ ಆಯ್ಕೆ ಆಗಿದ್ದರು ಆ ನಂತರ 2004 ರಲ್ಲಿ ಜೆಡಿಎಸ್‌ಗೆ ರಾಜಿನಾಮೆ ನೀಡಿ ಕಾಂಗ್ರೆಸ್ ಸೇರ್ಪಡೆಗೊಂಡಿದ್ದರು. ಆ ನಂತರ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು.
ಕಾಫಿ ಪ್ಲಾಂಟರ್ ಆಗಿದ್ದ ರುದ್ರೇಶ್‌ಗೌಡ ಅವರು ಪತ್ರಿ ಕೀರ್ತನಾ ಮತ್ತು ಒಬ್ಬ ಮಗಳನ್ನು ಅಗಲಿದ್ದಾರೆ. ಅಂತಿಮ ದರ್ಶನ ವ್ಯವಸ್ಥೆ ಮತ್ತು ವಿಧಿ ವಿಧಾನಗಳ ಪೂರೈಕೆ ಬಗ್ಗೆ ಕುಟುಂಬಸ್ಥರು ನಿರ್ಧಾರ ಕೈಗೊಳ್ಳಲಿದ್ದಾರೆ.












Click it and Unblock the Notifications