ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬೆಂಗಳೂರಿಗೆ ಡಿಗ್ಗಿ, ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ

|
Google Oneindia Kannada News

ಬೆಂಗಳೂರು, ಸೆ.9 : ಕರ್ನಾಟಕ ಕಾಂಗ್ರೆಸ್‌ನಲ್ಲಿ ಸಂಪುಟ ವಿಸ್ತರಣೆ ಚಟುವಟಿಕೆ ಮತ್ತೆ ಗರಿಗೆದರಿದೆ. ದಸರಾವೊಳಗೆ ಸಂಪುಟ ಸೇರಲು ಶಾಸಕರು ಲಾಬಿ ಆರಂಭಿಸಿದ್ದಾರೆ. ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ಸೆ.11ರಂದು ಬೆಂಗಳೂರಿಗೆ ಆಗಮಿಸಲಿದ್ದು, ಶಾಸಕರು ಅವರನ್ನು ಭೇಟಿ ಮಾಡಲು ಸಿದ್ಧತೆ ಆರಂಭಿಸಿದ್ದಾರೆ.

ಕಳೆದ ವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವದೆಹಲಿಗೆ ತೆರಳಿದ್ದ ಸಂದರ್ಭದಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ವಿದೇಶ ಪ್ರವಾಸದಲ್ಲಿದ್ದರು. ಆದ್ದರಿಂದ ಅವರ ಬಳಿ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಮಾತುಕತೆ ನಡೆಸಲು ಸಾಧ್ಯವಾಗಿರಲಿಲ್ಲ. ಇದು ಶಾಸಕರಿಗೆ ನಿರಾಸೆ ಉಂಟು ಮಾಡಿತ್ತು.

Digvijay Singh

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಉಪಾಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ್ದ ಸಿದ್ದರಾಮಯ್ಯ ಉಪ ಚುನಾವಣೆ ಗೆಲುವಿನ ವರದಿ ನೀಡಿ ಮರಳಿದ್ದರು. ಸಚಿವ ಸಂಪುಟ ವಿಸ್ತರಣೆ ಬಗ್ಗೆ ಯಾವುದೇ ಚರ್ಚೆ ನಡೆಸಿಲ್ಲ, ಈ ಕುರಿತು ದಿಗ್ವಿಜಯ್ ಸಿಂಗ್ ಜೊತೆ ಮೊದಲು ಮಾತುಕತೆ ನಡೆಸಬೇಕು ಎಂದು ಹೇಳಿದ್ದರು. [ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ನಿರಾಸೆ ಮೂಡಿಸಿದ ಸಿಎಂ]

ಸದ್ಯ, ದಿಗ್ವಿಜಯ್ ಸಿಂಗ್ ವಿದೇಶ ಪ್ರವಾಸದಿಂದ ಮರಳಿದ್ದು, ಸೆ.11ರಂದು ಬೆಂಗಳೂರಿಗೆ ಆಗಮಿಸಲಿದ್ದಾರೆ ಎಂದು ತಿಳಿದುಬಂದಿದೆ. ಇದರಿಂದಾಗಿ ಸಂಪುಟ ಸೇರುವ ಕಸರತ್ತನ್ನು ಶಾಸಕರು ಪುನಃ ಆರಂಭಿಸಿದ್ದಾರೆ. ಸಂಪುಟದಲ್ಲಿ ನಾಲ್ಕು ಸ್ಥಾನಗಳು ಖಾಲಿ ಇದ್ದು, ಹತ್ತಕ್ಕೂ ಹೆಚ್ಚು ಶಾಸಕರು ಸ್ಥಾನ ಗಿಟ್ಟಿಸಲು ಕಸರತ್ತು ನಡೆಸುತ್ತಿದ್ದಾರೆ.

ಬೆಂಬಲಿಗರ ಪ್ರತಿಭಟನೆ : ಸಚಿವ ಸಂಪುಟ ವಿಸ್ತರಣೆಗೆ ವಿಳಂಬ ಮಾಡುತ್ತಿರುವ ಕಾಂಗ್ರೆಸ್ ನಾಯಕರ ಕ್ರಮವನ್ನು ಖಂಡಿಸಿ ಕೆಲವು ಕಾಂಗ್ರೆಸ್ ಕಾರ್ಯಕರ್ತರು ಮಂಗಳವಾರ ಕೆಪಿಸಿಸಿ ಕಚೇರಿ ಮುಂದೆ ಪ್ರತಿಭಟನೆ ನಡೆಸುತ್ತಿದ್ದಾರೆ. ಸಚಿವ ಸ್ಥಾನಕ್ಕಾಗಿ ತಮ್ಮ ಪಕ್ಷದ ನಾಯಕರ ವಿರುದ್ಧವೇ ಕಾರ್ಯಕರ್ತರು ತಿರುಗಿ ಬಿದ್ದಿದ್ದಾರೆ. [ದಸರಾ ನಂತರ ಸಚಿವ ಸಂಪುಟ ವಿಸ್ತರಣೆ]

ಸಂಪುಟ ಸೇರೋದು ಖಚಿತ : ಮಂಗಳವಾರ ವಿಧಾನಸೌಧದಲ್ಲಿ ಮಾತನಾಡಿದ ರಾಣೆಬೆನ್ನೂರು ಶಾಸಕ ಕೆ.ಬಿ.ಕೋಳಿವಾಡ ಅವರು, ದಸರಾಕ್ಕೊ ಮೊದಲು ಸಂಪುಟ ವಿಸ್ತರಣೆಯಾಗಲಿದೆ. ನಾನು ಸಚಿವ ಸಂಪುಟ ಸೇರುತ್ತೇನೆ ಎಂದು ಹೇಳಿದ್ದಾರೆ. ಯಾರಿಗೆ ಸಚಿವರಾಗುವ ಭಾಗ್ಯ?

English summary
AICC general secretary and in-charge of Karnataka Digvijay Singh will visit Bangalore on September 11. Congress MLAs lobbying for the posts of minister in CM Siddaramaiah cabinet.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X