ರಾಜಕೀಯ ನಿವೃತ್ತಿ ಘೋಷಿಸಿದ ಸೋಲಿಲ್ಲದ ಸರದಾರ ತನ್ವಿರ್ ಸೇಠ್; ಆತ್ಮಹತ್ಯೆಗೆ ಯತ್ನಿಸಿದ ಬೆಂಬಲಿಗ
ಚುನಾವಣೆ ಹತ್ತಿರವಾಗುತ್ತಿದ್ದಂತೆ ಕಾಂಗ್ರೆಸ್ ನಾಯಕರು ರಾಜಕೀಯ ನಿವೃತ್ತಿ ಘೋಷಿಸುತ್ತಿದ್ದಾರೆ.
ಮೈಸೂರು,ಫೆಬ್ರವರಿ28: ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜ್ಯ ರಾಜಕಾರಣದಲ್ಲಿ ಪಕ್ಷಾಂತರ ಪರ್ವ ಜೋರಾಗಿದೆ. ಈ ಚುನಾವಣೆಯ ಗೆಲುವು ಮೂರು ಪಕ್ಷಗಳಿಗೆ ಪ್ರತಿಷ್ಠೆಯ ಕಣವಾಗಿದ್ದು, ಕಾಂಗ್ರೆಸ್ ನ ಮುಸ್ಲಿಂ ಶಾಸಕ ತನ್ವಿರ್ ಸೇಠ್ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ.
ಚುನಾವಣಿ ಹೊಸ್ತಿಲಲ್ಲಿ ನರಸಿಂಹರಾಜ ಕ್ಷೇತ್ರದ ಶಾಸಕ, ಮಾಜಿ ಸಚಿವ ತನ್ನೀರ್ ಸೇಠ್ ರಾಜಕೀಯ ನಿವೃತ್ತಿಯನ್ನು ಘೋಷಣೆ ಮಾಡಿದ್ದಾರೆ. ತನ್ವಿರ್ ಸೇಠ್ ಅವರ ಈ ಹೇಳಿಕೆ ಕಾರ್ಯಕರ್ತರು, ಅಭಿಮಾನಿಗಳು ಸೇರಿದಂತೆ ಎಲ್ಲರಲ್ಲೂ ಅಚ್ಚರಿ ಮೂಡಿಸಿದೆ.

ಡಿಸೆಂಬರ್‌ನಲ್ಲಿಯೇ ನಾನು ಎಐಸಿಸಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರಿಗೆ ನಿವೃತ್ತಿ ಘೋಷಿತ ಪತ್ರವನ್ನು ನೀಡಿದ್ದೇ ಆದರೆ, ಅವರು ನಿರಾಕರಿಸಿದ್ದರೆಂದು ಎಂದು ತನ್ವಿರ್ ಸೇಠ್ ಹೇಳಿದ್ದಾರೆ.
ಇನ್ನೂ ರಾಜಕೀಯ ನಿವೃತ್ತಿಗೆ ಪ್ರಮುಖ ಕಾರಣವೇ ಅನಾರೋಗ್ಯ ಎಂದು ಹೇಳಿದ್ದಾರೆ ಎಂದು ತಿಳಿದು ಬಂದಿದೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರಿಗೆ ರಾಜಕೀಯ ನಿವೃತ್ತಿ ಬಗ್ಗೆ ತಿಳಿಸಿದ್ದರು. ಆಗ ಈ ಇಬ್ಬರು ನಾಯಕರೂ ಸಾರಾಸಗಟಾಗಿ ತಿರಸ್ಕರಿಸಿದ್ದು. ಈ ಬಾರಿ ಚುನಾವಣೆಯಲ್ಲಿ ನೀವೇ ಸ್ಪರ್ಧೆ ಮಾಡಿ ಎಂದು ಹೇಳಿದ್ದಾರೆ ಎನ್ನಲಾಗಿದೆ.
ನನ್ನ ಮೇಲೆ ಮಾರಣಾಂತಿಕ ಹಲ್ಲೆ ನಡೆದ ನಂತರ ಆರೋಗ್ಯ ಕ್ಷೀಣಿಸಿದೆ. ಹಾಗಾಗಿ ಮೊದಲಿನಷ್ಟು ಉತ್ಸಾಹದಿಂದ ಕೆಲಸ ಮಾಡಲು ನನ್ನಿಂದ ಆಗುತ್ತಿಲ್ಲ. ಜನರ ಕೆಲಸ ಮಾಡಲು ಆಗುವುದಿಲ್ಲ. ಈವರೆಗೂ ನನ್ನ ಸ್ಪರ್ಧೆ ವಿಚಾರದಲ್ಲಿ ವರಿಷ್ಠರು ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ಕಾರ್ಯಕರ್ತರ ಒತ್ತಡದ ಪರಿಣಾಮ ಟಿಕೆಟ್‌ಗಾಗಿ ಕೆಪಿಸಿಸಿಗೆ ಅರ್ಹಿ ಲ್ಲಿಸಿದೆ. ನಾನು ಚುನಾವಣೆಗೆ ಸ್ಪರ್ಧಿಸುವುದಿಲ್ಲ. ನಿಷ್ಠಾವಂತರ ಕಾಂಗ್ರೆಸ್ ಕಾರ್ಯಕರ್ತ ನಾನು. ನನ್ನ ಕುಟುಂಬದಿಂದ ಯಾರೂ ಚುನಾವಣೆಗೆ ನಿಲ್ಲುವುದಿಲ್ಲ. ಹಾಗಾಗಿ ಕುಟುಂಬದವರಿಗೆ ಟಿಕೆಟ್ ಕೊಡಿ ಎಂದೂ ಕೇಳಿಲ್ಲ. ವರಿಷ್ಠರು ಯಾರಿಗೆ ಟಿಕೆಟ ನೀಡಿದರೂ ಅವರ ಗೆಲುವಿಗಾಗಿ ಶ್ರಮಿಸುತ್ತೇನೆ ಎಂದು ತನ್ವೀರ್ ಸೇಠ್ ತಿಳಿಸಿದ್ದಾರೆ.
ಇನ್ನೂ ಶಾಸಕ ತನ್ವಿರ್ ಸೇಠ್ ರಾಜಕೀಯ ನಿವೃತ್ತಿ ಘೋಷಿಸಿ ಸುದ್ದಿ ತಿಳಿಯುತ್ತಿದ್ದದಂತೆ, ತನ್ವಿರ್ ಸೇಠ್ ಬೆಂಬಲಿಗರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಮುನೆ ಮುಂದೆ ಜಮಾಯಿಸಿದ್ದಾರೆ. ನಿವೃತ್ತಿ ಘೋಷಣೆ ನಿರ್ಧಾರದಿಂದ ಹಿಂದೆ ಸರಿಯುವಂತೆ ಒತ್ತಡ ಹೇರುತ್ತಿದ್ದಾರೆ. ನೂರಾರು ಕಾರ್ಯಕರ್ತರು ಮನೆ ಮುಂದೆ ಹಾಜರಿದ್ದು, ಎಲ್ಲರೂ ಈ ನಿರ್ಧಾರಕ್ಕೆ ತೀವ್ರ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.
ಈ ಬಾರಿ ನೀವು ಚುನಾವಣೆಗೆ ಸ್ಪರ್ಧೆ ಮಾಡುವಂತೆ ಅಭಿಮಾನಿಗಳ ಪಟ್ಟು ಹಿಡಿದಿದ್ದು, ಶಾಸಕರ ಮನೆ ಮುಂದೆ ಸೀಮೆ ಎಣ್ಣೆ ಸುರಿದುಕೊಂಡ ಅಭಿಮಾನಿಗಳು ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಇನ್ನೂ ಸ್ಥಳದಲ್ಲಿ ಬಿಗುವಿನ ವಾತಾವರಣ ಉಂಟಾಗಿದ್ದು, ಈ ವೇಳೆ ಸ್ಥಳಕ್ಕೆ ಉದಯಗಿರಿ ಪೊಲೀಸರು ಭೇಟಿ ನೀಡಿದ್ದಾರೆ.












Click it and Unblock the Notifications